ಒಕ್ಕಲಿಗ ಮತ ಬ್ಯಾಂಕ್‌ ಸೆಳೆಯಲು ಡಿಕೆಶಿ ತಂತ್ರ

ಒಕ್ಕಲಿಗ ಮತ ಬ್ಯಾಂಕ್‌ ಸೆಳೆಯಲು ಡಿಕೆಶಿ ತಂತ್ರ

ಬೆಂಗಳೂರು: ವಿಧಾನಪರಿಷತ್‌ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದ ಕ್ಷೇತ್ರಗಳು ಕೈವಶವಾಗಿರುವ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಕ್ಕಲಿಗ ಸಮುದಾಯದ ಮತ ಬ್ಯಾಂಕ್‌ ಕಾಂಗ್ರೆಸ್‌ ಪರ ಗಟ್ಟಿಗೊಳಿಸುವತ್ತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್‌ ಈಗಿನಿಂದಲೇ ಚಿತ್ತ ಹರಿಸಿದ್ದಾರೆ.

ಪರಿಷತ್‌ ಚುನಾವಣೆಯಲ್ಲಿ ಒಕ್ಕಲಿಗ ಸಮು ದಾಯ ಪ್ರಬಲವಾಗಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿರುವುದು ಡಿ.ಕೆ. ಶಿವಕುಮಾರ್‌ಗೆ ಧೈರ್ಯ ನೀಡಿದಂತಿದೆ.

ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ ಮತ್ತು ಮೈಸೂರು ಜೆಡಿಎಸ್‌ ಭದ್ರಕೋಟೆ ಎಂದೇ ಬಿಂಬಿತವಾಗಿತ್ತು. ಆದರೆ ಪರಿಷತ್‌ ಚುನಾವಣೆ ಫಲಿತಾಂಶ ಒಕ್ಕಲಿಗ ಸಮುದಾಯವು ಕಾಂಗ್ರೆಸ್‌ ಅದರಲ್ಲೂ ಡಿ.ಕೆ. ಶಿವಕುಮಾರ್‌ ನಾಯಕತ್ವದ ಬಗ್ಗೆ ವಿಶ್ವಾಸ ತೋರಿರುವ ಸೂಚನೆ ಇದೆ. ಇದು ಸಮುದಾಯ ಮುಂದಿನ ದಿನಗಳಲ್ಲಿ ಇವರ ಬೆನ್ನಿಗೆ ನಿಲ್ಲಲಿದೆ ಎಂಬುದರ ಮುನ್ಸೂಚನೆ ಎಂದು ಕಾಂಗ್ರೆಸ್‌ ವಲಯದಲ್ಲಿ ವ್ಯಾಖ್ಯಾನಿಸಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫೋಷಕರ ಎದುರಲ್ಲೇ ಕಂದಮ್ಮಗಳ ದೇಹ ಛಿದ್ರ : ಅವಳಿ ಮಕ್ಕಳು ಸಾವು

Mon Dec 20 , 2021
ಹಾಸನ: ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಮಕ್ಕಳು ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮಕ್ಕಳೊಂದಿಗೆ ಇದ್ದ ಪೋಷಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಳಿ ಮಕ್ಕಳಾದ ಮೂರು ವರ್ಷದ ಪ್ರಣವ್ ಮತ್ತು ಪ್ರಣತಿ ಮೃತಪಟ್ಟರೆಂದು ಹೇಳಲಾಗಿದೆ. ಶಿವಾನಂದ್ ಮತ್ತು ಅವರ ಪತ್ನಿ ಜ್ಯೋತಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಲಾರಿ […]

Advertisement

Wordpress Social Share Plugin powered by Ultimatelysocial