ಉಕ್ರೇನ್ ನಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ನವೀನ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ

ಹಾವೇರಿ : ಉಕ್ರೇನ್ ನಲ್ಲಿ ಸಾವನ್ನಪ್ಪಿದ ರಾಣೆಬೆನ್ನೂರು ತಾಲೂಕಿನ ಚಳಗೇರಿಯ ನವೀನ್ ಮನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಜಿಲ್ಲೆಯ ಹಿರೇಕೆರೂರು ಹಾಗೂ ರಾಣೇಬೆನ್ನೂರು ತಾಲೂಕಿನಲ್ಲಿ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಇಂದು ಮಧ್ಯಾಹ್ನ 2-15ಕ್ಕೆ ಶಿಕಾರಿಪುರ ಹೆಲಿಪ್ಯಾಡ್‍ನಿಂದ ಹೊರಟು, ಮ.2-30ಕ್ಕೆ ಹಿರೇಕೆರೂರು ತಾಲೂಕು ಬಸರಿಹಳ್ಳಿ ಹೆಲಿಪ್ಯಾಡ್‍ಗೆ ಆಗಮಿಸುವರು. ಹಿರೇಕೆರೂರು ಪಟ್ಟಣದಲ್ಲಿ ಆಯೋಜಿಸಿರುವ ಸೂಪರ್ ಸ್ಟಾರ್ ‘ರೈತ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವರು.ಮಧ್ಯಾಹ್ನ 3-30ಕ್ಕೆ ಬಸರಿಹಳ್ಳಿ ಹೆಲಿಪ್ಯಾಡ್‍ನಿಂದ ಹೊರಟು 3-55ಕ್ಕೆ ರಾಣೇಬೆನ್ನೂರು ತಾಲೂಕು ಎಪಿಎಂಸಿ ಹೆಲಿಪ್ಯಾಡ್‍ಗೆ ಆಗಮಿಸುವರು. ಸಂಜೆ 4-15ಕ್ಕೆ ಚಳಗೇರಿ ಗ್ರಾಮಕ್ಕೆ ತೆರಳಿ ಇತ್ತೀಚೆಗೆ ಉಕ್ರೇನ್‍ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ್ ಗ್ಯಾನಗೌಡರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ. ಸಂಜೆ 4-55ಕ್ಕೆ ರಾಣೇಬೆನ್ನೂರು ಎಪಿಎಂಸಿ ಹೆಲಿಪ್ಯಾಡ್‍ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಹುಟ್ಟುವುದಿಲ್ಲ: ನೋವು ತೋಡಿಕೊಂಡ ನಟಿ ರಶ್ಮಿಕಾ ಮಂದಣ್ಣ

Sat Mar 5 , 2022
  ನವದೆಹಲಿ: ಸ್ಯಾಂಡಲ್​ವುಡ್​ ಬ್ಯೂಟಿ ರಶ್ಮಿಕಾ ಮಂದಣ್ಣ ಅವರು ಸ್ಟಾರ್ ಹೀರೋಯಿನ್​ ಎಂಬ ಪಟ್ಟವನ್ನು ಸದ್ಯ ಸಖತ್​ ಎಂಜಾಯ್​ ಮಾಡುತ್ತಿದ್ದಾರೆ. ಒಳ್ಳೆಯ ಹೆಸರು ಮತ್ತು ಖ್ಯಾತಿಯ ಹೊರತಾಗಿಯೂ ಮುಂದಿನ ಜನ್ಮದಲ್ಲಿ ಹೆಣ್ಣಾಗಿ ಹುಟ್ಟಲು ರಶ್ಮಿಕಾಗೆ ಇಷ್ಟವಿಲ್ಲವಂತೆ.   ಅದಕ್ಕೆ ಕಾರಣವನ್ನು ರಶ್ಮಿಕಾ ನೀಡಿದ್ದು, ಅದನ್ನು ತಿಳಿಯಲು ಮುಂದೆ ಓದಿ. ‘ಆಡವಾಳು ಮೀಕು ಜೊಹ್ರಾಲು’ ಹೆಸರಿನ ತೆಲುಗು ಚಿತ್ರ ನಿನ್ನೆಯಷ್ಟೇ ಬಿಡುಗಡೆಯಾಗಿದೆ. ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿದ್ದು, ಶರ್ವಾನಂದ ನಾಯಕರಾಗಿದ್ದಾರೆ. ಚಿತ್ರದ ಪ್ರಚಾರದ ಭಾಗವಾಗಿ […]

Advertisement

Wordpress Social Share Plugin powered by Ultimatelysocial