ಸಚಿವಾಲಯ ನೌಕರರ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ!

ಬೆಂಗಳೂರು,ಮೇ27- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ವಿಧಾನಸಭೆ ಸಚಿವಾಲಯದ ನೌಕರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸಚಿವಾಲಯದ ಶೇ.40ರಷ್ಟು ನೌಕರರು ಕರ್ತವ್ಯಕ್ಕೆ ಎಂದಿನಂತೆ ಹಾಜರಾಗಿದ್ದರೆ 60ರಷ್ಟು ನೌಕರರು ಕರ್ತವ್ಯಕ್ಕೆ ಗೈರುಹಾಜರಾಗಿದ್ದರು. ಹೀಗಾಗಿ ಸಚಿವಾಲಯದಲ್ಲಿ ಸಿಬ್ಬಂದಿ ಕೊರತೆ ಎದ್ದು ಕಾಣುತ್ತಿತ್ತು.

ಎಂದಿನಂತೆ ಕರ್ತವ್ಯಕ್ಕೆ ಹಾಜರಾಗುವ ನೌಕಕರಿಗೆ ಅಡ್ಡಿಪಡಿಸಿದರೆ ಅಂಥವರ ಮೇಲೆ ಕ್ರಿಮಿನಲ್ ಮೊಕದ್ದಮ್ಮೆ ದಾಖಲಿಸುವುದಾಗಿ ಹಾಗೂ ಶಿಸ್ತು ಕ್ರಮವ ಕೈಗೊಳ್ಳುವ ಎಚ್ಚರಿಕೆಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ನೀಡಿದ್ದರೂ ಕೆಲವರು ಗೈರು ಹಾಜರಾಗಿದ್ದರು. ಮೇಲಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಕಚೇರಿಗೆ ಗೈರು ಹಾಜರಾದರೆ ಲೆಕ್ಕಕ್ಕಿಲ್ಲದ ಅವಧಿ ಎಂದು ಪರಿಗಣಿಸುವುದಾಗಿ ತಿಳಿಸಿದರು.

ಅಲ್ಲದೆ ಸಚಿವಾಲಯದ ಬಂದ್ ಕರೆ ನೀಡಿರುವುದು ಕಾನೂನು ಬಾಹಿರವಾಗಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂಬ ಎಚ್ಚರಿಕೆಯನ್ನು ನೀಡಿ ಸಚಿವಾಲಯದ ಎಲ್ಲ ಅಧಿಕಾರಿ ಅಥವಾ ಸಿಬ್ಬಂದಿ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಸಚಿವಾಲಯದ 542 ಕಿರಿಯ ಸಹಾಯಕ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಸೇರಿದಂತೆ ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ಬೇಡಿಕೆಗಳನ್ನು ಈಡೇರಿಸಬೇಕೆಂದು ನೌಕರರ ಒತ್ತಾಯವಾಗಿದೆ.

ಕಂದಾಯ ಸಚಿವ ಆರ್.ಅಶೋಕ್ ಅವರ ಅಧ್ಯಕ್ಷತೆಯಲ್ಲಿ ರಚಿಸಿರುವ ಸಚಿವ ಸಂಪುಟ ಉಪ ಸಮಿತಿಯು ಅವೈಜ್ಞಾನಿಕವಾಗಿ ಶಿಫಾರಸು ಮಾಡಿರುವ ಅಂಶಗಳನ್ನು ಕೈ ಬಿಡುವುದು, ನಿವೃತ್ತ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅಧ್ಯಕ್ಷತೆಯಲ್ಲಿ ರಚಿಸಿರುವ ಆಡಳಿತಾ ಸುಧಾರಣಾ ಆಯೋಗದ 2ರಲ್ಲಿ ಸಚಿವಾಲಯದ ಕುರಿತು ನೀಡಿರುವ ಶಿಫಾರಸುಗಳು, ಸಚಿವಾಲಯಗಳಲ್ಲಿ ನಿಯೋಜನೆ/ ಅನ್ಯ ಕಾರ್ಯನಿಮಿತ್ತ ಕಾರ್ಯ ನಿರ್ವಹಿಸುತ್ತಿರುವವರನ್ನು ಕೂಡಲೇ ಮಾತೃ ಇಲಾಖೆಗೆ ಕಳುಹಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸಚಿವಾಲಯದ ಆಪ್ತ ಶಾಖೆಗಳಲ್ಲಿ ಆಪ್ತ ಕಾರ್ಯದರ್ಶಿ/ ಆಪ್ತಸಹಾಯಕರ ಸೇವೆಗಳನ್ನು ಹೊರತುಪಡಿಸಿ ಹೊರಗುತ್ತಿಗೆ ನೌಕರರ ಸೇವೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ನೌಕರರ ಸೇವೆಗಳನ್ನು ಸಚಿವ ಆಪ್ತ ಶಾಖೆಗಳಲ್ಲಿ ಕಡ್ಡಾಯವಾಗಿ ಬಳಸಿಕೊಳ್ಳುವುದು, ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿಯೇ ಇಲಾಖೆಗಳನ್ನು ತರುವುದು, ಬಹುಮಹಡಿ ಕಟ್ಟಡದ ಆವರಣದ ರಸ್ತೆಯನ್ನು ಸಾರ್ವಜನಿಕ ರಸ್ತೆಯನ್ನಾಗಿ ಮಾಡಿರುವ ಕ್ರಮವನ್ನು ರದ್ದುಗೊಳಿಸಬೇಕೆಂದು ಅವರು ಆಗ್ರಹಿಸಲಾಗಿದೆ.

ನಮ್ಮೆಲ್ಲಾ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಚೇರಿಗೆ ರಜೆ ಹಾಕಿ ಸಚಿವಾಲಯ ಬಂದ್ ಮಾಡುತ್ತೇವೆ. ಸರ್ಕಾರ ನೌಕರರ ವಿರೋಧ ದೋರಣೆಯನ್ನು ಕೈ ಬಿಡಬೇಕೆಂದು ಸಂಘದ ನೌಕರರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಫಾರೂಕ್ ಅಬ್ದುಲ್ಲಾಗೆ ಜಾರಿ ನಿರ್ದೇಶನಾಲಯ ಸಮನ್ಸ್

Fri May 27 , 2022
ನವದೆಹಲಿ, ಮೇ 27- ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಮೇ 31 ರಂದು ದೆಹಲಿಯ ಕಚೇರಿಗೆ ಹಾಜರಾಗುವಂತೆ ನ್ಯಾಷನಲ್ ಕಾನರೆನ್ಸ್ (ಎನ್‍ಸಿ) ಅಧ್ಯಕ್ಷ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೊಮ್ಮೆ ಸಮನ್ಸ್ ನೀಡಿದೆ. ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಸಂಸ್ಥೆ (ಜೆಕೆಸಿಎ) ಹಣಕಾಸು ಅಕ್ರಮಗಳ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿರುವ ಪ್ರಧಾನ ಕಚೇರಿಗೆ ಹಾಜರಾಗಲು ಸಮನ್ಸ್ ಜಾರಿ […]

Advertisement

Wordpress Social Share Plugin powered by Ultimatelysocial