ಟ್ವಿಟರ್ ನಲ್ಲಿ ಅಪರೂಪದ ಸಾಧನೆ ಮಾಡಿದ ಸೂಪರ್ ಸ್ಟಾರ್ ಮಹೇಶ್ ಬಾಬು;

ಹೈದರಾಬಾದ್: ಸೂಪರ್ ಸ್ಟಾರ್ ಮಹೇಶ್ ಬಾಬು ಸಾಮಾಜಿಕ ಜಾಲತಾಣದಲ್ಲಿ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಇತ್ತೀಚಿಗೆ ಟ್ವೀಟರ್ ವೇದಿಕೆಯಲ್ಲಿ ಹೊಸ ದಾಖಲೆ ನಿರ್ಮಿಸುವುದರೊಂದಿಗೆ ಹೊಸ ವರ್ಷವನ್ನು ಪ್ರಾರಂಭಿಸಿದ್ದಾರೆ.

ಮಹೇಶ್ ಬಾಬು ತಮ್ಮ ಕುಟುಂಬದೊಂದಿಗೆ ದುಬೈನಲ್ಲಿ ಈ ಬಾರಿ ಹೊಸ ವರ್ಷವನ್ನು ಆಚರಿಸಿದ್ದಾರೆ.

ಈ ಸಂದರ್ಭದಲ್ಲಿ ಅವರು ತಮ್ಮ ಕುಟುಂಬದೊಂದಿಗೆ ಇರುವ ಫೋಟೋವನ್ನು ಟ್ವೀಟರ್ ನಲ್ಲಿ ಫೋಸ್ಟ್ ಮಾಡಿ ಎಲ್ಲಾ ಅಭಿಮಾನಿಗಳಿಗೆ ಶುಭ ಹಾರೈಸಿದ್ದರು. ಈ ಟ್ವೀಟ್ ಮೈಕ್ರೋಬ್ಲಾಗಿಂಗ್ ಸೈಟ್ ನಲ್ಲಿ ದಾಖಲೆ ಸಂಖ್ಯೆಯ ಲೈಕ್ ಗಳನ್ನು ಗಳಿಸುವ ಮೂಲಕ ಸಂಚಲನ ಸೃಷ್ಟಿಸಿದೆ.

ಮಹೇಶ್ ಬಾಬು ಒಂದು ಟ್ವೀಟ್ ಮಾಡಿದರೆ ಲಕ್ಷಕ್ಕೂ ಅಧಿಕ ಲೈಕ್ಸ್ ಬರುತ್ತವೆ. ಅವರು ಟ್ವೀಟ್ ಮಾಡಿದ ಕೆಲವೇ ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಲೈಕ್ ಗಳನ್ನು ಪಡೆದ 31ನೇ ಟ್ವೀಟ್ ನ್ನು ಹೊಸ ವರ್ಷದ ಸಂದರ್ಭದಲ್ಲಿ ಮಾಡಲಾಗಿದೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಈ ಅಪರೂಪದ ಸಾಧನೆ ಮಾಡಿದ ಏಕೈಕ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಮಹೇಶ್ ಬಾಬು ಪಾತ್ರರಾಗಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಕ್ತಿಗೆ ಒಲಿಯುವ ಬೆಟ್ಟದಪುರ ಏಣಿ ಹನುಮಂತರಾಯ

Sun Jan 2 , 2022
ಬೆಟ್ಟದಪುರ: ಮೈಸೂರಿನಿಂದ 84 ಕಿ.ಮೀ ದೂರವಿರುವ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನಸ್ವಾಮಿ ಬೆಟ್ಟ ಐತಿಹಾಸಿಕ ಹಿನ್ನೆಲೆ ಹೊಂದಿದ್ದು, ಈ ಬೆಟ್ಟದ ತಪ್ಪಲಿನಲ್ಲೇ ಇರುವ ಏಣಿ ಹನುಮಂತರಾಯ ದೇವಸ್ಥಾನ ಭಕ್ತರ ನೆಚ್ಚಿನ ತಾಣವಾಗಿದೆ. ಭಕ್ತಿಗೆ ಒಲಿಯುವ ಹನುಮಂತನೆಂದೇ ಪ್ರಸಿದ್ಧಿ ಪಡೆದಿದೆ. ಸಿಡಿಲು ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲೇ, ಬೆಟ್ಟದ ತಪ್ಪಲಿನ ಎಡಭಾಗಕ್ಕೆ ಕಾಲ್ನಡಿಗೆ ಯಲ್ಲಿ ತೆರಳಬೇಕು. ಬಲಭಾಗಕ್ಕೆ ಏಣಿ ಹನುಮಂತರಾಯ ದೇವಾಲಯವಿದ್ದು, 120 ಮೆಟ್ಟಿಲುಗಳನ್ನು ಏರಿ ದೇವಾಲಯಕ್ಕೆ ಪ್ರವೇಶ ಮಾಡಬಹುದು. […]

Advertisement

Wordpress Social Share Plugin powered by Ultimatelysocial