ITI:ಉದ್ಯೋಗಕ್ಕಾಗಿ ಐಟಿಐ ವಿದ್ಯಾರ್ಥಿಗಳಿಂದ ನಕಲಿ ದಾಖಲೆ ಸಲ್ಲಿಕೆ;

 

ಬೆಂಗಳೂರು: ರಾಜ್ಯದ ವಿವಿಧ ಐಟಿಐಗಳಲ್ಲಿ ವ್ಯಾಸಂಗ ಮಾಡಿದ್ದ 91 ವಿದ್ಯಾರ್ಥಿಗಳು ಉದ್ಯೋಗಕ್ಕಾಗಿ ನಕಲಿ ದಾಖಲೆಗಳನ್ನು ಸಲ್ಲಿಸಿರುವುದು ದಾಖಲೆಗಳ ಪರಿಶೀಲನೆ ವೇಳೆ ದೃಢಪಟ್ಟಿದೆ.

ಈ ಸಂಬಂಧ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ಜಂಟಿ ನಿರ್ದೇಶಕ ಬಿ.ಎಲ್‌.ಚಂದ್ರಶೇಖರ್‌ ಅವರು ಇದೇ 23ರಂದು ನಗರದ ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

‘ರಾಜ್ಯದ ವಿವಿಧೆಡೆಯಲ್ಲಿರುವ ಸರ್ಕಾರಿ ಏಜೆನ್ಸಿಗಳ ಮೂಲಕ 2017-18ನೇ ಸಾಲಿನಲ್ಲಿ ಸಾವಿರಾರು ಮಂದಿ ಉದ್ಯೋಗ ಬಯಸಿ ಅರ್ಜಿಗಳನ್ನು ಸಲ್ಲಿಸಿದ್ದರು. ಇವುಗಳ ಪರಿಶೀಲನೆಗಾಗಿ 2017ರ ಸೆಪ್ಟೆಂಬರ್‌ 12, 2018ರ ಜನವರಿ 31 ಹಾಗೂ ಜೂನ್‌ 23 ರಂದು ಸಮಿತಿಗಳನ್ನು ರಚಿಸಲಾಗಿತ್ತು. ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಒಟ್ಟು 91 ಮಂದಿ ನಕಲಿ ದಾಖಲೆಗಳನ್ನು ನೀಡಿರುವುದನ್ನು ಪತ್ತೆಹಚ್ಚಿದೆ ಎಂದು ಅವರು ದೂರಿನಲ್ಲಿ ವಿವರಿಸಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

‘ಎಲ್ಲಾ ವಿದ್ಯಾರ್ಥಿಗಳಿಗೂ ಸಮನ್ಸ್‌ ನೀಡಲಾಗಿದೆ. ನಕಲಿ ದಾಖಲೆಗಳನ್ನು ಪಡೆದಿದ್ದು ಹೇಗೆ ಎಂಬುದರ ಕುರಿತು ವಿಚಾರಣೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ಚಳಿಗಾಲ | ಚರ್ಮದ ಆರೋಗ್ಯಕ್ಕೆ ಪೂರಕ ಆಹಾರ

Tue Dec 28 , 2021
= ಚಳಿಗಾಲದಲ್ಲಿ ಚರ್ಮದ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಚರ್ಮದ ಆರೋಗ್ಯ ರಕ್ಷಣೆಯಲ್ಲಿ ನಾವು ಸೇವಿಸುವ ಆಹಾರಕ್ರಮದ ಪಾತ್ರವೂ ದೊಡ್ಡದು. ಇದು ದೈಹಿಕಶಕ್ತಿ ಹಾಗೂ ಆರೋಗ್ಯದ ಮೇಲೆ ತುಂಬಾ ಪ್ರಭಾವ ಬೀರುತ್ತದೆ. ಅದರಲ್ಲೂ ಚಳಿಗಾಲದಲ್ಲಿ ದೇಹಕ್ಕೆ ಸೂಕ್ತ ಎನ್ನಿಸುವ ಆಹಾರ ಸೇವಿಸುವುದು ಬಹಳ ಅಗತ್ಯ. ಆರೋಗ್ಯಕರ ಆಹಾರ ಸೇವನೆ ಕೇವಲ ಚರ್ಮದ ಆರೋಗ್ಯ ಮಾತ್ರವಲ್ಲ ದೇಹತೂಕ ನಿಯಂತ್ರಣ, ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೂ ಸಹಕಾರಿ. ಇದು ಚರ್ಮವನ್ನು ಪುನರುಜ್ಜೀವನಗೊಳಿಸುವ […]

Advertisement

Wordpress Social Share Plugin powered by Ultimatelysocial