ಹೈಕೋರ್ಟ್‌ನ ಮಧ್ಯಂತರ ಆದೇಶ ಪಾಲನೆ ಮಾಡುವ ಮೂಲಕ ಶಾಂತಿ ಸುವ್ಯವಸ್ಥೆ ಕಾಪಾಡಬೇಕು’

ಮಸ್ಕಿ: ‘ಶಾಲಾ-ಕಾಲೇಜುಗಳಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶ ಪಾಲನೆ ಮಾಡುವ ಮೂಲಕ ಶಾಂತಿ ಸುವ್ಯವಸ್ಥೆ ಕಾಪಾಡಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖೀಲ್ ಬಿ. ಹೇಳಿದರು.ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ನಡೆದ ಮುಖಂಡರ ಹಾಗೂ ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿ,’ರಾಯಚೂರು ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಇದೆ.ಅದನ್ನು ಭಂಗ ಮಾಡುವ ಶಕ್ತಿಗಳಿಗೆ ಆಸ್ಪದ ಕೊಡಬಾರದು’ ಎಂದರು.ಶಿಕ್ಷಕರು ವಿದ್ಯಾರ್ಥಿಗಳಿಗೆ ಕಾನೂನು‌ ತಿಳವಳಿಕೆ ನೀಡಬೇಕು. ಸಾಮಾಜಿಕ ಜಾಲತಾಣಗಳ ಸುಳ್ಳು ಮಾಹಿತಿಗಳಿಗೆ ಯಾರೂ ಕಿವಿಗೊಡಬಾರದು. ಅಂಥ ಮಾಹಿತಿ ಬಂದರೆ ಕೂಡಲೇ ಸ್ಥಳೀಯ ಪೊಲೀಸರನ್ನು ಸಂಪರ್ಕಿಸಿ ಖಚಿತ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.’ಹೈಕೋರ್ಟ್ ಆದೇಶದ ಕಾರಣ ಕಂದಾಯ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಜಂಟಿಯಾಗಿ ಜಿಲ್ಲೆಯಾದ್ಯಂತ ಸಭೆಗಳನ್ನು ನಡೆಸಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.ತಹಶೀಲ್ದಾರ್ ಕವಿತಾ ಆರ್., ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ, ಡಾ. ಶಿವಶರಣಪ್ಪ ಇತ್ಲಿ, ಡಾ.ಬಿ.ಎಚ್. ದಿವಟರ್, ಸಿದ್ದಣ್ಣ ಹೂವಿನಭಾವಿ, ಅಬ್ದುಲ್ ಅಜೀಜ್ ಮುಖಂಡರು ಸಲಹೆ ಸೂಚನೆ ನೀಡಿದರು.ಸರ್ಕಲ್ ಇನ್‌ಸ್ಪೆಕ್ಟರ್ ಸಂಜೀವ ಕುಮಾರ, ಸಬ್ ಇನ್‌ಸ್ಪೆಕ್ಟರ್ ಸಿದ್ದರಾಮ ಬಿದರಾಣಿ ಸೇರಿದಂತೆ ವಿವಿಧ ಸಮಾಜದ ಮುಖಂಡರು, ಅಧಿಕಾರಿಗಳು ಹಾಗೂ ಶಾಲಾ-ಕಾಲೇಜುಗಳ ಪ್ರಾಚಾರ್ಯರು ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

DIRECTOR:"ನೆಲ್ಸನ್ ಅನ್ನಾ ತನ್ನ ಇಡೀ ಕುಟುಂಬದೊಂದಿಗೆ ಒಂದೇ ಮಲಗುವ ಕೋಣೆಯಲ್ಲಿ ವಾಸಿಸುತ್ತಿದ್ದನು"!!!

Sat Feb 12 , 2022
ಉದಯೋನ್ಮುಖ ನಟ ಕವಿನ್ ಅವರು ತಮ್ಮ “ಕಣಕಾಣು ಕಲಾಂಗಲ್” ದಿನಗಳಿಂದಲೂ ನಡೆಯುತ್ತಿರುವ ನಿರ್ದೇಶಕ ನೆಲ್ಸನ್ ದಿಲೀಪ್‌ಕುಮಾರ್ ಅವರೊಂದಿಗೆ ಕೆಲಸ ಮಾಡುತ್ತಿದ್ದಾರೆ, ಅವರು ತಮ್ಮ ಯೂಟ್ಯೂಬ್ ಚಾನೆಲ್ ವೇಸ್ಟ್ ಪೇಪರ್‌ಗಾಗಿ ನಿರ್ದೇಶಕ ಕಮ್ ನಟ ಮನೋಬಾಲಾ ಅವರೊಂದಿಗಿನ ಇತ್ತೀಚಿನ ಸಂದರ್ಶನದಲ್ಲಿ ಆರಂಭಿಕ ದಿನಗಳಲ್ಲಿ ಹೇಗೆ ಚರ್ಚೆ ನಡೆಸುತ್ತಿದ್ದರು ಎಂಬುದರ ಕುರಿತು ತೆರೆದಿಟ್ಟರು. ತಮ್ಮ ಮುಂದಿನ ಚಿತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ನಿರ್ದೇಶಿಸಲಿರುವ ನೆಲ್ಸನ್ ದಿಲೀಪ್‌ಕುಮಾರ್ ಅವರು ತಮ್ಮ ಜೀವನದ ಒಂದು […]

Advertisement

Wordpress Social Share Plugin powered by Ultimatelysocial