ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ ಆರೋಪಿಗೆ ಟಿಕೆಟ್ ಘೋಷಣೆ

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಗೆ SDPI ಟಿಕೆಟ್​ ಘೋಷಣೆ ಮಾಡಿದೆ. ಚುನಾವಣೆ ಹೊತ್ತಲ್ಲಿ ಎಸ್​ಡಿಪಿಐನ ಈ ವಿವಾದಾತ್ಮಕ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.

ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಶಾಫಿ ಬೆಳ್ಳಾರೆಗೆ ಟಿಕೆಟ್ ನಿಡೋದಾಗಿ ಎಸ್​ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಘೋಷಣೆ ಮಾಡಲಾಗಿದೆ.

ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್ ಈ ಘೋಷಣೆ ಮಾಡಿದ್ದಾರೆ.

ಶಾಫಿ ಬೆಳ್ಳಾರೆ ಎಸ್​ಡಿಪಿಐನ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಶಾಫಿ ಬೆಳ್ಳಾರೆಯನ್ನು NIA ಅಧಿಕಾರಿಗಳು ಬಂಧಿಸಿದ್ದಾರೆ. ಜೈಲಿನಿಂದಲೇ ಶಾಫಿ ಬೆಳ್ಳಾರೆ ಸ್ಪರ್ಧೆ ಮಾಡಲಿದ್ದಾನೆ ಎನ್ನಲಾಗುತ್ತಿದೆ. ಪ್ರವೀಣ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಶಾಫಿ ಬೆಳ್ಳಾರೆ ವಿರುದ್ಧ ನೇರ ಆರೋಪಗಳಿವೆ. ತನಿಖೆ ವೇಳೆ ಸಿಕ್ಕಿರುವ ಸೂಕ್ತ ಸಾಕ್ಷ್ಯಾಧಾರಗಳನ್ನು ಇಟ್ಟುಕೊಂಡು ಎನ್​ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಶಾಫಿ ಬೆಳ್ಳಾರೆ ಅನ್ನೋ ಆರೋಪಿ ಇಂದು ಜೈಲಲ್ಲಿ ಇದ್ದಾನೆ. ಹಿಂದೂ ನಾಯಕನನ್ನ ಕೊಂದವನಿಗೆ ಎಸ್​ಡಿಪಿಐ ಟಿಕೆಟ್ ಘೋಷಣೆ ಮಾಡಿದೆ. ಕೊಲೆ ಮಾಡುವ ಉದ್ದೇಶದಿಂದಲೇ ಈ ಘೋಷಣೆ ಮಾಡಿದ್ದಾರೆ. ಎಲೆಕ್ಷನ್ ಕಮಿಷನ್ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು. ಕೊಲೆ ಆರೋಪಿಯನ್ನ ಎಲೆಕ್ಷನ್​ಗೆ ನಿಲ್ಲಲು ಅನರ್ಹ ಮಾಡಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗ್ರಹಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಲೆಮಹದೇಶ್ವರ ಬೆಟ್ಟದಲ್ಲಿ ನಟ ದರ್ಶನ್ ಪೂಜೆ

Mon Feb 13 , 2023
ಚಾಮರಾಜನಗರ: ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ ತಮ್ಮ ಸ್ನೇಹಿತರ ಜೊತೆ ಇಂದು ಪ್ರಮುಖ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ವತಿಯಿಂದ ದರ್ಶನ್ ಅವರನ್ನು ಗೌರವಿಸಲಾಯಿತು. ಮುದ್ದು ಮಾದಪ್ಪನಿಗೆ ಪ್ರಾರ್ಥನೆ ಸಲ್ಲಿಸಿ ನಟ ದರ್ಶನ್ ಹಿಂತಿರುಗುವಾಗ ನೆಚ್ಚಿನ ನಟನನ್ನು ಕಾಣಲು ಬೆಟ್ಟಕ್ಕೆ ಬಂದಿದ್ದ ಭಕ್ತರು ಮುಗಿಬಿದ್ದರು. ಜನದಟ್ಟನೆ ಚದುರಿಸಲು ಪೊಲೀಸರು ಹರಸಾಹಸಪಟ್ಟರು. ಹುಟ್ಟುಹಬ್ಬಕ್ಕೆ 3 ದಿನ ಬಾಕಿ ಇರುವಾಗ […]

Advertisement

Wordpress Social Share Plugin powered by Ultimatelysocial