‘ಥೈರಾಯ್ಡ್’ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಗುಡ್ ನ್ಯೂಸ್.

ಪ್ರಸ್ತುತ ದಿನಮಾನಗಳಲ್ಲಿ ಬಹುತೇಕರು ಥೈರಾಯ್ಡ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದರ ನಿಯಂತ್ರಣಕ್ಕಾಗಿ ಪ್ರತಿದಿನ ಮಾತ್ರೆ ಸೇವಿಸುವುದು ಅಗತ್ಯವಾಗಿದ್ದು, ಸಮಸ್ಯೆ ಉಲ್ಬಣಿಸಿದರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾಗುತ್ತದೆ. ಇದರ ಮಧ್ಯೆ ಕೃಷಿ ವಿಜ್ಞಾನಿಗಳು ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ.ಹೌದು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುವ ಹೊಸತಳಿಯ ‘ಅರ್ಕಾ ನಿಖಿತಾ’ ಎಂಬ ಹೆಸರಿನ ಹೈಬ್ರಿಡ್ ಬೆಂಡೆಕಾಯಿ, ಥೈರಾಯ್ಡ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ ಎಂದು ಹೇಳಲಾಗಿದೆ. ಇದನ್ನು ಈಗ ಹೆಸರಘಟ್ಟದ ಐ ಐ ಹೆಚ್ ಆರ್ ಆವರಣದಲ್ಲಿನ ರಾಷ್ಟ್ರೀಯ ತೋಟಗಾರಿಕೆ ಮೇಳದಲ್ಲಿ ಪ್ರದರ್ಶಿಸಲಾಗುತ್ತಿದೆ.100 ಗ್ರಾಂ ಒಣಗಿದ ಈ ಹೈಬ್ರಿಡ್ ಬೆಂಡೆಕಾಯಿಯಲ್ಲಿ 32 ಮೈಕ್ರೋ ಗ್ರಾಮಿನಷ್ಟು ಅಯೋಡೀನ್ ಅಂಶವಿರುತ್ತದೆ ಎಂದು ಹೇಳಲಾಗಿದ್ದು, ಜೊತೆಗೆ ಹೇರಳವಾದ ನಾರಿನಂಶ ಹೊಂದಿದೆ. ಅಲ್ಲದೆ ಕೆಂಪು ರಕ್ತಕಣ ವೃದ್ಧಿಸುವ ಗುಣವನ್ನು ಇದು ಹೊಂದಿದ್ದು, ನೆನಪಿನ ಶಕ್ತಿ ಹಾಗೂ ಕ್ಯಾನ್ಸರ್ ನಿಯಂತ್ರಣಕ್ಕೂ ಸಹಕಾರಿ ಎನ್ನಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಪ್ಪು ಹೆಸರಿನಲ್ಲಿ ಮಕ್ಕಳ ಚಿತ್ರೋತ್ಸವಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್,

Fri Feb 24 , 2023
ಮಕ್ಕಳ ಚಿತ್ರಕ್ಕೆ ವೇದಿಕೆ ಕಲ್ಪಿಸಿ ಕೊಡುವ ಉದ್ದೇಶದಿಂದ ‘ಉಲ್ಲಾಸ್ ಸ್ಕೂಲ್ ಆಫ್ ಸಿನಿಮಾಸ್’ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ’ವನ್ನು ಈ ವರ್ಷದಿಂದ ಆರಂಭಿಸಿದೆ. ಮೊದಲ ಚಲನಚಿತ್ರೋತ್ಸವವನ್ನು ‘ಅಪ್ಪು ಮಕ್ಕಳ ಚಿತ್ರೋತ್ಸವ’ ಎಂಬ ಟ್ಯಾಗ್ ಲೈನ್ ಅಡಿಯಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಣೆ ಮಾಡಲಾಗುತ್ತಿದ್ದು, ಅಶ್ವಿನಿ ಪುನೀತ್ ರಾಜ್ ಕುಮಾರ್ ಹಾಗೂ ಸಚಿವ ವಿ. ಸೋಮಣ್ಣ ‘ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳಚಲನಚಿತ್ರೋತ್ಸವ’ಕ್ಕೆ ಚಾಲನೆ ನೀಡುವ ಮೂಲಕ ಶುಭ ಹಾರೈಸಿದ್ದಾರೆ.’ಬೆಂಗಳೂರು ಅಂತರಾಷ್ಟ್ರೀಯ ಮಕ್ಕಳ […]

Advertisement

Wordpress Social Share Plugin powered by Ultimatelysocial