ಮೇ 1, 2 ರಂದು ದೇವನಹಳ್ಳಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮ!

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿಎಂ ಇಬ್ರಾಹಿಂ ಭಾಗಿ

ಕೇಂದ್ರ ಸರ್ಕಾರದ ವಿರುದ್ಧ ಶಾಸಕ ನಾರಾಯಣಸ್ವಾಮಿ ವಾಗ್ದಾಳಿ

ಆಂಕರ್: ಮೇ 1 ಹಾಗೂ 2 ರಂದು ದೇವನಹಳ್ಳಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಿಎಂ ಇಬ್ರಾಹಿಂ ಸೇರಿದಂತೆ ಹಲವು ಮುಖಂಡರು ಭಾಗಿಯಾಗಲಿದ್ದಾರೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ತಿಳಿಸಿದ್ರು..

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ತಾಲ್ಲೂಕಿನಲ್ಲಿ ಜೆಡಿಎಸ್ ಭವನದಲ್ಲಿ ನಡೆದ ಜನತಾ ಜಲಧಾರೆ ಕಾರ್ಯಕ್ರಮದ ಪೂರ್ವಭಾವಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೇ 1 ಹಾಗೂ 2ರಂದು ನಡೆಯಲಿರುವ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಸೇರಿದಂತೆ ರಾಜ್ಯಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಇದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜನತೆ ಪೂರ್ಣ ಬಹುಮತ ಕೊಟ್ಟು ಆಶೀರ್ವಾದಿಸಿದರೆ ಇಡೀ ರಾಜ್ಯದಲ್ಲಿ ನದಿ ನೀರು ಪೋಲಾಗದಂತೆ ಅದನ್ನು ಸಂಗ್ರಹಿಸಿ ಉತ್ತಮವಾದ ನೀರನ್ನು ಪೂರೈಸುವ ಯೋಜನೆ ರೂಪಿಸಿ ಮನೆಮನೆಗೆ ಕೊಳಾಯಿ ನೀರಿನ ಯೋಜನೆ ಜಾರಿಗೆ ತರುತ್ತೇವೆ.. ನಮ್ಮ ರಾಷ್ಟ್ರೀಯ ನಾಯಕರಾದ ಎಚ್ ಡಿ ದೇವೇಗೌಡ ಮತ್ತು ಕುಮಾರಸ್ವಾಮಿರವರು ರಾಜ್ಯದಲ್ಲಿನ ನೀರಿನ ಸಮಸ್ಯೆ ಸೇರಿದಂತೆ ಹಲವಾರು ಜ್ವಲಂತ ಸಮಸ್ಯೆಗಳ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ.. ಇದಕ್ಕಾಗಿ ಜನತಾ ಜಲಧಾರೆ ಕಾರ್ಯಕ್ರಮ ನಡೆಯುತ್ತಿದ್ದು ತಾಲ್ಲೂಕಿನ ಎಲ್ಲಾ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮದವನ್ನು ಯಶಸ್ವಿಗೊಳಿಸಲು ಮನವಿ ಮಾಡಿದರು..

ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ವಾಗ್ದಾಳಿ:ಎತ್ತಿನಹೊಳೆ ಯೋಜನೆಯ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ;

ಇದುವರೆಗೂ ಆಡಳಿತ ನಡೆಸಿರುವ ಎರಡು ರಾಷ್ಟ್ರೀಯ ಪಕ್ಷಗಳು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ವಂಚಿಸಿವೆ. ಎತ್ತಿನಹೊಳೆ ಯೋಜನೆಯನ್ನು ಪೂರ್ಣಗೊಳಿಸಲು ಹಣ ಬಿಡುಗಡೆ ಮಾಡದೆ ಕೇಂದ್ರ ಸರ್ಕಾರ ಅದನ್ನು ನಿಷ್ಕ್ರಿಯ ಗೊಳಿಸಿದೆ. ಬಿಜೆಪಿಯವರಿಗೆ ಜನರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದಿದ್ರೆ, ಎತ್ತಿನ ಹೊಳೆ ಯೋಜನೆಯನ್ನು ಪೂರ್ಣಗೊಳಿಸಲಿ ಎಂದು ಸವಾಲ್ ಹಾಕಿದ್ರು.. ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ನಮ್ಮ ಸರ್ಕಾರದ ಅಭಿವೃದ್ಧಿ ಕಾಮಗಾರಿಯನ್ನು ಟೀಕೆ ಮಾಡುವುದನ್ನು ಬಿಟ್ಟು ಅಭಿವೃದ್ಧಿ ಯೋಜನೆಗಳನ್ನು ಅನುಸ್ಥಾನಗೊಳಿಸಲಿ ಎಂದರು..

ರಾಜಕೀಯ ಕಾರಣಕ್ಕಾಗಿ ನನ್ನನ್ನು ಟೀಕಿಸುವುದು ಬಿಟ್ಟು ತಾಲೂಕಿನಲ್ಲಿ ನಾವು ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಗಮನಿಸಿ ಮಾತನಾಡಲಿ ಎಂದು ಇತ್ತಿಚೆಗೆ ಬಿಜೆಪಿ ಮುಖಂಡರು ತನ್ನ ಮೇಲೆ ಮಾಡಿದ ಟೀಕೆಗೆ ಟಾಂಗ್ ಕೊಟ್ಟರು.

ಇದೇ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ,ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ರವೀಂದ್ರ,ಕಾರ್ಯಾಧ್ಯಕ್ಷ ಲಕ್ಷ್ಮಣ್.ಕಲ್ಯಾಣ ಕುಮಾರ್ ಬಾಬು,ಕುಂದಾಣ ಹೋಬಳಿ ಅಧ್ಯಕ್ಷ ಚಂದ್ರೇಗೌಡ, ಚನ್ನರಾಯಪಟ್ಟಣ ಹೋಬಳಿ ಅಧ್ಯಕ್ಷ ಮುನಿರಾಜು.ಪಿಎಲ್ ಡಿ ಬ್ಯಾಂಕ್ ಮಾಜಿ‌ ಅಧ್ಯಕ್ಷ ಮುನಿರಾಜು,ಕೋರಂಮಂಗಲ ಈರಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಬಸವರಾಜ ಬೊಮ್ಮಾಯಿ ಮೂಡುಬಿದಿರೆ ತಾಲೂಕಿಗೆ ಭೇಟಿ!

Thu Apr 28 , 2022
ಮೂಡುಬಿದಿರೆ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಲ್ಲೂಕು ಆಡಳಿತ ಸೌಧ ಉದ್ಘಾಟನೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಹೇಳಿಕೆ ರಾಜ್ಯದಲ್ಲಿ 6.50 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಸರಕಾರದ ಮಹತ್ವದ ನಿರ್ಧಾರ ಡೀಮ್ಡ್ ಫಾರೆಸ್ಟ್ ಹಿನ್ನೆಲೆ ತೀವ್ರ ಸಂಕಷ್ಟಕ್ಕೊಳಗಾಗಿದ್ದ ಜನರು ಆದರೆ ಯಾವುದೇ ರೀತಿಯಲ್ಲಿ ಸಮಸ್ಯೆ ಬಗೆಹರಿದಿರಲಿಲ್ಲ ಇದೀಗ 6.50 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಲು ಸುಪ್ರೀಂ ಕೋರ್ಟ್ […]

Advertisement

Wordpress Social Share Plugin powered by Ultimatelysocial