ಸರ್ಕಾರಿ ಹುದ್ದೆ ಕಡಿತಕ್ಕೆ ಒತ್ತಾಯ,

ಬೆಂಗಳೂರು,ಏ.11- ಆಡಳಿತ ಸುಧಾರಣಾ ಆಯೋಗ ತನ್ನ ವರದಿಯಲ್ಲಿ ಸರ್ಕಾರಿ ಕ್ಷೇತ್ರದಲ್ಲಿನ ಕೆಲ ಹುದ್ದೆಗಳ ರದ್ದತಿಗೆ ಒತ್ತಾಯಿಸಿರುವುದರಿಂದ ನೇಮಕಾತಿ ಪ್ರಕ್ರಿಯೆಯಲ್ಲಿ ಮತ್ತಷ್ಟು ವಿಳಂಬವಾಗುವ ಸಾಧ್ಯತೆಯಿದೆ.

ಈಗ ಇರುವ ಸಿಬ್ಬಂದಿ ಮೇಲೆ ಒತ್ತಡ ಹೆಚ್ಚಾಗಿದ್ದು, ವಿಳಂಬದಿಂದ ನಾಗರಿಕ ಸೇವೆಗಳ ಮೇಲೆ ತೀವ್ರ ಪರಿಣಾಮ ಎದುರಾಗಲಿದೆ.

ಸುಮಾರು ಎರಡು ವರ್ಷಗಳ ನಂತರ ಇಲಾಖೆಗಳಲ್ಲಿ ಖಾಲಿಯಿರುವ ಅನೇಕ ಹುದ್ದೆಗಳ ಭರ್ತಿಗಾಗಿ ರಾಜ್ಯ ಸರ್ಕಾರ ನೇಮಕಾತಿಯನ್ನು ಆರಂಭಿಸಿತ್ತು. ಕೊರೊನಾ ಸಾಂಕ್ರಾಮಿಕ ಆದಾಯ ಸಂಗ್ರಹದಲ್ಲಿ ಬೀರಿದ ಪರಿಣಾಮ ಸೇರಿದಂತೆ ಅನೇಕ ಕಾರಣಗಳಿಂದ ಸರ್ಕಾರ ನೇಮಕಾತಿಯನ್ನು ಸ್ಥಗಿತಗೊಳಿಸಿತ್ತು. ಜನರೊಂದಿಗೆ ನೇರವಾಗಿ ವ್ಯವಹಾರಿಸುವ ಅನೇಕ ವಿಭಾಗಗಳು ಸೇರಿದಂತೆ ಅತ್ಯಂತ ಕಡಿಮೆ ಸಿಬ್ಬಂದಿಯಿಂದ ಕಾರ್ಯ ನಿರ್ವಹಿಸುತ್ತಿವೆ. ನೇಮಕಾತಿ ವಿಳಂಬದಿಂದಾಗಿ ಅನೇಕ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗಲಿದೆ.

7. 2 ಲಕ್ಷ ಹುದ್ದೆಗಳು ಮಂಜೂರಾದ ಹುದ್ದೆಗಳಲ್ಲಿ 2.6 ಲಕ್ಷ ಹುದ್ದೆಗಳು ಖಾಲಿ ಇವೆ. ಸಿಬ್ಬಂದಿ ಮೇಲೆ ಯಾವ ರೀತಿಯ ಒತ್ತಡವಿದೆ ಎಂಬುದನ್ನು ಯಾರು ಬೇಕಾದರೂ ಊಹಿಸಿಕೊಳ್ಳಬಹುದು. ಈ ಹಿಂದೆ ಕರೆಯಲಾದ 40, 000 ಹುದ್ದೆಗಳ ವಿಚಾರ ನ್ಯಾಯಾಲಯದ ಮುಂದಿದ್ದು, ಅದು ಅನುಮತಿ ನೀಡುವವರೆಗೂ ಹುದ್ದೆಗಳ ಭರ್ತಿಯಾಗಲ್ಲ ಎಂದು ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

15,000 ಶಾಲಾ ಶಿಕ್ಷಕರು, 1,200 ಸಹಾಯಕ ಪ್ರೊಫೆಸರ್, ಸುಮಾರು 1,500 ಎಂಜಿನಿಯರ್ ಮತ್ತು 2,000 ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಹುದ್ದೆಗಳ ಭರ್ತಿಗೆ ಕೆಪಿಎಸ್ ಸಿ ಮೂಲಕ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಕೆಲ ತಿಂಗಳ ಹಿಂದೆ ನೋಟಿಫಿಕೇಷನ್ ಹೊರಡಿತ್ತು.

ಆದರೆ, ಮಾಜಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್ ನೇತೃತ್ವದ ಆಡಳಿತ ಸುಧಾರಣಾ ಆಯೋಗ ಕೆಲ ಹುದ್ದೆಗಳ ರದ್ದತಿಗೆ ಶಿಫಾರಸ್ಸು ಮಾಡಿದ್ದು, ನೇಮಕಾತಿ ಮತ್ತಷ್ಟು ವಿಳಂಬವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ನಿವೃತ್ತಿ ಮತ್ತಿತರ ಕಾರಣಗಳಿಂದ ವಿವಿಧ ಅನೇಕ ಹುದ್ದೆಗಳು ಖಾಲಿಯಿದ್ದು, ಕಳೆದ ಎರಡು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ, ಆಡಳಿತ ಸುಧಾರಣಾ ಆಯೋಗದ ಶಿಫಾರಸ್ಸುಗಳು ಸರ್ಕಾರದ ನೇಮಕಾತಿ ಪ್ರಕ್ರಿಯೆ ಮೇಲೆ ಪರಿಣಾಮ ಬೀರಲಿಲ್ಲ. ನಾವು ನೇಮಕಾತಿ ಪ್ರಕ್ರಿಯೆಯನ್ನು ವಿಳಂಬಗೊಳಿಸಲ್ಲ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಬಿಎಸ್ವೈ

Mon Apr 11 , 2022
ಬೆಂಗಳೂರು,ಏ.11- ಅಕ್ರಮ ಭೂ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ತಮಗೆ ಜಾರಿಯಾಗಿರುವ ಸಮನ್ಸ್ ರದ್ದು ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ವಿಶೇಷ ಮೇಲ್ಮನವಿ ಸಲ್ಲಿಸಿರುವ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ಎಲ್ಲ ಪ್ರಕ್ರಿಯೆಗೆ ತಡೆ ನೀಡುವಂತೆ ಹಾಗೂ ಆ ಪ್ರಕರಣವನ್ನು ರದ್ದು ಮಾಡುವಂತೆ ಕೋರಿದ್ದಾರೆ. ವಿಶೇಷ ನ್ಯಾಯಾಲಯ ಏ.19ರಂದು ಖುದ್ದು ಹಾಜರಾಗುವಂತೆ ಹೊರಡಿಸಿರುವ ಸಮನ್ಸ್ ಕೂಡ ರದ್ದು ಮಾಡಬೇಕು ಎಂದು ಬಿಎಸ್ […]

Advertisement

Wordpress Social Share Plugin powered by Ultimatelysocial