ಉದ್ವಿಗ್ನಗೊಂಡಿದ್ದ ಆಳಂದದಲ್ಲಿ ನಿಷೇಧಾಜ್ಞೆ ವಿಸ್ತರಣೆ

 

ಕಲಬುರ್ಗಿ: ಕಲ್ಲು ತೂರಾಟ ಪ್ರಕರಣದ ಬೆನ್ನಲ್ಲೇ ಉದ್ವಿಗ್ನಗೊಂಡಿದ್ದ ಕಲಬುರ್ಗಿ ಜಿಲ್ಲೆಯ ಆಳಂದ ತಾಲೂಕಿನಲ್ಲಿ ನಿಷೇಧಾಜ್ಞೆ ವಿಸ್ತರಿಸಿ ಜಿಲ್ಲಾಧಿಕಾರಿ ಯಶವಂತ ಗುರುಕಾರ್ ಆದೇಶ ಹೊರಡಿಸಿದ್ದಾರೆ.

ಮಾರ್ಚ್ 6ವರೆಗೆ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಮುಂದುವರೆಸಲಾಗಿದ್ದು, ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.

ಶಾಂತಿ-ಸುವ್ಯವಸ್ಥೆಗೆ ಯಾವುದೇ ರೀತಿ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

 ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಆರಂಭವಾಗಿತ್ತಲ್ಲದೇ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕರು, ಜಿಲ್ಲಾಧಿಕಾರಿಗಳ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಪ್ರಕರಣ ಸಂಬಂಧ 165 ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಬಿ.ಕಾಂ ಪರೀಕ್ಷೆ'ಯಿಂದ 'ಡಿಬಾರ್' ಮಾಡಿದ್ರು ಅಂತ ಹೀಗೆ ಮಾಡಿಕೊಳ್ಳೋದಾ.?!

Sat Mar 5 , 2022
  ಬೆಂಗಳೂರು: ಕಾಲೇಜಿನಿಂದ ಡಿಬಾರ್ ಮಾಡಿದ್ರು ಎನ್ನುವಂತ ಒಂದೇ ಕಾರಣದಿಂದಾಗಿ ಮನನೊಂದು, ವಿದ್ಯಾರ್ಥಿನಿಯೊಬ್ಬಳು ತನ್ನ ಪಿಜಿಯ 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ, ಬೆಂಗಳೂರಿನ ಜೀವನ್ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೆಂಗಳೂರಿನ ಜೀವನ್ ಭೀಮಾನಗರದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಂತ ಭವ್ಯಳನ್ನು, ಪರೀಕ್ಷೆಯಲ್ಲಿ ಕಾಫಿ ಮಾಡಿದ ಕಾರಣಕ್ಕಾಗಿ, ಪರೀಕ್ಷೆಯಿಂದ ಡಿಬಾರ್ ಮಾಡಲಾಗಿತ್ತು.ಇದರಿಂದ ಮನನೊಂದ ಭವ್ಯ, ಅಕ್ಕನಿಗೆ ಕರೆ ಮಾಡಿ, ತನನ್ನು ಪರೀಕ್ಷೆಯಿಂದ […]

Related posts

Advertisement

Wordpress Social Share Plugin powered by Ultimatelysocial