ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ: ಅಧ್ಯಯನಕ್ಕೆ ನ್ಯಾಯಮೂರ್ತಿ ಅಧ್ಯಕ್ಷತೆಯಲ್ಲಿ ಆಯೋಗ

ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಕುರಿತು ಅಧ್ಯಯನ ನಡೆಸಲು ಸರ್ಕಾರವು ಪ್ರತ್ಯೇಕ ಆಯೋಗವನ್ನು ನ್ಯಾಯಮೂರ್ತಿ ಭಕ್ತವತ್ಸಲ ಅವರ ಅಧ್ಯಕ್ಷತೆಯಲ್ಲಿ ರಚಿಸಿದೆ.

ನಿವೃತ್ತ ಐಎಎಸ್ ಅಧಿಕಾರಿ ಸಿ.ಆರ್.

ಚಿಕ್ಕಮಠ ಅವರು ಈ ಆಯೋಗದ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಹಿಂದುಳಿದ ವರ್ಗಗಳಿಗೆ ಪಂಚಾಯತ್ ರಾಜ್ ಸಂಸ್ಥೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ಕಲ್ಪಿಸುವ ಕುರಿತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ಸೂಚನೆಯಂತೆ ಈ ಆಯೋಗ ರಚಿಸಲಾಗಿದೆ.

ಈ ಬಗ್ಗೆ ಮಾರ್ಚ್ 23 ಹಾಗೂ 31 ರಂದು ನಡೆದ ಸರ್ವಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೇಗಳಿಗೆ ಹಿಂದುಳಿದ ವರ್ಗಗಳಿಗೆ ಸೂಕ್ತ ಪ್ರಾತಿನಿಧ್ಯ ಕಲ್ಪಿಸಿಯೇ ಚುನಾವಣೆ ನಡೆಸುವ ಕುರಿತು ಚರ್ಚಿಸಲಾಗಿತ್ತು. ಅದರಂತೆ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ರಾಜಕೀಯ ಹಿಂದುಳಿದಿರುವಿಕೆಯನ್ನು ಗುರುತಿಸಿ, ಈ ಹಿಂದುಳಿದ ವರ್ಗಗಳಿಗೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಕಲ್ಪಿಸಲು ಅಧ್ಯಯನ ನಡೆಸಿ, ಶಿಫಾರಸು ಮಾಡಲು ಈ ಆಯೋಗವನ್ನು ರಚಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಧಾನಿಯಲ್ಲಿ ವಾಹನಗಳ ಸಂಖ್ಯೆ 1 ಕೋಟಿ; ಟ್ರಾಫಿಕ್‌ ಜಾಮ್‌ನಲ್ಲಿ ಸಿಲುಕಿಕೊಂಡ್ರೆ ದೇವ್ರೇ ಗತಿ!

Sun May 8 , 2022
  ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಸಾರ್ವಜನಿಕ ಸಾರಿಗೆ (Public Transport) ಬಳಿಸಿ ಅಂತ ಎಷ್ಟೇ ಪ್ರಚಾರಾಂದೋಲನ ಮಾಡಿದರೂ ಜನ ಕೇಳ್ತಿಲ್ಲ. ಮನೆಯಲ್ಲಿ ಇದ್ದವರ ಬಳಿಯೆಲ್ಲಾ ಎರಡು, ಮೂರು ವಾಹನ (Vehicles) ಇಟ್ಟಿಕೊಂಡಿದ್ದಾರೆ. ಹೀಗಾಗಿ ಹೆಚ್ಚಾಗ್ತಿರೋ ವಾಹನಗಳ ಸಂಖ್ಯೆ ಭವಿಷ್ಯದಲ್ಲಿ ಉಸಿರಾಡುವ ಗಾಳಿ (Breathing Air) ವಿಷಕಾರಿಯಾಗುವ (Poison) ಆತಂಕ ಇದೆ. ವಾಹನ ದಟ್ಟಣೆ (Traffic Jam) ತಗ್ಗಿಸಲು ನಮ್ಮ ಮೆಟ್ರೋ (Namma Metro) ಸಂಚಾರವನ್ನು ಆರಂಭಿಸಿದ್ರೂ ನಗರದಲ್ಲಿ […]

Advertisement

Wordpress Social Share Plugin powered by Ultimatelysocial