ʼಉಕ್ರೇನ್ ಸಂಘರ್ಷʼಕ್ಕೆ ಸಂಬಂಧಿಸಿ “ನಕಲಿ ಸುದ್ದಿ ಹರಡುವ ಫೇಸ್‌ಬುಕ್ & ಟ್ವಿಟರ್” ನಿಷೇಧ

ಮಾಸ್ಕೊ: ಉಕ್ರೇನ್ ಸಂಘರ್ಷಕ್ಕೆ ಸಂಬಂಧಿಸಿದಂತೆ ತಾರತಮ್ಯ ತೋರಿದೆ ಎಂದು ಆರೋಪಿಸಿರುವ ರಷ್ಯಾದ ಮಾಧ್ಯಮ ನಿಯಂತ್ರಕ (Roskomnadzor), ಫೇಸ್‌ಬುಕ್ ಹಾಗೂ ಟ್ವಿಟರ್ ಮೇಲೆ ನಿಷೇಧ ಹೇರಿದೆ. ಇದರ ಜೊತೆಗೆ ಬಿಬಿಸಿ, ಆಯಪಲ್ ಹಾಗೂ ಗೂಗಲ್ ಆಯಪ್ ಸ್ಟೋರ್‌ಗಳ ಮೇಲೂ ನಿರ್ಬಂಧ ಹೇರಲಾಗಿದೆ.ಉಕ್ರೇನ್ ಸಂಘರ್ಷದ ವರದಿಗೆ ಸಂಬಂಧಿಸಿದಂತೆ ರಷ್ಯಾ ಮಾಧ್ಯಮಗಳ ಮೇಲೆ ಫೇಸ್‌ಬುಕ್ ಹಾಗೂ ಟ್ವಿಟರ್ ನಿರ್ಬಂಧವನ್ನು ಹೇರಿತ್ತು. ಈ ತಾರತಮ್ಯ ಧೋರಣೆಯನ್ನು ಖಂಡಿಸಿರುವ ರಷ್ಯಾ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ2020 ಅಕ್ಟೋಬರ್‌ನಿಂದ ರಷ್ಯಾದ ಮಾಧ್ಯಮಗಳ ಮೇಲೆ ನಿರ್ಬಂಧಕ್ಕೆ ಸಂಬಂಧಿಸಿದಂತೆ 26 ಪ್ರಕರಣ ಫೇಸ್‌ಬುಕ್ ದಾಖಲಿಸಿದೆ. ಆರ್‌ಟಿ ಮತ್ತು ಆರ್‌ಐಎ ನ್ಯೂಸ್ ಏಜೆನ್ಸಿ ಮೇಲಿನ ಇತ್ತೀಚಿನ ನಿರ್ಬಂಧಗಳು ಇದು ಒಳಗೊಂಡಿವೆ ಎಂದು ಹೇಳಿದೆ.ಈ ನಡುವೆ ಫೇಸ್‌ಬುಕ್ ಮೇಲಿನ ನಿರ್ಬಂಧ ತೆರವುಗೊಳಿಸಲು ಎಲ್ಲ ಪ್ರಯತ್ನ ಮಾಡಲಾಗುತ್ತದೆ ಎಂದು ಮೆಟಾ ಅಧ್ಯಕ್ಷ ನಿಕ್ ಕ್ಲೆಗ್ ತಿಳಿಸಿದ್ದಾರೆ.ಇದಕ್ಕೆ ಸಮಾನವಾಗಿ ಟ್ವಿಟರ್ ಮೇಲೂ ರಷ್ಯಾ ನಿಷೇಧ ಹೇರಿದೆ. ಉಕ್ರೇನ್ ಯುದ್ಧಕ್ಕೆ ಸಂಬಂಧಪಟ್ಟಂತೆ ನಕಲಿ ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಆದೇಶಿಸಿದ್ದಾರೆ. ಯುದ್ಧದ ಕುರಿತಾಗಿ ರಷ್ಯಾದ ವಿರುದ್ಧ ತಪ್ಪು ಮಾಹಿತಿ ನೀಡಿದವರಿಗೆ 15 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಕಾನೂನಿಗೆ ಸಹಿ ಹಾಕಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಲು ಉತ್ಪಾದಕರು, ಕುರಿಗಾಹಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್

Sat Mar 5 , 2022
  ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ನಲ್ಲಿ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸುವ ಬಗ್ಗೆ ಮಹತ್ವದ ಘೋಷಣೆ ಮಾಡಲಾಗಿದೆ.ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಕಲ್ಪಿಸಲು ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮತ್ತು ಗೋವು ಉತ್ಪನ್ನಗಳ ಮಾರಾಟಕ್ಕೆ ಗೋ ಮಾತಾ ಸಹಕಾರ ಸಂಘ ಸ್ಥಾಪನೆ ಮಾಡುವುದಾಗಿ ಘೋಷಿಸಲಾಗಿದೆ.ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕಿಗೆ ಕೆಎಂಎಫ್ ಮತ್ತು ಜಿಲ್ಲಾ ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ […]

Advertisement

Wordpress Social Share Plugin powered by Ultimatelysocial