ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ “ಪ್ರಾರಂಭ”!

ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ “ಪ್ರಾರಂಭ” ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ.

ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಮನು ಕಲ್ಯಾಡಿ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಯನ್ನು ಮನು ಕಲ್ಯಾಡಿ ಅವರೆ ಬರೆದಿದ್ದಾರೆ.

ಜೇನುಶ್ರೀ ತನುಷ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಗದೀಶ್ ಕಲ್ಯಾಡಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ವಡ್ಡೇರಹಳ್ಳಿ ಈ ಚಿತ್ರದ ಸಹ ನಿರ್ಮಾಪಕು. ಪ್ರಜ್ವಲ್ ಪೈ ಸಂಗೀತ ನಿರ್ದೇಶನ, ಸುರೇಶ್ ಬಾಬು ಛಾಯಾಗ್ರಹಣ, ವಿಜಯ್ ಸಂಕಲನ ಹಾಗೂ ಥ್ರಿಲ್ಲರ್ ‌ಮಂಜು, ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಪ್ಪಿ ಅವರು ಟೀಕಾಕಾರರಿಗೆ ತಿರುಗೇಟಿನ ರೂಪದಲ್ಲಿ ಈ ಟ್ವೀಟ್ ಮಾಡಿದ್ದಾರೆ.

Fri Apr 22 , 2022
  ಬೆಂಗಳೂರು: ಪ್ರಜಕೀಯ ಮೂಲಕ ಭಿನ್ನ ರೀತಿಯ ರಾಜಕೀಯ ಮಾಡಲು ಹೊರಟಿರುವ ರಿಯಲ್ ಸ್ಟಾರ್ ಉಪೇಂದ್ರ ಅವರು ಶುಕ್ರವಾರ ಟ್ವೀಟ್ ಒಂದನ್ನು ಮಾಡಿದ್ದು,ಭಾರಿ ಚರ್ಚೆಗೊಳಗಾಗುತ್ತಿದೆ. ‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಭಾರಿ ಯಶಸ್ಸಿನ ಬಳಿಕ ಸಿನಿಮಾಗಳಲ್ಲಿ ಸಿಗರೇಟ್ ಸೇದುವ ಕುರಿತು ವ್ಯಾಪಕ ಚರ್ಚೆ ನಡೆಯುತ್ತಿರುವ ವೇಳೆಯಲ್ಲಿ ಉಪ್ಪಿ ಅವರು ಟೀಕಾಕಾರರಿಗೆ ತಿರುಗೇಟಿನ ರೂಪದಲ್ಲಿ ಈ ಟ್ವೀಟ್ ಮಾಡಿದ್ದಾರೆ. ”ಒಂದು ಸಿನಿಮಾದಲ್ಲಿ ಸಿಗರೇಟ್ ಸೇದೋದು ತಪ್ಪು ಕುಡಿಯೋದು ತಪ್ಪು, ಜೂಜಿಗೆ ಜಾಹಿರಾತು ನೀಡೋದು […]

Advertisement

Wordpress Social Share Plugin powered by Ultimatelysocial