10 ಸಚಿವರಿಗೆ ಕೊಕ್, ಹೊಸಬರಿಗೆ ಆದ್ಯತೆ;

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ನಂತರ ಸಂಪುಟ ಸರ್ಜರಿಗೆ ಪ್ರಕ್ರಿಯೆ ಆರಂಭವಾಗಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ವಾರದಲ್ಲಿ ಸಚಿವಾಕಾಂಕ್ಷಿಗಳ ಪಟ್ಟಿಯೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ತೆರಳಲಿದ್ದಾರೆ.

10 ಸಚಿವರನ್ನು ಸಂಪುಟದಿಂದ ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗುತ್ತದೆ. ಕ್ರಿಯಾಶೀಲವಾಗಿರುವ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುವುದು. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ಜಿಲ್ಲೆಗಳಿಗೆ ಆದ್ಯತೆ ನೀಡಲಾಗುತ್ತದೆ. ಎಲ್ಲಾ ವರ್ಗದವರಿಗೂ ಸಂಪುಟದಲ್ಲಿ ಸ್ಥಾನ ಸಿಗುವಂತೆ ನೋಡಿಕೊಳ್ಳಲಾಗುವುದು.

ಅಲ್ಲದೇ, ಸಂಪುಟ ಪುನಾರಚನೆ ಜೊತೆಗೆ ನಿಗಮ-ಮಂಡಳಿಗಳ ನೇಮಕಾತಿಗೂ ಚಾಲನೆ ನೀಡಲಾಗುವುದು ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏಪ್ರಿಲ್ ಅಂತ್ಯದೊಳಗೆ 12,000 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ತಮ್ಮದೇ ಆದ ಭೂಮಿಯನ್ನು ಪಡೆಯಲಿವೆ!

Mon Apr 4 , 2022
ಏಪ್ರಿಲ್ 2022 ರೊಳಗೆ ಸರ್ಕಾರಿ ಶಾಲೆಗಳ ಭೂ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕಂದಾಯ ಇಲಾಖೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಸ್ವಂತ ಜಮೀನು ಇಲ್ಲದ 12,500 ಶಾಲೆಗಳ ಹೆಸರಿಗೆ ಜಮೀನು ನೋಂದಣಿ ಮಾಡುವ ಉದ್ದೇಶವಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಈ ಪ್ರಕ್ರಿಯೆ ಪೂರ್ಣಗೊಳಿಸಲು ಆಂದೋಲನ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಪ್ರಸ್ತಾವನೆಯು ರಾಜ್ಯದಾದ್ಯಂತ 50,000 ಕ್ಕೂ ಹೆಚ್ಚು ಶಾಲೆಗಳಲ್ಲಿ ಸುಮಾರು 25 ಪ್ರತಿಶತವನ್ನು ಒಳಗೊಂಡಿದೆ. […]

Advertisement

Wordpress Social Share Plugin powered by Ultimatelysocial