11 ಐಎಎಸ್ ಅಧಿಕಾರಿಗಳ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ!

ಹನ್ನೊಂದು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಭಾನುವಾರ ರಾತ್ರಿ ಆದೇಶ ಹೊರಡಿಸಿದೆ. ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐ.ಎಸ್‌.ಎನ್‌.ಪ್ರಸಾದ್ ಅವರನ್ನು ಅಭಿವೃದ್ಧಿ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಬೆಂಗಳೂರು : 11 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಜನೀಶ್ ಗೋಯಲ್​ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ. ಐಎಸ್​ಎನ್ ಪ್ರಸಾದ್​ ಅಭಿವೃದ್ಧಿ ಆಯುಕ್ತರ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದಾರೆ.

ಉಮಾಶಂಕರ್ ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ರಶ್ಮಿ ವಿ.ಮಹೇಶ್- ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ, ಪಂಕಜ್ ಕುಮಾರ್ ಪಾಂಡೆ- ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆಯ ಕಾರ್ಯದರ್ಶಿಯಾಗಿ, ರಾಮ್ ಪ್ರಸಾದ್​ ಮನೋಹರ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರಾಗಿ ವರ್ಗಾಯಿಸಲಾಗಿದೆ.

ವಿನೋಥ್ ಪ್ರಿಯಾ- ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಎಂಡಿಯಾಗಿ, ರಮೇಶ್ ಡಿ.ಎಸ್ – ಗಣಿ ಹಾಗೂ ಭೂ ವಿಜ್ಞಾನ ಇಲಾಖೆಯ ನಿರ್ದೇಶಕರಾಗಿ, ಶರತ್.ಬಿ- ಕೃಷಿ ಇಲಾಖೆಯ ಆಯುಕ್ತರಾಗಿ, ಸತ್ಯಭಾಮರನ್ನು ಅತಿಸಣ್ಣ, ಸಣ್ಣ, ಮಧ್ಯಮ ಉದ್ಯಮ, ವಾಣಿಜ್ಯ ಹಾಗೂ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿ ಹಾಗೂ ಸೋಮಶೇಖರ್ ಎಸ್.ಜೆ. ಅವರನ್ನು ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಟ ಜಗ್ಗೇಶ್ ರನ್ನು ಅಭ್ಯರ್ಥಿಗಳನ್ನಾಗಿ ಘೋಷಿಸಿದ ಬಿಜೆಪಿ

Mon May 30 , 2022
  ಬೆಂಗಳೂರು: ಜೂನ್ 10 ರಂದು ನಡೆಯಲಿರುವ ಮುಂಬರುವ ರಾಜ್ಯಸಭಾ ಚುನಾವಣೆಗೆ ಕರ್ನಾಟಕದಿಂದ ಪಕ್ಷದ ಅಭ್ಯರ್ಥಿಗಳನ್ನಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಮತ್ತು ರಾಜಕಾರಣಿ ಜಗ್ಗೇಶ್ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್ ಭಾನುವಾರದಂದು ಘೋಷಿಸಿದೆ. ಕರ್ನಾಟಕದ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲು ಉತ್ತರ ಪ್ರದೇಶದಿಂದ ಸೀತಾರಾಮನ್ ಅವರನ್ನು ಕಣಕ್ಕಿಳಿಸಬಹುದು ಎಂಬ ಊಹಾಪೋಹಗಳ ನಡುವೆಯೇ ಈ ಘೋಷಣೆ ಹೊರಬಿದ್ದಿದೆ.ಕರ್ನಾಟಕದಲ್ಲಿನ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳ ಪೈಕಿ ಮೂರನ್ನು ಭದ್ರಪಡಿಸಿಕೊಳ್ಳಲು ಚರ್ಚೆ […]

Advertisement

Wordpress Social Share Plugin powered by Ultimatelysocial