ಅಚ್ಚರಿ ಮೂಡಿಸಲಿರುವ ‘ಅನ್ ಲಾಕ್ ರಾಘವ’ ಕ್ಲೈಮ್ಯಾಕ್ಸ್

 

ಈಗಾಗಲೇ ತನ್ನ ವಿಭಿನ್ನವಾದ ಟೈಟಲ್‌ನಿಂದ ಗಮನ ಸೆಳೆದಿರುವ ‘ಅನ್ ಲಾಕ್ ರಾಘವ’ ಸಿನಿಮಾದ  ಕ್ಲೈಮ್ಯಾಕ್ಸ್ ಚಿತ್ರೀಕರಣ ಭರದಿಂದ ಸಾಗಿದೆ. ಸತ್ಯ ಮತ್ತು ಮಯೂರ ಪಿಕ್ಚರ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ ಈ ಸಿನಿಮಾದ ಕ್ಲೈಮಾಕ್ಸ್ ಹಾಸ್ಯಲೇಪನದೊಂದಿಗೆ ಸಾಕಷ್ಟು ಅಚ್ಚರಿ ಮೂಡಿಸಲಿದೆ ಎನ್ನುತ್ತಿದೆ ಚಿತ್ರತಂಡದೀಪಕ್ ಮಧುವನಹಳ್ಳಿ ನಿರ್ದೇಶಿಸುತ್ತಿರುವ ಈ ಚಿತ್ರದಲ್ಲಿ ಮಿಲಿಂದ್ ನಾಯಕ ನಟನಾಗಿ ನಟಿಸುತ್ತಿದ್ದು, ನಾಯಕಿಯಾಗಿ ರೇಚಲ್ ಡೇವಿಡ್ ನಟಿಸುತ್ತಿದ್ದಾರೆ. ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ ನಾಯಕ, ನಾಯಕಿ ಒಳಗೊಂಡಂತೆ ಸಾಧುಕೋಕಿಲ, ಸುಂದರ್, ವೀಣಾ ಸುಂದರ್, ಶೋಭರಾಜ್, ಅವಿನಾಶ್ ಸೇರಿದಂತೆ ಹಲವು ಕಲಾವಿದರು ಪಾಲ್ಗೊಂಡಿದ್ದು, ಇದೇ ಸಂದರ್ಭದಲ್ಲಿ ಚಿತ್ರತಂಡ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.ಅನ್ ಲಾಕ್ ರಾಘವ’ ಚಿತ್ರದ ನಿರ್ದೇಶಕ ದೀಪಕ್ ಮಧುವನಹಳ್ಳಿ ಮಾತನಾಡಿ “ಕ್ಲೈಮ್ಯಾಕ್ಸ್ ಚಿತ್ರೀಕರಣ ನಡೆಯುತ್ತಿದೆ. ಎಂಟು ದಿನಗಳ ಕಾಲ ಕ್ಲೈಮಾಕ್ಸ್ ಚಿತ್ರೀಕರಣ ಯೋಜಿಸಿದ್ದು, ಇನ್ನು ಮೂರು ದಿನದಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಣ ಮುಗಿಯಲಿದೆ. ಎರಡು ಸಾಂಗ್ ಹಾಗೂ ಟಾಕಿ ಪೋಷನ್ ಮುಗಿಸಿದ್ರೆ ಸಿನಿಮಾ ಚಿತ್ರೀಕರಣ ಕಂಪ್ಲೀಟ್ ಆಗುತ್ತದೆ. ಒಟ್ಟು 50 ರಿಂದ 55 ದಿನ ಚಿತ್ರೀಕರಣ ಮಾಡಿದ್ದೇವೆ. ಎಲ್ಲಾ ಕಲಾವಿದರ ಕಾಂಬಿನೇಶನ್‌ನಲ್ಲಿ ಕ್ಲೈಮ್ಯಾಕ್ಸ್ ಚಿತ್ರೀಕರಿಸುತ್ತಿದ್ದೇವೆ. ವಿನೋದ್ ಮಾಸ್ಟರ್ ಚಿತ್ರಕ್ಕೆ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಹೊಸ ರೀತಿಯ ಪ್ರಯತ್ನ ಸಿನಿಮಾದಲ್ಲಿದೆ. ಆಕ್ಷನ್ ಜೊತೆಗೆ ಹ್ಯೂಮರ್ ಕೂಡ ಇಡೀ ಸಿನಿಮಾದಲ್ಲಿ ಜೊತೆಯಾಗಿ ಟ್ರಾವೆಲ್ ಆಗಲಿದೆ. ಸಿನಿಮಾಗೆ ಏನೂ ಕೊರತೆ ಆಗದ ಹಾಗೆ ನಿರ್ಮಾಪಕರು ನೋಡಿಕೊಂಡಿದ್ದಾರೆ” ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ಚಿತ್ರದ ನಿರ್ಮಾಪಕ ಮಂಜುನಾಥ್.ಡಿ ಮಾತನಾಡಿ “ಒಳ್ಳೆಯ ಕಂಟೆಂಟ್ ಕೊಟ್ರೆ ಖಂಡಿತಾ ಜನ ಸಿನಿಮಾವನ್ನು ನೋಡ್ತಾರೆ, ಗೆಲ್ಲಿಸ್ತಾರೆ. ಈ ಸಿನಿಮಾದ ಕಂಟೆಂಟ್ ತುಂಬಾ ಚೆನ್ನಾಗಿದೆ, ಒಳ್ಳೆಯ ಕಲಾವಿದರು ಇದ್ದಾರೆ. ಗೆಲ್ತೀವಿ ಎನ್ನುವ ಕಾನ್ಫಿಡೆನ್ಸ್‌ನಿಂದ ಹೆಜ್ಜೆ ಇಟ್ಟಿದ್ದೇವೆ. ಏಪ್ರಿಲ್ ನಂತರದಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ ಎಂದು ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
Please follow and like us:

Leave a Reply

Your email address will not be published. Required fields are marked *

Next Post

5 ಕೋಟಿ 80ಲಕ್ಷದ ಕಾಮಗಾರಿ ಶಾಸಕ ಎನ್.ಮಹೇಶ್ ಗುದ್ದಲಿ ಪೂಜೆ....

Sat Dec 24 , 2022
ಕೊಳ್ಳೇಗಾಲ ವಿಧಾನಸಭಾ ಕ್ಷೆತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶಾಸಕ ಎನ್ ಮಹೇಶ್ 5ಕೋಟಿ 80ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು…..ಯಳಂದೂರು ತಾಲ್ಲೂಕಿನ ಕಟ್ಟೆಗಣಿಗನೂರು ಗ್ರಾಮದ ಸುವರ್ಣವತಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು….ಗಣಿಗನೂರು ಗ್ರಾಮಸ್ಥರು ದೇವಸ್ಥಾನ ಹಾಗೂ ಜಮೀನುಗಳಿಗೆ ತೆರಳಲು ಸೇತುವೆ ಆಗಬೇಕು ಎಂಬ ಸುಮಾರು ವರ್ಷಗಳ ಮನವಿಗೆ ಇಂದು ಕಾಲ ಕೂಡಿ ಬಂದಿದೆ…..ಯಳಂದೂರು ತಾಲ್ಲೂಕಿನ ಕಟ್ಟೆಗಣಿಗನೂರು ಗ್ರಾಮದ ಸೇತುವೆ ನಿರ್ಮಾಣಕ್ಕೆ 2ಕೋಟಿ 60ಲಕ್ಷ, […]

Advertisement

Wordpress Social Share Plugin powered by Ultimatelysocial