ಇಂದಿನಿಂದ ಜನವರಿ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19 ರಂದು ತಮಿಳುನಾಡು ಗಡಿ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ . ಜನವರಿ 22ರಂದು ಟೌನ್ಹಾಲ್ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಕರ್ನಾಟಕದ ಮೇಕೆದಾಟು ಯೋಜನೆಯನ್ನು ವಿರೋಧಿಸಬಾರದು. ಕಾಂಗ್ರೆಸ್ನವರು ಕೇಂದ್ರ ಹಾಗೂ ರಾಜ್ಯದಲ್ಲಿ ಡಿಎಂಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಬೇಕು. ರಾಜ್ಯ ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಮೇಕೆದಾಟು ವಿಷಯದಲ್ಲಿ ರಾಜಕೀಯ ಮಾಡಬಾರದು ಎಂದು ತಮಿಳುನಾಡಿನ ಸಿಎಂ ಸ್ಟಾಲಿನ್ ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada