5 ಸಾವಿರ ಜನರ ಮುಂದೆ ಟ್ರೈಲರ್ ಬಿಡುಗಡೆ!

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬಿ.ಎಸ್.ಲಿಂಗದೇವರು ನಿರ್ದೇಶನದಲ್ಲಿ ಮೂಡಿ ಬಂದಿರುವ, ಹಾನಗಲ್ಲ ಕುಮಾರಸ್ವಾಮಿಗಳ ಜೀವನವನ್ನು ಆಧರಿಸಿದ ‘ವಿರಾಟಪುರ ವಿರಾಗಿ’ ಸಿನಿಮಾದ ಟ್ರೈಲರ್ ಗದಗನಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗಿದೆ. ಈ ಟ್ರೈಲರ್ ಬಿಡುಗಡೆ ಸಮಾರಂಭಕ್ಕೆ ಐದು ಸಾವಿರಕ್ಕೂ ಹೆಚ್ಚು ಜನರು, ನಾಡಿನ ಅನೇಕ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಸಾಕ್ಷಿಯಾಗಿದ್ದು ವಿಶೇಷ.ಕಾರ್ಯಕ್ರಮಕ್ಕೂ ಮುನ್ನ 6 ರಥಗಳು ರಾಜ್ಯದ ವಿವಿಧ ಭಾಗಗಳಿಂದ ಹೊರಟು 7000 ಕಿಮೀ ಪ್ರಯಾಣ ಮಾಡಿ, 400ಕ್ಕೂ ಹೆಚ್ಚು ಸಭೆ ನಡೆಸಿ ಸುಮಾರು ಒಂದು ಕೋಟಿ ಜನರಿಗೆ ಹಾನಗಲ್ ಶ್ರೀಗಳು ಮತ್ತು ವಿರಾಟಪುರ ವಿರಾಗಿ ಸಿನಿಮಾ ಬಗ್ಗೆ ಜಾಗೃತಿ ಮೂಡಿಸಿ ಎರಡು ದಿನದ ಹಿಂದೆ ಗದಗದಲ್ಲಿ ಬಂದಿದ್ದ 6 ರಥಗಳನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ಸುಮಾರು 500ಕ್ಕೂ ಹೆಚ್ಚು ಮಹಿಳೆಯರು ಪೂರ್ಣ ಕುಂಬದಿಂದ ಸ್ವಾಗತ ಮಾಡಿದರೆ, ಜಾನಪದ ವಾದ್ಯ, ಕಲಾಮೇಳಗಳ ಮೆರವಣಿಗೆ ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತುಂಬಿತ್ತು.ವಿರಾಟಪುರ ವಿರಾಗಿ ಸಿನಿಮಾದ ಟ್ರೈಲರ್ ಅನ್ನು ಬಿಡುಗಡೆ ಮಾಡಿ ಮಾತನಾಡಿದ ಜನಪ್ರಿಯ ಯುವ ನಾಯಕ ಬಿ.ವೈ ವಿಜಯೇಂದ್ರ ‘ಇಂಥದ್ದೊಂದು ಸಿನಿಮಾ ಆಗಿದೆ ಎನ್ನುವುದೇ ನಮಗೊಂದು ಹೆಮ್ಮೆ. ಈ ಸಿನಿಮಾವನ್ನು ನಾವೆಲ್ಲರೂ ಗೆಲ್ಲಿಸಬೇಕು. ಟ್ರೈಲರ್ ನೋಡಿದ ಮೇಲೆ ಸಿನಿಮಾ ನೋಡಬೇಕು ಎನ್ನುವ ಕುತೂಹಲ ಇನ್ನೂ ಹೆಚ್ಚಾಗಿದೆ. ಅಪರೂಪದ ಸಿನಿಮಾ ಮಾಡಿರುವ ಬಿ.ಎಸ್.ಲಿಂಗದೇವರು ಮತ್ತು ಮೌನತಪಸ್ವಿ ಜಡೆಯ ಶಾಂತಲಿಂಗೇಶ್ವರ ಮಹಾಸ್ವಾಮಿಗಳಿಗೆ ನಾವೆಲ್ಲರೂ ಋಣಿಯಾಗಿರಬೇಕು’ ಎಂದರು.ಉಚಿತವಾಗಿ ಸಿನಿಮಾ ತೋರಿಸುವ ಭರವಸೆ.ವಿರಾಟಪುರ ವಿರಾಗಿ ಮೇಕಿಂಗ್ ಪುಸ್ತಕವನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಲೋಕೋಪಯೋಗಿ ಸಚಿವರಾದ ಸಿ.ಸಿ.ಪಾಟೀಲ್ ರಿಲೀಸ್ ಮಾಡಿ, ‘ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ ಆಧರಿತ ವಿರಾಟಪುರ ವಿರಾಗಿ ಸಿನಿಮಾ ವೀಕ್ಷಿಸಿ, ಯುವಕರು ವರ್ತನೆಗಳನ್ನು ತಿದ್ದುಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ವಾರ ಚಿತ್ರಮಂದಿರದಲ್ಲಿ ಉಚಿತವಾಗಿ ಸಿನಿಮಾ ವೀಕ್ಷಣೆ ಮಾಡಲು ಅವಕಾಶ ಕಲ್ಪಿಸಿಕೊಡಲಾಗುವುದು’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಹೊಸ ಪಕ್ಷ ಘೋಷಣೆ ಬೆನ್ನಲ್ಲೇ ಬಿಗ್​ ಶಾಕ್​!

Thu Jan 5 , 2023
ಬಿಜೆಪಿಯಿಂದ ಹೊರ ಬಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿ, ರಾಜ್ಯ ರಾಜಕೀಯದಲ್ಲಿ ಮಾಜಿ ಸಚಿವ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಸೆಕೆಂಡ್​ ಇನ್ಸಿಂಗ್​ ಆರಂಭಿಸಿದ್ದಾರೆ. ಈಗಾಗಲೇ ರಾಜಕೀಯ ಅಖಾಡಕ್ಕೂ ಧುಮಿಕಿದ್ದು, ಪಕ್ಷದ ಬಾವುಟವನ್ನು ಅನಾವರಣಗೊಳಿಸಿ, ಭರ್ಜರಿಯಾಗಿ ಚುನಾವಣಾ ತಯಾರಿಯನ್ನು ಮಾಡಿಕೊಳ್ತಿದ್ದಾರೆ ಇದರ ಮಧ್ಯೆ ನಾ ನಿನ್ನ ಬಿಡಲಾರೇ ಎಂಬಂತೆ ಸಿಬಿಐ ಗಣಿಧಣಿಗೆ ಬಿಗ್​ ಶಾಕ್​ ನೀಡಿದೆ.ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಲು ಕರ್ನಾಟಕ […]

Advertisement

Wordpress Social Share Plugin powered by Ultimatelysocial