ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ!

ರಷ್ಯಾ- ಉಕ್ರೇನ್ ಯುದ್ಧದ ಹಿನ್ನೆಲೆ ಏರಿಕೆ ಕಂಡಿದ್ದ ಜಾಗತಿಕ ಕಚ್ಚಾತೈಲ ಬೆಲೆ ಕೆಲವು ದಿನಂಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದೆ. ಇದಕ್ಕೂ ಮುನ್ನ ದೇಶದ ಪಂಚ ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ದೇಶದ ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರ ಪರಿಷ್ಕರಣೆಯನ್ನು ಸ್ಥಗಿತ ಮಾಡಿದ್ದವು.

ಆದರೆ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ದೇಶದಲ್ಲಿ ಪ್ರತಿದಿನ ಇಂಧನ ದರ ಪರಿಷ್ಕರಣೆ ಮಾಡಲು ಆರಂಭ ಮಾಡಿದ್ದ ಸರ್ಕಾರಿ ತೈಲ ಕಂಪನಿಗಳು ಕಳೆದ ಮೂರು ವಾರದಿಂದಲೂ ಯಥಾಸ್ಥಿತಿ ಕಾಯ್ದುಕೊಂಡಿವೆ.

ಈ ಪರಿಷ್ಕರಣೆಯ ವೇಳೆ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಏರಿಕೆಯಾಗಿತ್ತು. ದೇಶದಲ್ಲಿ ಕಳೆದ ಒಂದು ತಿಂಗಳಿನಲ್ಲಿ 15 ಬಾರಿ ಇಂಧನ ದರವನ್ನು ಏರಿಕೆ ಮಾಡಲಾಗಿದೆ. ಆದರೆ ಇಂದು (ಏಪ್ರಿಲ್ 23, ಶನಿವಾರ) ಪೆಟ್ರೋಲ್‌, ಡೀಸೆಲ್ ದರದಲ್ಲಿ ಯಾವುದೇ ಏರಿಳಿತ ಕಂಡುಬಂದಿಲ್ಲ. ಕಳೆದ ಇಪ್ಪತ್ತು ದಿನಗಳಿಂದ ಇಂಧನ ದರ ಸ್ಥಿರವಾಗಿದೆ.

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆಯು ಏಳು ವರ್ಷಗಳ ಬಳಿಕ ಗರಿಷ್ಠ ಮಟ್ಟದಲ್ಲಿದೆ. ಈ ನಡುವೆ ಬರೋಬ್ಬರಿ ಎರಡು ತಿಂಗಳುಗಳ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಭಾರತದಲ್ಲಿ ಭಾರೀ ಏರಿಕೆ ಕಂಡಿದ್ದು, ಕಳೆದ ಹತ್ತು ದಿನಗಳನ್ನು ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್ ಬೆಲೆಯು ಏರಿಕೆ ಕಂಡಿದೆ. ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾ ತೈಲ ಆಮದು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಇಂಧನ ದರ ಕಡಿಮೆಯಾಗುವ ಸಾಧ್ಯತೆ ಇದೆ.

ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮೊದಲ ಬಾರಿಗೆ ಮಂಗಳವಾರ (ಮಾರ್ಚ್ 22) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿತ್ತು. ಆದಾದ ಬಳಿಕ ಏಳು ದಿನ ಹೊರತುಪಡಿಸಿ ಉಳಿದೆಲ್ಲಾ ದಿನಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರವು ಹೆಚ್ಚಳವಾಗಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ನಡುವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡುವ ನಿರೀಕ್ಷೆಯನ್ನು ಜನರು ಹೊಂದಿದ್ದಾರೆ.

ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಭಿನಯದ 'ರಥಂ' ಚಿತ್ರದ ಡಬ್ಬಿಂಗ್ ಆರಂಭವಾಗಿದೆ!

Sat Apr 23 , 2022
ಚೆನ್ನೈ, ಏಪ್ರಿಲ್ 23 ನಟ ವಿಜಯ್ ಆಂಟೋನಿ ನಾಯಕರಾಗಿರುವ ನಿರ್ದೇಶಕ ಸಿ ಎಸ್ ಅಮುಧನ್ ಅವರ ಬಹು ನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ರಥಂ’ ಡಬ್ಬಿಂಗ್ ಶನಿವಾರ ನಗರದಲ್ಲಿ ಸರಳ ಪೂಜೆಯೊಂದಿಗೆ ಪ್ರಾರಂಭವಾಯಿತು. ಇತ್ತೀಚೆಗಷ್ಟೇ, ಚಿತ್ರದ ಭಾರತೀಯ ಭಾಗಗಳ ಚಿತ್ರೀಕರಣವನ್ನು ಪೂರ್ಣಗೊಳಿಸಿರುವುದಾಗಿ ಘಟಕವು ಘೋಷಿಸಿತ್ತು. ಸಿಬ್ಬಂದಿ ಶೀಘ್ರದಲ್ಲೇ ಅದರ ವಿದೇಶಿ ವೇಳಾಪಟ್ಟಿಯಲ್ಲಿ ಕೆಲಸವನ್ನು ಪ್ರಾರಂಭಿಸಲಿದ್ದಾರೆ. ಆದಾಗ್ಯೂ, ಸ್ಪೇನ್‌ನಲ್ಲಿ ನಡೆಯಲಿರುವ ವಿದೇಶಿ ವೇಳಾಪಟ್ಟಿಯ ಮೊದಲು, ಚಿತ್ರದ ಡಬ್ಬಿಂಗ್ ಕೆಲಸವನ್ನು ಪ್ರಾರಂಭಿಸಲು ಘಟಕವು ನಿರ್ಧರಿಸಿದೆ. […]

Advertisement

Wordpress Social Share Plugin powered by Ultimatelysocial