ಉಕ್ರೇನ್ ರಾಜಧಾನಿ ಕೀವ್ ಸನಿಹ 40 ಮೈಲಿ ಉದ್ದಕ್ಕೂ ಬೀಡುಬಿಟ್ಟಿದೆ ರಷ್ಯಾ ಸೇನೆ

ಕೀವ್: ಉಕ್ರೇನ್‌ ರಾಜಧಾನಿ ಕೀವ್‌ನಿಂದ ಉತ್ತರಕ್ಕೆ 40 ಮೈಲಿಯಷ್ಟು ದೂರದವರೆಗೆ ರಷ್ಯಾ ಪಡೆಗಳು ಬೀಡುಬಿಟ್ಟಿರುವುದು ಅಮೆರಿಕದ ‘ಮ್ಯಾಕ್ಸರ್ ಟೆಕ್ನಾಲಜೀಸ್’ ಕಂಪನಿಯ ಉಪಗ್ರಹ ಚಿತ್ರದಿಂದ ತಿಳಿದುಬಂದಿದೆ.

ರಷ್ಯಾ ಪಡೆಗಳು ಕೀವ್‌ನಿಂದ ಉತ್ತರಕ್ಕೆ 17 ಮೈಲಿ ದೂರದಿಂದ ಸುಮಾರು 40 ಮೈಲಿವರೆಗೆ ವ್ಯಾಪಿಸಿವೆ.

 

ಶಸ್ತ್ರಸಜ್ಜಿತ ವಾಹನಗಳು, ಟ್ಯಾಂಕ್‌ಗಳು, ಫಿರಂಗಿ, ಬೆಂಗಾವಲು ವಾಹನಗಳು ಇದರಲ್ಲಿ ಸೇರಿವೆ.

ದಕ್ಷಿಣ ಬೆಲರೂಸ್‌ನಲ್ಲಿ ಯುದ್ಧ ಹೆಲಿಕಾಪ್ಟರ್‌ಗಳನ್ನು ಮತ್ತು ಭೂಸೇನೆಯನ್ನು ನಿಯೋಜಿಸಿರುವುದೂ ಉಪಗ್ರಹ ಚಿತ್ರದಿಂದ ಗೊತ್ತಾಗಿದೆ.

ಈ ಮಧ್ಯೆ, ಉಕ್ರೇನ್‌ನ ನಗರ ಹಾರ್ಕಿವ್ ಮೇಲೆ ಮಂಗಳವಾರ ಬೆಳಿಗ್ಗೆ ರಷ್ಯಾ ಶೆಲ್ ದಾಳಿ ನಡೆಸಿದೆ. ಎರಡೂ ದೇಶಗಳ ನಡುವೆ ಸೋಮವಾರ ನಡೆದ ಮಾತುಕತೆ ಫಲಪ್ರದವಾಗಿಲ್ಲ. ಇದರ ಬೆನ್ನಲ್ಲೇ ರಷ್ಯಾ ದಾಳಿ ಮುಂದುವರಿಸಿದೆ. ರಷ್ಯಾ ವಿರುದ್ಧ ಅಂತರರಾಷ್ಟ್ರೀಯ ಸಮುದಾಯದಿಂದ ಕಠಿಣ ನಿರ್ಬಂಧ ಕ್ರಮಗಳು ಮುಂದುವರಿದಿವೆ.

ಅಂತರರಾಷ್ಟ್ರೀಯ ಫುಟ್‌ಬಾಲ್‌ನ ಜಾಗತಿಕ ಮಂಡಳಿಯಾಗಿರುವ ಫಿಫಾ, ರಷ್ಯಾವನ್ನು ಒಕ್ಕೂಟದಿಂದ ಹೊರಹಾಕಿದೆ. ಈ ವರ್ಷ ಕತಾರ್‌ನಲ್ಲಿ ಆಯೋಜನೆಯಾಗಲಿರುವ ವಿಶ್ವಕಪ್‌ ಟೂರ್ನಿಗೆ ನಡೆಯುವ ಅರ್ಹತಾ ಪಂದ್ಯಗಳಿಂದಲೂ ರಷ್ಯಾದ ತಂಡಗಳನ್ನು ಬಹಿಷ್ಕರಿಸಲಾಗಿದೆ. ರಷ್ಯಾ ಹಾಗೂ ಅದರ ಮಿತ್ರ ರಾಷ್ಟ್ರ ಬೆಲರೂಸ್‌ ಅನ್ನು ಅಂತರರಾಷ್ಟ್ರೀಯ ರಗ್ಬಿ ಕ್ರೀಡೆಯಿಂದ ಅಮಾನತು ಮಾಡಲಾಗಿದೆ ಎಂದು ವಿಶ್ವ ರಗ್ಬಿ ಒಕ್ಕೂಟ (ವರ್ಲ್ಡ್‌ ರಗ್ಬಿ) ಪ್ರಕಟಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೀದರ್-ಯಶವಂತಪುರ ರೈಲು ಕಲಬುರಗಿ ಮಾರ್ಗವಾಗಿ ಸಂಚಾರ

Tue Mar 1 , 2022
ಭಾಗದ ಜನರ ಬಹುದಿನಗಳ ಬೇಡಿಕೆಗೆ ರೈಲ್ವೆ ಇಲಾಖೆ ಒಪ್ಪಿಗೆ ನೀಡಿದೆ. ವಾರದಲ್ಲಿ ನಾಲ್ಕು ದಿನ ಸಂಚಾರ ನಡೆಸುವ ಬೀದರ್-ಯಶವಂತಪುರ ರೈಲು ಕಲಬುರಗಿ ಮಾರ್ಗವಾಗಿ ಸಂಚಾರ ನಡೆಸಲಿದೆ.ಬೀದರ್ ಸಂಸದ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಈ ಕುರಿತು ಮಾಹಿತಿ ನೀಡಿದ್ದಾರೆ. ‘ಬೀದರ್-ಯಶವಂತಪುರ ರೈಲು ಕಲಬುರಗಿ ಮಾರ್ಗವಾಗಿ ಚಲಿಸಬೇಕೆನ್ನುವುದು ನನ್ನ ಕ್ಷೇತ್ರದ ಜನತೆಯ ಕನಸಾಗಿತ್ತು” ಎಂದು ಹೇಳಿದ್ದಾರೆ.ಕಲಬುರಗಿ ಮೂಲಕ ಬೀದರ್-ಯಶವಂತಪುರ ರೈಲು ಸಂಚಾರ ನಡೆಸಲು […]

Advertisement

Wordpress Social Share Plugin powered by Ultimatelysocial