ಉತ್ಸವ 2023 ಫೆಬ್ರವರಿ 24 ರಿಂದ 26ರ ತನಕ ಕಲಬುರಗಿಯಲ್ಲಿ ನಡೆಯಲಿದೆ.

ಉತ್ಸವ 2023 ಫೆಬ್ರವರಿ 24 ರಿಂದ 26ರ ತನಕ ಕಲಬುರಗಿಯಲ್ಲಿ ನಡೆಯಲಿದೆ.

ಉತ್ಸವದ ಯಶಸ್ಸಿಗೆ ವಿವಿಧ ಸಮಿತಿಗಳನ್ನು ರಚನೆ ಮಾಡಲಾಗಿದೆ. ಉತ್ಸವದ ಸಂಪೂರ್ಣ ಖರ್ಚು-ವೆಚ್ಚವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಭರಿಸಲಿದೆ.

ಕಲ್ಯಾಣ ಕರ್ನಾಟಕದ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪರಂಪರೆ ಅನಾವರಣಗೊಳಿಸುವ ಮೂರು ದಿನಗಳ ಕಲ್ಯಾಣ ಕರ್ನಾಟಕ ಉತ್ಸವವನ್ನು ಕಲಬುರಗಿಯಲ್ಲಿ ವಿಜೃಂಭಣೆಯಿಂದ ನಡೆಸಲು ನಿರ್ಧರಿಸಲಾಗಿದೆ. ಕಲಬುರಗಿಯಲ್ಲಿ ವಿ. ವಿ. ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳದಲ್ಲಿಯೇ ಈ ಉತ್ಸವ ನಡೆಯಲಿದೆ.

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಅನಿರುದ್ಧ ಶ್ರವಣ ಪಿ. ಉತ್ಸವದ ಕುರಿತು ಮಾಹಿತಿ ನೀಡಿದ್ದಾರೆ. ವಿವಿಧ ಇಲಾಖೆಯ ಅಧಿಕಾರಿಗಳ ಜೊತೆ ಉತ್ಸವದ ಸಿದ್ಧತೆಗಳ ಬಗ್ಗೆ ಸಭೆ ನಡೆಸಿದ್ದಾರೆ. ಉತ್ಸವ ಯಶಸ್ಸಿಗೆ ರಚನೆ ಮಾಡಿರುವ ವಿವಿಧ ಸಮಿತಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದ್ದಾರೆ.

ಮೂರು ದಿನಗಳ ಉತ್ಸವಕ್ಕೆ ಕಲಬುರಗಿ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಜನರು ಆಗಮಿಸಲು ಸಾರಿಗೆ ವ್ಯವಸ್ಥೆ ಕಲ್ಪಿಸುವ ಕುರಿತು, ವೇದಿಕೆ ಸುತ್ತಮುತ್ತ ವಾಹನಗಳ ಪಾರ್ಕಿಂಗ್, ಪೊಲೀಸ್ ಬಂದೋಬಸ್ತ್ ಮತ್ತು ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಕಲಬುರಗಿ-ಬೆಂಗಳೂರು ಹೊಸ ರೈಲು, ಕೇಂದ್ರ ಸಚಿವರ ಸ್ಪಂದನೆ

ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ಅನಿರುದ್ಧ ಶ್ರವಣ ಪಿ. ಕಲಬುರಗಿ ಉತ್ಸವ 2023ಕ್ಕಾಗಿ ರಚಿಸಲಾಗಿರುವ ವಿವಿಧ ಸಮಿತಿಗಳೊಂದಿಗೆ ಸಭೆ ನಡೆಸಿದರು. 100*60 ಚದುರ ಅಡಿ ಮುಖ್ಯ ವೇದಿಕೆ ಜೊತೆಗೆ ಡಾ. ಬಿ. ಆರ್.ಅಂಬೇಡ್ಕರ್ ಭವನ ಮತ್ತು ವಿ.ವಿ ಬಯಲು ರಂಗಮಂದಿರದಲ್ಲಿ ಎರಡು ಉಪ ವೇದಿಕೆ ನಿರ್ಮಿಸಿ ಸಾಂಸ್ಕೃತಿಕ ಮತ್ತು ಜಾನಪದ ಕಾರ್ಯಕ್ರಮಗಳನ್ನು ಅಲ್ಲಿ ಆಯೋಜಿಸಲಾಗುತ್ತದೆ ಎಂದು ಹೇಳಿದರು.

ಉತ್ಸವ ಆಯೋಜನೆಗೆ ಸರ್ಕಾರ ಒಪ್ಪಿಗೆ ನೀಡಿದೆ. ಈ ಕಾರ್ಯಕ್ರಮವನ್ನು ಐತಿಹಾಸಿಕವನ್ನಾಗಿಸಬೇಕು. ಇತರೆ ಜಿಲ್ಲೆ, ರಾಜ್ಯಗಳಿಂದ ಬರುವ ಜನಪ್ರತಿನಿಧಿಗಳು, ಗಣ್ಯರು, ಕಲಾವಿದರು, ಬಾಲಿವುಡ್, ಸ್ಯಾಂಡಲ್‌ವುಡ್ ಕಲಾವಿದರ ಊಟ, ವಸತಿ, ಸಾರಿಗೆ ಹೀಗೆ ಪ್ರತಿಯೊಂದು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲು ವಿವಿಧ ಸಮಿತಿಗಳನ್ನು ರಚಿಸಿ, ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ. ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ

ಕಲ್ಯಾಣ ಕರ್ನಾಟಕ ಉತ್ಸವ 2023ರ ಆರಂಭದ ದಿನ ಪ್ರದೇಶದ ಏಳು ಜಿಲ್ಲೆಗಳ ಸಾಂಸ್ಕೃತಿ, ಜಾನಪದ ಕಲಾ ತಂಡಗಳು ಮತ್ತು ಕುಂಭಕಳಸದೊಂದಿಗೆ ಭವ್ಯ ಮೆರವಣಿಗೆ. ನಗರದ ನಿಗದಿತ ಸ್ಥಳದಿಂದ ವೇದಿಕೆ ಸ್ಥಳದ ವರೆಗೆ ಜಾನಪದ ಶೋಭಾ ಯಾತ್ರೆ ಸಾಗಲಿದೆ.

ಉತ್ಸವ ವೀಕ್ಷಿಸಲು ಸುಮಾರು 20 ರಿಂದ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರತಿ ದಿನ ಖ್ಯಾತ ಚಲನಚಿತ್ರ ನಟರು, ಗಾಯಕರು, ಕಲಾವಿದರು ಬರುವುದರಿಂದ ಸುಮಾರು 1 ಲಕ್ಷ ಜನಸಂಖ್ಯೆ ಸೇರುವ ನಿರೀಕ್ಷೆ ಇದೆ.

ವೇದಿಕೆ ಮತ್ತು ಸುತ್ತಮುತ್ತಲಿನ ಸ್ಥಳದಲ್ಲಿ ತಕ್ಷಣದಿಂದಲೇ ಸ್ವಚ್ಚತಾ ಕಾರ್ಯ ಆರಂಭಿಸಬೇಕು. ವಿಶ್ವವಿದ್ಯಾಲಯದ ರಸ್ತೆ ರಿಪೇರಿ ಮಾಡಬೇಕು. ಮೂರು ದಿನ ಉತ್ಸವದಲ್ಲಿ ಕುಡಿಯವ ನೀರಿನ ವ್ಯವಸ್ಥೆ, ಬಯೋ ಶೌಚಾಲಯ ವ್ಯವಸ್ಥೆ ಮಾಡಬೇಕು. ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಡಿದಂತೆ ಸ್ವಚ್ಛತಾ ಕಾರ್ಯ ತುಂಬಾ ಅಚ್ಚುಕಟಾಗಿ ನಿರ್ವಹಿಸಬೇಕು ಎಂದು ಸೂಚನೆ ಕೊಡಲಾಗಿದೆ.

ಶ್ವಾನ ಪ್ರದರ್ಶನ, ಕೃಷಿ ಮೇಳ, ಗಾಳಿಪಟ ಉತ್ಸವ

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಶ್ವಾನ ಪ್ರದರ್ಶನ, ಕೃಷಿ ಮೇಳ, ಮಕ್ಕಳ ಮತ್ತು ಮಹಿಳೆಯರ ಹಬ್ಬ, ಗಾಳಿಪಟ ಉತ್ಸವ, ಚಿತ್ರಕಲೆ ಮತು ಶಿಲ್ಪ ಕಲೆಗಳ ಕಾರ್ಯಾಗಾರ, ಫಲಪುಷ್ಪ ಪ್ರದರ್ಶನ, ಚಿತ್ರ ಸಂತೆ, ಮಕ್ಕಳಿಗೆ ವಿವಿಧ ಸ್ಪರ್ಧೆಗಳು ನಡೆಯಲಿವೆ.

ಕುಸ್ತಿ, ಮಲ್ಲಕಂಬ ಸೇರಿದಂತೆ ಗ್ರಾಮೀಣ ಮತ್ತು ಸಾಹಸ ಕ್ರೀಡೆಗಳು ಹಾಗೂ ಜಲ ಕ್ರೀಡೆಗಳನ್ನು ಆಯೋಜಿಸಲಾಗುತ್ತಿದೆ. ಕಲಬುರಗಿ ಕೋಟೆ ಸೇರಿದಂತೆ ಸ್ಥಳೀಯ ಪ್ರಮುಖ ಸರ್ಕಾರಿ ಕಚೇರಿಗಳು, ವೃತ್ತಗಳು, ಐತಿಹಾಸಿಕ ಸ್ಮಾರಕಗಳನ್ನು ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗುತ್ತದೆ.

ವಸ್ತು ಪ್ರದರ್ಶನ ಮಳಿಗೆಗೆ ಅವಕಾಶ ನೀಡಲಾಗಿದ್ದು, ಸ್ಥಳೀಯ ಕೈಗಾರಿಕೆ, ಆಹಾರ, ಕರಕುಶಲ ವಸ್ತುಗಳ ಪ್ರದರ್ಶನಕ್ಕೆ ಇಲ್ಲಿ ಅವಕಾಶ ನೀಡಲಾಗುವುದು. ಸ್ಥಳೀಯ ಪ್ರಕಾಶನ ಸಂಸ್ಥೆಗಳು ಹೊರತಂದಿರುವ ಪುಸ್ತಕ ಪ್ರದರ್ಶನಕ್ಕೂ ಅವಕಾಶವಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ "ಹೊಯ್ಸಳ" ಚಿತ್ರದ ಟೀಸರ್ ದಿನಾಂಕ ಅನೌನ್ಸ್ ಆಗಿದೆ .

Fri Feb 3 , 2023
ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ “ಹೊಯ್ಸಳ” ಚಿತ್ರದ ಟೀಸರ್ ದಿನಾಂಕ ಅನೌನ್ಸ್ ಆಗಿದೆ ಬಹು ನಿರೀಕ್ಷಿತ “ಹೊಯ್ಸಳ” ಚಿತ್ರದ ಟೀಸರ್, 5th ಫೆಬ್ರವರಿ, ಬೆಳಿಗ್ಗೆ 9:27 ಗೆ ಬಿಡುಗಡೆಯಾಗಲಿದೆ. ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ ಹೊಯ್ಸಳ ಚಿತ್ರ, ಡಾಲಿ ಧನಂಜಯ ಅವರ 25ನೇ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಧನಂಜಯ ಅವರು ಖಡಕ್ ಪೊಲೀಸ್ ಆಗಿ ಕಾಣಿಸಲಿದ್ದಾರೆ. ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಅಡಿಯಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ರವರ […]

Advertisement

Wordpress Social Share Plugin powered by Ultimatelysocial