ರಾಜ್ಯಪಾಲ ಭಗತ್ ಸಿಂಗ್ ನಿರ್ಧಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

ಮುಂಬೈ, ಜುಲೈ 08: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ಮುಖ್ಯಮಂತ್ರಿ ಏಕನಾಥ್ ಶಿಂಧೆ ಅನ್ನು ಆಹ್ವಾನಿಸಿದ ರಾಜ್ಯಪಾಲ ಭಗತ್ ಸಿಂಗ್ ನಿರ್ಧಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.

ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ವಿಶ್ವಾಸಮತಯಾಚನೆಗಾಗಿ ಸೋಮವಾರದ ನಡೆಸಿದ ವಿಧಾನಸಭೆ ಕಲಾಪಗಳನ್ನೂ ಪ್ರಶ್ನಿಸಲಾಗಿದೆ. ಅನರ್ಹತೆ ಪ್ರಕ್ರಿಯೆ ಬಾಕಿಯಿರುವ 16 ಬಂಡಾಯ ಶಾಸಕರು ವಿಧಾನಸಭೆ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಿಲ್ಲ ಎಂದು ಠಾಕ್ರೆ ತಂಡವು ವಾದಿಸಿದೆ.

ಕಳೆದ ಜೂನ್ 28 ರಂದು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರವು ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸುವಂತೆ ಒತ್ತಾಯಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯಪಾಲರು ಆದೇಶ ಹೊರಡಿಸಿದರು. ಇದರಿಂದ ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವು ಅಲ್ಪಮತಕ್ಕೆ ಕುಸಿಯುವಂತೆ ಆಯಿತು ಎಂದು ಹೇಳಿಕೊಂಡಿದ್ದಾರೆ.

ರಾಜ್ಯಪಾಲರ ನಡೆ ಬಗ್ಗೆ ಸಂಜಯ್ ರಾವತ್ ಟೀಕೆ:

ಬಿಜೆಪಿ ನಾಯಕರು ಭೇಟಿಯಾದ ನಂತರಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ “ರಫೇಲ್‌ಗಿಂತ ವೇಗವಾಗಿ ಜೆಟ್ ವೇಗದಲ್ಲಿ ಕಾರ್ಯನಿರ್ವಹಿಸಿದರು”, ಎಂದು ಸಂಜಯ್ ರಾವತ್ ಟೀಕಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಸರ್ಕಾರಕ್ಕೆ ವಿಶ್ವಾಸ:

ಮಹಾರಾಷ್ಟ್ರದಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಬಾವುಟ ಹಾರಿಸಿದ್ದ ಸಿಎಂ ಏಕನಾಥ್ ಶಿಂಧೆ ತಮ್ಮ ಗುರಿ ತಲುಪುವಲ್ಲಿ ಯಶಸ್ವಿ ಆಗಿದ್ದಾರೆ.

ಕಳೆದ ಜೂನ್ 4ರ ಸೋಮವಾರ ವಿಶ್ವಾಸಮತಯಾಚನೆ ಪ್ರಕ್ರಿಯೆ ನಡೆಸಲಾಯಿತು. ರಾಜ್ಯದಲ್ಲಿ 288 ಸದಸ್ಯ ಬಲದ ವಿಧಾನಸಭೆಯಲ್ಲಿ ಒಬ್ಬ ಶಾಸಕರು ಮೃತಪಟ್ಟ ಹಿನ್ನೆಲೆ ಸದಸ್ಯರ ಬಲವನ್ನು 287ಕ್ಕೆ ಇಳಿಸಲಾಗಿತ್ತು. ಈ ಪೈಕಿ ಬಹುಮತಕ್ಕೆ 144 ಮತಗಳ ಅಗತ್ಯವಿದ್ದು, 164 ಶಾಸಕರು ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಮಂಡಿಸಿದ ವಿಶ್ವಾಸಮತ ಯಾಚನೆಗೆ ಪರವಾಗಿ ಮತ ಚಲಾಯಿಸಿದರು. 99 ಶಾಸಕರು ವಿಶ್ವಾಸಮತಯಾಚನೆಗೆ ವಿರುದ್ಧವಾಗಿ ಮತ ಚಲಾಯಿಸಿದ್ದು, ಆ ಮೂಲಕ ಒಟ್ಟು 263 ಶಾಸಕರು ಮತ ಚಲಾಯಿಸಿದರು. ಮೂವರು ಶಾಸಕರು ಗೈರಾಗಿದ್ದು, ಬಹುತೇಕ ಕಾಂಗ್ರೆಸ್ ಮತ್ತು ಎನ್‌ಸಿಪಿಯ 20 ಶಾಸಕರು ಮತದಾನದ ವೇಳೆ ಗೈರು ಹಾಜರಾಗಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್​ ಪ್ರಮಾಣ ವಚನ ಸ್ವೀಕರಿಸಿದ್ದಾರೆ

Fri Jul 8 , 2022
  ನವದೆಹಲಿ: ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್​ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಸಭೆಗೆ ಆಯ್ಕೆಯಾದ ನೂತನ ಸದಸ್ಯರು ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಇದೇ ವೇಳೆ ಜಗ್ಗೇಶ್​ ಅವರು ಕನ್ನಡದಲ್ಲಿಯೇ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಜಗ್ಗೇಶ್​ ಪ್ರಮಾಣವಚನ ಸ್ವೀಕರಿಸಿದ್ದು ಎಲ್ಲರ ಗಮನ ಸೆಳೆಯಿತು.ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್​​ಸಿಂಗ್ ಹಾಗೂ […]

Advertisement

Wordpress Social Share Plugin powered by Ultimatelysocial