ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗಳ 4 ನೇ ವರ್ಷದ ಪುಣ್ಯಸ್ಮರಣೆ.

ತುಮಕೂರು: ಇಂದು ಶಿವಕುಮಾರ ಸ್ವಾಮೀಜಿಗಳ ನಾಲ್ಕನೇ ವರ್ಷದ ಪುಣ್ಯ ಸ್ಮರಣೆ ನಡೆಯಲಿದ್ದು, ತುಮಕೂರಿನ ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ ವಿಶೇಷ ಪೂಜೆ ನೆರವೇರಿಸಲಾಗುವುದು.

ಮಠದಲ್ಲಿ ಮಹಾರುದ್ರಾಭಿಷೇಕ, ಬಿಲ್ವಾರ್ಚನೆ, ವಿಶೇಷ ಪೂಜಾ ಕಾರ್ಯ ನಡೆಯಲಿದೆ.

ಬೆಳಿಗ್ಗೆ 8 ಗಂಟೆಗೆ ಬೆಳ್ಳಿ ರಥದಲ್ಲಿ ಪೂಜ್ಯರ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು. ಮೆರವಣಿಗೆಯಲ್ಲಿ ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು, ವಿವಿಧ ಮಠಗಳ ಮಠಾಧೀಶರು, ಕಲಾತಂಡಗಳು ಭಾಗಿಯಾಗಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಸಚಿವರು ಭಾಗಿಯಾಗಲಿದ್ದಾರೆ. ಪುಣ್ಯಸ್ಮರಣೆಯಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಭಾರತವನ್ನು ಹಿಮ್ಮೆಟ್ಟಿಸಲು ಅಸಾಧ್ಯ.

Sat Jan 21 , 2023
ಹೊಸದಿಲ್ಲಿ: ದೇಶದ ಭದ್ರತಾಸಂಸ್ಥೆಗಳು ತಮ್ಮ ಕಾರ್ಯವೈಖರಿಯಲ್ಲಿ ಪಾರಮ್ಯ ಮೆರೆದಿದ್ದು, ಇಂದಿಗೆ ಭಾರತವನ್ನು ಯಾರಿಗೂ ಹಿಂದಿಕ್ಕಲು ಸಾಧ್ಯವಾಗುತ್ತಿಲ್ಲ. ನಿರ್ಲಕ್ಷಿಸಲೂ ಕೂಡ ಆಸ್ಪದವಿಲ್ಲವೆಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಡಿಜಿಪಿ ಹಾಗೂ ಐಜಿಪಿಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಹಿಂದೆಂದಿಗಿಂತ ಸುರಕ್ಷಿತ, ಸದೃಢ ಹಾಗೂ ಉತ್ತಮ ಸ್ಥಾನದಲ್ಲಿದೆ ಎಂದಿದ್ದಾರೆ. ಅಲ್ಲದೇ, ಮೋದಿ ಅವರ ಆಡಳಿತದಲ್ಲಿ ಭದ್ರತಾ ಸಂಸ್ಥೆಗಳು ಸ್ವತಂತ್ರವಾಗಿದ್ದು, ದೇಶ ರಕ್ಷಣೆ, ಕಾನೂನು ಸುವ್ಯವಸ್ಥೆ […]

Advertisement

Wordpress Social Share Plugin powered by Ultimatelysocial