ಮನಸೂರೆಗೊಳ್ಳುತ್ತಿದೆ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ಟ್ರೇಲರ್.

ದೇಶ, ವಿದೇಶದ ನಾನಾಭಾಗಗಳ  ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ನೂರೈವತ್ತಕ್ಕೂ ಅಧಿಕ ಪ್ರಶಸ್ತಿ ಪಡೆದುಕೊಂಡಿರುವ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.‌

ಮಾಜಿ ಸಭಾಪತಿ‌ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವು ವಿವಿಧ ಕ್ಷೇತ್ರದ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ನನ್ನ ಮೊದಲ ಚಿತ್ರ “ಕೃಷ್ಣ ಗಾರ್ಮೆಂಟ್ಸ್” ನಿರೀಕ್ಷಿತ ಗೆಲವು ದೊರಕಲಿಲ್ಲ. ಎರಡನೇ ಚಿತ್ರ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರ ಬಿಡುಗಡೆಗೆ ಮುಂಚೆಯೇ ಜನಪ್ರಿಯವಾಗಿದೆ.‌ ನೂರವತ್ತಕ್ಕೂ ಅಧಿಕ ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡಿದೆ. ಇಂತಹ ನನ್ನ ಕನಸಿಗೆ ಆಸರೆ ನೀಡಿದ್ದ ನಿರ್ಮಾಪಕರಿಗೆ ಧನ್ಯವಾದ. ನನ್ನ ಚಿತ್ರತಂಡಕ್ಕೆ ವಿಶೇಷ ಧನ್ಯವಾದ. ಈ ಚಿತ್ರದ ಹೆಚ್ಚು ಚಿತ್ರೀಕರಣ ರಾಮನಗರದ ಸ್ಮಶಾನದಲ್ಲಿ ನಡೆದಿದೆ.‌ ಅಲ್ಲಿ ಹೋಗಿ ಹಿರಿಯರ ಆಶೀರ್ವಾದ ಪಡೆದುಕೊಂಡು ಬಂದಿರುವುದಾಗಿ ನಿರ್ದೇಶಕ ಸಿದ್ದು ಪೂರ್ಣಚಂದ್ರ ತಿಳಿಸಿದರು.

ಈ ಚಿತ್ರದ ಕಥೆ ಕೇಳಿದ ದಿನವೇ ನಿರ್ಮಾಣ ಮಾಡಬೇಕೆಂದು ಮನಸು ಮಾಡಿದ್ದೆ. ನನ್ನ ಸ್ನೇಹಿತ ಪ್ರಶಾಂತ್ ವರ್ಕು ಅವರ ಮೂಲಕ ನಿರ್ದೇಶಕ ಸಿದ್ದು ಪೂರ್ಣಚಂದ್ರ ಪರಿಚಿತರಾದರು. ಉತ್ತಮ ಚಿತ್ರ ಮಾಡಿಕೊಟ್ಟಿದ್ದಕ್ಕೆ ಸಿದ್ದು ಅವರಿಗೆ ವಂದನೆ.. ನಮ್ಮ ಸಮಾರಂಭಕ್ಕೆ ಆಗಮಿಸಿರುವ ಗಣ್ಯರಿಗೆ ಧನ್ಯವಾದ. ಮೇ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಿರ್ಮಾಪಕ ಶರಣಪ್ಪ ಎಂ ಕೊಟಗಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಕಲಿ ಅಂಕಪಟ್ಟಿ ಪಡೆದ ಅರೋಪ:

Wed Apr 6 , 2022
    ಬೆಂಗಳೂರು, ಏ. 06: ಸಾಮಾಜಿಕ ಜಾಲ ತಾಣದ ಮೂಲಕ ಖ್ಯಾತಿ ಹೊಂದಿರುವ ವಕೀಲ ಜಗದೀಶ್ ಕೆ. ಎನ್. ಮಹದೇವ್ ವಿರುದ್ಧ ನಕಲಿ ಅಂಕ ಪಟ್ಟಿ ಪಡೆದ ಆರೋಪ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಐಪಿಎಸ್ ಅಧಿಕಾರಿ ಭ್ರಷ್ಟಾಚಾರ ವಿರುದ್ಧ ಸಮರ ಸಾರಿದ್ದ ಕೆ.ಎನ್. ಜಗದೀಶ್ ಸಿವಿಲ್ ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದರು. ಆ ಬಳಿಕ […]

Advertisement

Wordpress Social Share Plugin powered by Ultimatelysocial