ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ವಿಜಯನಗರ ರಾಜಧಾನಿ

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಆದರೆ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಮೂಲಕ ಮತ್ತೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಚರ್ಚೆ ಆರಂಭವಾಗಿದೆ
ವಿಜಯನಗರ ಹೊರವಲಯದ ಭಟ್ರಳ್ಳಿ ಆಂಜನೇಯ ದೇಗುಲದ ಬಳಿ ಗುರುವಾರ ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲಾ ಕೇಂದ್ರದಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಜಿಲ್ಲಾ ಕಚೇರಿ ಕಾಮಗಾರಿ ಆರಂಭವಾಗಿದೆ. ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷವಾಗಿದೆ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.
ಸಚಿವ ಆನಂದ್ ಸಿಂಗ್ ಅವರ ಹೇಳಿಕೆ ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ರಾಜ್ಯ ಆಗುವ ಸಾಧ್ಯತೆ ಇದೆಯಾ ಎಂಬ ಚರ್ಚೆಯನ್ನು ಹುಟ್ಟುಹಾಕಿದೆ. ವಿಜಯನಗರವನ್ನು ಕರ್ನಾಟಕದ 31ನೇ ಜಿಲ್ಲೆಯಾಗಿಸಿದ ಕೀರ್ತಿ ಸಚಿವ ಆನಂದ್ ಸಿಂಗ್‌ಗೆ ಸಲ್ಲುತ್ತದೆ. ಈ ಹಿನ್ನೆಲೆ ಅವರು ನೀಡಿರುವ ಹೇಳಿಕೆ ಮಹತ್ವ ಪಡೆದಿದೆ.2020ರಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಿಂದ ಬೇರ್ಪಡಿಸಿ 2021ರ ಫೆಬ್ರವರಿ 8ರಂದು ಕರ್ನಾಟಕದಲ್ಲಿ 31ನೇ ಜಿಲ್ಲೆಯನ್ನಾಗಿ ವಿಜಯನಗರ ಜಿಲ್ಲೆಯನ್ನು ರಚಿಸಲಾಯಿತು. ಅಂದು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರವು 2020ರ ನವೆಂಬರ್‌ 18ರಂದು ಜಿಲ್ಲೆಯ ರಚನೆಗೆ ಅನುಮೋದನೆ ನೀಡಿ ಅಧಿಸೂಚನೆ ಹೊರಡಿಸಿತ್ತು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

Please follow and like us:

Leave a Reply

Your email address will not be published. Required fields are marked *

Next Post

ಹತ್ತು ದಿನಗಳ ಬ್ರಹ್ಮೋತ್ಸವಕ್ಕೆ ತೆರೆ!

Mon Dec 26 , 2022
ನಂಜನಗೂಡಿನ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ 10 ದಿನಗಳ ಕಾಲ ನಡೆದ 25ನೇ ವರ್ಷದ ಬ್ರಹ್ಮೋತ್ಸವಕ್ಕೆ ಇಂದು ಮಂಡಲೊತ್ಸವ ಆಚರಿಸುವ ಮೂಲಕ ತೆರೆ ಬಿದ್ದಿತು. ನಿನ್ನೆ ಪಾದಯಾತ್ರೆಯಲ್ಲಿ ಬಂದ ನೂರಾರು ಅಯ್ಯಪ್ಪ ಭಕ್ತರ ಇರುಮುಡಿ ಬಿಚ್ಚಿ ತೆಂಗಿನಕಾಯಿ ಯಿಂದ ಹೊರತೆಗೆದ ತುಪ್ಪವನ್ನು ಇಂದು ಶ್ರೀ ಶಾಸ್ತನಿಗೆ ಅಭಿಷೇಕ ಮಾಡಲಾಯಿತು. ಅಭಿಷೇಕಕ್ಕು ಮುನ್ನ ದೇವಾಲಯದಲ್ಲೇ ಉಳಿದಿದ್ದ ನೂರಾರು ಅಯ್ಯಪ್ಪ ಭಕ್ತರು ಬೆಳಿಗ್ಗೆಯಿಂದಲೇ ವಿಳಕ್ಕು ಆಚರಿಸುವ ಮೂಲಕ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬಣ್ಣ […]

Advertisement

Wordpress Social Share Plugin powered by Ultimatelysocial