ಶೋಕ್ದಾರ್ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್!

 

ಶೋಕ್ದಾರ್ ಧನ್ವೀರ್ ಗೌಡ ನಟನೆಯ ‘ವಾಮನ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ಸಿಕ್ಕಿದೆ. ಧನ್ವೀರ್ ಗೆ ನಾಯಕಿಯಾಗಿ ಯಾರು ಆಯ್ಕೆಯಾಗಲಿದ್ದಾರೆ ಎನ್ನುವ ಕುತೂಹಲದ ಪ್ರಶ್ನೆಗೆ ಚಿತ್ರತಂಡ ಉತ್ತರ ಸಿಕ್ಕಿದೆ.

ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ ಕೊಟ್ಟಿದ್ದಾರೆ.

ಈ ಹಿಂದೆ ತುಳು ಸಿನಿಮಾವೊಂದರಲ್ಲಿ ನಟಿಸಿದ್ದ ರಚನಾಗೆ ಇದು ಮೊದಲ ಕನ್ನಡ ಸಿನಿಮಾವಾಗಿದೆ. ತಮ್ಮ ಪಾತ್ರದ ಬಗ್ಗೆ ಹೆಚ್ಚೇನೂ ಗುಟ್ಟುಬಿಟ್ಟು ಕೊಡದ ರಚನಾ, ಬಬ್ಲಿ ಪಾತ್ರದ ಮೂಲಕ ಅಭಿಮಾನಿಗಳನ್ನು ರಂಜಿಸುವುದಾಗಿ ಹೇಳಿಕೊಂಡಿದ್ದಾರೆ. ಬ್ಯಾಡ್ಮಿಂಟನ್ ಫ್ಲೈಯರ್ ಆಗಿರುವ ಈ ತುಳುನಾಡ ಚೆಲುವೆ, ಮಾಡೆಲ್, ಡ್ಯಾನ್ಸರ್ ಹಾಗೇ ಬರಹಗಾರ್ತಿ ಕೂಡ. ಓ‌ ಮೈ ಡಾಗ್ ಎಂಬ ಪುಸ್ತಕ ಬರೆದಿರುವ ರಚನಾ ಸಕಲಕಲಾವಲ್ಲಭೆ.

ಸದ್ಯ ವಾಮನ ಸಿನಿಮಾದಲ್ಲಿ ಧನ್ವೀರ್ ಗೆ ನಾಯಕಿಯಾಗಿ ನಟಿಸ್ತಿರುವ ರಚನಾ ರೈ, ಈಗಾಗಲೇ ಸೆಕೆಂಡ್ ಶೆಡ್ಯೂಲ್ಡ್ ಶೂಟಿಂಗ್ ಕಂಪ್ಲೀಟ್ ಮಾಡಿದ್ದಾರೆ. ಈಕ್ವಿನಾಕ್ಸ್ ಗ್ಲೋಬಲ್ ಎಂಟರ್‌ಟೈನ್‌ಮೆಂಟ್‌ ನಡಿ ಮೂಡಿ ಬರ್ತಿರುವ ಮಾಸ್​ ಆಕ್ಷನ್ ಎಂಟರ್​ಟೇನರ್ ವಾಮನ ಸಿನಿಮಾಗೆ ಚೇತನ್ ಕುಮಾರ್ ಬಂಡವಾಳ ಹೂಡಿದ್ದು, ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸಂಭಾಷಣಾಗಾರನಾಗಿ ಕಾರ್ಯನಿರ್ವಹಿಸಿದ್ದ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಗರ್ಭಿಣಿ ಸಂಜನಾ ಗಲ್ರಾನಿ ಬೇಬಿ ಬಂಪ್ ಫೋಟೋಶೂಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್

Sat Apr 30 , 2022
  ಸಂಜನಾ ಗ್ರಲಾನಿ ತುಂಬಿ ಗರ್ಭಿಣಿ. ಹೀಗಿದ್ದರೂ, ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿದ್ದಾರೆ. ತಮ್ಮ ಖುಷಿಯ ಕ್ಷಣಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಲೇ ಇದ್ದಾರೆ. ಇತ್ತೀಚೆಗೆ ತಮ್ಮ ಬೇಬಿ ಬಂಪ್ ಫೋಟೊಶೂಟ್ ಅನ್ನು ಇನ್‌ಸ್ಟಾಗ್ರಾಂ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು. ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾ ಪಟ್ಟೆ ವೈರಲ್ ಆಗಿದೆ. ಸಂಜನಾ ಗಲ್ರಾನಿ ತೆಲುಗು ಹಾಗೂ ತಮಿಳಿನಿಂದ ಕರಿಯರ್ ಆರಂಭ ಮಾಡಿದ್ರೂ, ಕನ್ನಡ ಸಿನಿಮಾ ‘ಗಂಡ ಹೆಂಡತಿ’ ಚಿತ್ರದಲ್ಲಿ ಮೊದಲ […]

Advertisement

Wordpress Social Share Plugin powered by Ultimatelysocial