ಇಂದು ‘ತೋತಾಪುರಿ’ ಟ್ರೇಲರ್‌ ರಿಲೀಸ್‌;

ನವರಸ ನಾಯಕ ಜಗ್ಗೇಶ್‌ ನಟಿಸಿರುವ “ತೋತಾಪುರಿ’ ಸಿನಿಮಾದ ಟ್ರೇಲರ್‌ ಇಂದು ಬಿಡುಗಡೆಯಾಗುತ್ತಿದ್ದು, ನಟ ಕಿಚ್ಚ ಸುದೀಪ್‌ ಟ್ರೇಲರ್‌ ಬಿಡುಗಡೆ ಮಾಡಲಿದ್ದಾರೆ.

ಈಗಾಗಲೇ “ಬಾಗ್ಲು ತೆಗಿ ಮೇರಿ ಜಾನ್‌’ ಹಾಡಿನ ಮೂಲಕ ಸದ್ದು ಮಾಡುತ್ತಿರುವ ಈ ಚಿತ್ರದ ಟ್ರೇಲರ್‌ ಈಗ ಬಿಡುಗಡೆಯಾಗುತ್ತಿದ್ದು, ಸಿನಿಮಾದ ಮೇಲೆ ಸಾಕಷ್ಟು ನಿರೀಕ್ಷೆ ಇದೆ.

ಜಗ್ಗೇಶ್‌, ಧನಂಜಯ್‌ ಸೇರಿದಂತೆ ಇಡೀ ಚಿತ್ರತಂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದೆ.

ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು, ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಜಗ್ಗೇಶ್‌ ಹಾಗೂ ನಿರ್ದೇಶಕ ವಿಜಯಪ್ರಸಾದ್‌ ಕಾಂಬಿನೇಷನ್‌’ನಲ್ಲಿ ಈಗಾಗಲೇ “ನೀರ್‌ದೋಸೆ’ ಬಿಡುಗಡೆಯಾಗಿ ಸೂಪರ್‌ ಹಿಟ್‌ ಆಗಿದೆ. ಇದೇ ಜೋಡಿ ಈಗ “ತೋತಾಪುರಿ’ ಮೂಲಕ ಕಮಾಲ್‌ ಮಾಡಲು ಹೊರಟಿದೆ. ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದು, “ಬಾಗ್ಲು ತೆಗಿ ಮೇರಿ ಜಾನ್‌’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ನೂರೈವತ್ತು ಮಿಲಿಯನ್‌ಗೂ ಅಧಿಕ ಹಿಟ್ಸ್ ದಾಖಲಿಸಿ ಮುನ್ನುಗ್ಗುತ್ತಿದೆ.

ಜಗ್ಗೇಶ್‌ ಜೋಡಿಯಾಗಿ ಅದಿತಿ ಪ್ರಭುದೇವ ಇದ್ದಾರೆ. “ಡಾಲಿ’ ಧನಂಜಯ್, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌, ಹೇಮದತ್‌ ಮೊದಲಾದವರ ತಾರಾಗಣ ಈ ಚಿತ್ರದಲ್ಲಿದೆ. ಸುರೇಶ್‌ ಅರಸ್‌ ಸಂಕಲನ, ನಿರಂಜನ್‌ ಬಾಬು ಕ್ಯಾಮೆರಾ ಕೆಲಸ ಈ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿನ್ನದ ಬೆಲೆ 700 ರೂ. ಇಳಿಕೆ:

Thu Apr 21 , 2022
  ನವದೆಹಲಿ, ಏಪ್ರಿಲ್ 20: ಭಾರತದ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ಮುಂದುವರಿದಿದೆ. ಮಂಗಳವಾರ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಬುಧವಾರ ಭಾರಿ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ದರದಲ್ಲಿ 700 ರೂಪಾಯಿ ಇಳಿಕೆಯಾಗಿದೆ. ಅದೇ ರೀತಿ ಬೆಳ್ಳಿ ದರದಲ್ಲಿ 1,700 ರೂಪಾಯಿ ತಗ್ಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯು 49,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯ 53,620 ರೂಪಾಯಿ […]

Advertisement

Wordpress Social Share Plugin powered by Ultimatelysocial