ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ಯುವಕ ಆತ್ಮಹತ್ಯೆಗೆ ಶರಣು…!

ಹೆಸ್ಕಾಂ ಲೈನ್ ಮನ್ ಆಗಿದ್ದ ತಿಮ್ಮಣ್ಣ ಗುರಡ್ಡಿ ( 27) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ…

ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣು ಎನ್ನುವ ಮಾಹಿತಿ…

ಅಮಲಝರಿ ಗ್ರಾಮದ ಹೊರವಲಯದ ಮುಧೋಳ ತಾಲೂಕಿನ ಮಂಟೂರ ವ್ಯಾಪ್ತಿಯ ತೋಟದ ಮನೆಯಲ್ಲಿ ಆತ್ಮಹತ್ಯೆ….

ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಅಮಲಝರಿ.ನಟ ರಮೇಶ್ ಅರವಿಂದ ನಡೆಸಿಕೊಡುತ್ತಿದ್ದ ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ.

ಎಸ್ಸೆಸ್ಸೆಲ್ಸಿ ಓದಿದ್ದ ತಿಮ್ಮಣ್ಣ ಕನ್ನಡದ ಕೋಟ್ಯಧಿಪತಿಯಲ್ಲಿ 6.40 ಲಕ್ಷ ರೂ. ಗೆದ್ದಿದ್ದ.ಟಿಕ್ ಟಾಕ್, ಹಾಸ್ಯ, ಸಂಗೀತದ ಮೂಲಕ ಅಭಿಮಾನಿಗಳನ್ನ ಹೊಂದಿದ್ದ.

ಖೋ ಖೋ ಕ್ರೀಡಾಪಟು ಸಹ ಆಗಿದ್ದ. ಮಕ್ಕಳಿಗೆ ತರಬೇತಿ ಕೊಡ್ತಿದ್ದ.ಅನಾರೋಗ್ಯದಿಂದ ಬಳಲುತ್ತಿದ್ದ ತಂದೆ ಚಿಕಿತ್ಸೆ.

ಹೊಸದಾಗಿ ಮನೆ ಕಟ್ಟಿಸಲು ದುಡಿದ ಹಣದ ಜೊತೆ ಸಾಲ ಮಾಡಿದ್ದ.ಸಾಲ ತೀರಿಸಲಾಗದೇ ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಂದು ಹೊಸಮನೆ ಗೃಹಪ್ರವೇಶ ಇತ್ತು.ತಿಮ್ಮಣ್ಣ ತಾನು ದುಡಿದ ಹಾಗೂ ಸಾಲ ಮಾಡಿಕೊಂಡ ನಿರ್ಮಿಸಿದ್ದ ಮನೆ.

18 ಲಕ್ಷ ರೂ. ಖರ್ಚು ಮಾಡಿ ಮನೆ ಕಟ್ಟಿಸಿದ್ದ.ಇಂದು (ಮೇ 5) ಗೃಹಪ್ರವೇಶ ಇಟ್ಟುಕೊಂಡಿದ್ದ.

ಗೃಹಪ್ರವೇಶಕ್ಕೆ ಬಬಲಾದಿ ಸ್ವಾಮೀಜಿಗೆ ಆವ್ಹಾನಿಸಿ ಬಂದಿದ್ದ.ಹೊಸಮನೆ ಪ್ರವೇಶಕ್ಕೂ ಮುನ್ನವೇ ಆತ್ಮಹತ್ಯೆಗೆ ಶರಣು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಮಂಗಳೂರು ನಗರ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ!

Thu May 5 , 2022
ರಸ್ತೆ ಅಪಘಾತವೊಂದರಲ್ಲಿ ಕಾರು ಚಾಲಕ ಮೃತಪಟ್ಟ ಘಟನೆ ಮಂಗಳೂರು ನಗರ ಹೊರವಲಯದ ರಾ.ಹೆ.75ರ ಅಡ್ಯಾರ್ ಕಣ್ಣೂರು ಬಳಿ ನಡೆದಿದೆ. ಮಂಜೇಶ್ವರ ಸಮೀಪದ ಕುಂಜತ್ತೂರು ನಿವಾಸಿ ಇಬ್ರಾಹೀಂ, ಮೃತಪಟ್ಟ ಕಾರು‌ ಚಾಲಕ. ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಅವರನ್ನು‌ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮೂವರು ಕಾರಿನಲ್ಲಿ ಕುಂಜತ್ತೂರಿನಿಂದ ಬಂಟ್ವಾಳ ರಸ್ತೆಯಾಗಿ ತೆರಳುತ್ತಿದ್ದರು. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ಕಾರಣ ಕಾರು ಡಿವೈಡರ್ ದಾಟಿ‌ದಾಗ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಂಟೈನರ್ ಢಿಕ್ಕಿ ಹೊಡೆದಿದೆ. […]

Advertisement

Wordpress Social Share Plugin powered by Ultimatelysocial