ಜ. 24 ಸಾರಿಗೆ ನೌಕರರ ಧರಣಿ.

ವೇತನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸರ್ಕಾರದ ವಿರುದ್ಧ ನಾಳಿದ್ದು(ಜ.೨೪) ಸಾರಿಗೆ ನೌಕರರು ನಗರದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಂದು ದಿನ ಬಸ್ ಸಂಚಾರ ವ್ಯತ್ಯಯ ಸಾಧ್ಯತೆಯಿದೆ.
ರಾಜ್ಯ ಸರ್ಕಾರವು ೬ ವರ್ಷಗಳು ಕಳೆದರೂ ವೇತನ ಹೆಚ್ಚಳ ಮಾಡದಿರುವುದರಿಂದ ಸಿಡಿದೆದ್ದಿರುವ ಸಾರಿಗೆ ನೌಕರರು ಮತ್ತೆ ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಪ್ರತಿಭಟನೆಗೆ ಕೆ.ಎಸ್.ಆರ್.ಟಿ.ಸಿ ಸ್ಟಾಪ್ ಹಾಗೂ ವರ್ಕರ್ಸ್ ಫೆಡರೇಷನ್, ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಫೆಡರೇಷನ್, ಕೆಎಸ್‌ಆರ್ ಟಿಸಿ ಹಾಗೂ ಬಿಎಂಟಿಸಿ ಯುನೈಟೆಡ್ ಎಂಪ್ಲಾಯೀಸ್ ಯೂನಿಯನ್, ಕೆಎಸ್‌ಆರ್ ಟಿಸಿ ಹಾಗೂ ಎಸ್‌ಟಿ ಎಂಪ್ಲಾಯೀಸ್ ಯೂನಿಯನ್, ಕರಾರಸಾ ಸಂಸ್ಥೆ ಪ.ಜಾ ಪಂಗಡಗಳ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘಗಳು ಬೆಂಬಲವನ್ನು ನೀಡಿದ್ದಾರೆ.
ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ೪ ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್‌ನಲ್ಲಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಈ ವೇಳೆ ಸಾವಿರಾರು ನೌಕರರು ಧರಣಿ ಭಾಗಿಯಾಗುತ್ತಿರುವುದರಿಂದ ಬಸ್ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆಯಿದೆ.
ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ೨೦೨೧ರ ಏಪ್ರಿಲ್‌ನಲ್ಲಿ ನೌಕರರು ೧೫ ದಿನಗಳ ಕಾಲ ಮುಷ್ಕರ ನಡೆಸಿದ್ದರು. ಆದರೂ ಇಲ್ಲಿಯವರೆಗೆ ನೌಕರರ ಬೇಡಿಕೆ ಈಡೇರಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಮತ್ತೆ ಮಂಗಳವಾರ ಧರಣಿ ಸತ್ಯಾಗ್ರಹ ನಡೆಸಲು ಯೋಜನೆ ಮಾಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ .

Mon Jan 30 , 2023
ಧಾರವಾಡ : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ನಾಳೆ ರೈತ ಶಕ್ತಿ ಸೇರಿದಂತೆ ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೃಷಿ ಇಲಾಖೆಯ ಕ್ರೀಡಾಂಗಣ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ರೈತ ಶಕ್ತಿ ರಾಜ್ಯದ ಎಲ್ಲಾ ವರ್ಗದ ರೈತರಿಗೆ ಪ್ರತಿ ಎಕರೆಗೆ ರೂ. 250/- ಗಳಂತೆ ಗರಿಷ್ಠ 95 ಎಕರೆಗೆ ರೂ.1250/- ಗಳನ್ನು ಕೃಷಿ ಯಂತ್ರೋಪಕರಣಗಳ ಬಳಕೆಯ ಪ್ರೋತ್ಸಾಹಕ್ಕೆ ಹಾಗೂ ಇಂಧನ ವೆಚ್ಚದ […]

Advertisement

Wordpress Social Share Plugin powered by Ultimatelysocial