ಸಾರ್ವಜನಿಕ ಸಂಶೋಧನಾ ವಿಶ್ವವಿದ್ಯಾಲಯವು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ!

ಭಾರತೀಯ ವಿಜ್ಞಾನ ಸಂಸ್ಥೆ  , ಸಾರ್ವಜನಿಕ ಸಂಶೋಧನಾ ವಿಶ್ವವಿದ್ಯಾಲಯವು ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 100 ತಾಂತ್ರಿಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.ಅಧಿಸೂಚನೆಯನ್ನು ಓದಿದ ನಂತರ ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 7,2022 ರಿಂದ ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.ಭಾರತೀಯ ವಿಜ್ಞಾನ ಸಂಸ್ಥೆ   ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಬಿ.ಇ, ಬಿ.ಟೆಕ್, ಬಿ.ಆರ್ಕಿ, ಬಿ.ಎಸ್ಸಿ, ಬಿಸಿಎ, ಬಿ.ವಿಎಸ್ಸಿ ವಿದ್ಯಾರ್ಹತೆಯನ್ನು ಶೇ.55ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ಬೋರ್ಡ್‌/ಸಂಸ್ಥೆ/ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಫೆಬ್ರವರಿ 28,2022ರ ಅನ್ವಯ ಗರಿಷ್ಟ 26 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/-ರೂ ವೇತನವನ್ನು ನೀಡಲಾಗುವುದು.ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಸಾಮಾನ್ಯ, ಒಬಿಸಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಮಹಿಳೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಟ್ರಾನ್ಸ್‌ಜೆಂಡರ್ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.ಭಾರತೀಯ ವಿಜ್ಞಾನ ಸಂಸ್ಥೆ (IISC) ನೇಮಕಾತಿಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://iisc.ac.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 7,2022 ರಿಂದ ಫೆಬ್ರವರಿ 28,2022ರೊಳಗೆ ಅರ್ಜಿಯನ್ನು ಹಾಕಬಹುದು.ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಟ್ನಾ ಹೈಕೋರ್ಟ್ 7 ನ್ಯಾಯಾಂಗ ಅಧಿಕಾರಿಗಳ ಕೆಲಸವನ್ನು ಅಮಾನತುಗೊಳಿಸಿದೆ

Wed Feb 9 , 2022
  ಪಾಟ್ನಾ ಹೈಕೋರ್ಟ್ ವಿವಿಧ ಜಿಲ್ಲಾ ನ್ಯಾಯಾಲಯಗಳ ಏಳು ನ್ಯಾಯಾಧೀಶರ ವಿರುದ್ಧ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅರುಣ್ ಕುಮಾರ್ ಅವರು ಫೆಬ್ರವರಿ 8, 2022 ರಂದು ಖಗಾರಿಯಾ, ಮಧುಬನಿ, ಕತಿಹಾರ್, ಬಂಕಾ, ಪಾಟ್ನಾ, ರೋಹ್ತಾಸ್ ಮತ್ತು ಮುಜಾಫರ್‌ಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಿಗೆ ಪತ್ರಗಳನ್ನು ನೀಡಿದ್ದಾರೆ ಮತ್ತು ಆ ನ್ಯಾಯಾಧೀಶರಿಂದ ನ್ಯಾಯಾಂಗ ಮತ್ತು ಆಡಳಿತಾತ್ಮಕ ಅಧಿಕಾರವನ್ನು ಕಸಿದುಕೊಳ್ಳುವಂತೆ ಸೂಚಿಸಿದ್ದಾರೆ. . ರಾಜ್ ಕುಮಾರ್-11, ಕೌಟುಂಬಿಕ ನ್ಯಾಯಾಲಯದ ಪ್ರಧಾನ […]

Advertisement

Wordpress Social Share Plugin powered by Ultimatelysocial