ವಿಜಯ್ ರಾಘವೇಂದ್ರ ರೈತನ ಪಾತ್ರದಲ್ಲಿ ಕಾಣಿಸಿಕೊಂಡ ‘ಕಾಸಿನ ಸರ’; ಹರ್ಷಿಕಾ ಪೂಣಚ್ಛ ನಾಯಕಿ.

 

‘ಹೆಬ್ಬೆಟ್ ರಾಮಕ್ಕ’ ಖ್ಯಾತಿಯ ನಿರ್ದೇಶಕ ಎನ್.ಆರ್. ನಂಜುಂಡೇಗೌಡ ಅವರ ಸಾರಥ್ಯದ ‘ಕಾಸಿನಸರ ‘ಚಿತ್ರ ಮಾ.3ರ ಶುಕ್ರವಾರ ರಾಜ್ಯಾದ್ಯಂತ ತೆರೆಕಾಣುತ್ತಿದೆ. ವಿಜಯ ರಾಘವೇಂದ್ರ ಅವರು ( Vijay Raghavendra ) ಒಬ್ಬ ಪ್ರಗತಿಪರ ರೈತನಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ಹರ್ಷಿಕಾ ಪೂಣಚ್ಛ ನಾಯಕಿಯಾಗಿ ನಟಿಸಿದ್ದಾರೆ.ಗ್ರಾಮೀಣ ಸೊಗಡಿನಲ್ಲಿ ನಡೆಯುವ ಕೌಟುಂಬಿಕ ಸಂಬಂಧಗಳ ಸುತ್ತ ಹೆಣೆಯಲಾದ ಕಥಾಹಂದರ ಇರುವ ಈ ಚಿತ್ರದಲ್ಲಿ ಸಾವಯುವ ಕೃಷಿಯ ಬಗ್ಗೆ ಹೇಳಲಾಗಿದೆ. ಗ್ರಾಮೀಣ ಭಾಗದಿಂದಲೇ ಬಂದ ದೊಡ್ಡನಾಗಯ್ಯ ಅವರು ಈ ಚಿತ್ರ ನಿರ್ಮಾಣ ಮಾಡಿದ್ದಾರೆ.ನಾಯಕ ವಿಜಯ ವಿಜಯ್ ರಾಘವೇಂದ್ರ ಮಾತನಾಡಿ, “ಈ ಸಿನಿಮಾ ಹಲವಾರು ಅಂಶಗಳಿಂದ ಜನರಿಗೆ ಇಷ್ಟವಾಗುತ್ತದೆ. ಈ ಥರದ ಬದುಕೂ ಇದೆ, ಇದರ ಮೇಲೆ ನಮ್ಮ ಜೀವನ ಅವಲಂಬಿತವಾಗಿದೆ ಎಂದು ನಾಡಿನ ಜನರಿಗೆ ಹೇಳುವ ಚಿತ್ರ. ಈ ವಿಷಯವನ್ನು ನಿರ್ದೇಶಕ ರು ಎಮೋಷನಲ್ ಕಥೆಯೊಂದಿಗೆ ಹೇಳಹೊರಟಿದ್ದಾರೆ. ಕಾಸಿನಸರ ತುಂಬಾ ತೂಕವಾದ ಹೆಸರು, ಅದರ ಹಿಂದೆ ದೊಡ್ಡ ಶ್ರಮವಿದೆ. ಇಲ್ಲಿ ಕಾಸಿನಸರ ಎನ್ನುವುದು ಬರೀ ಒಡವೆಯಲ್ಲ. ಅದಕ್ಕೊಂದು ಒಳಾರ್ಥವಿದೆ. ಶ್ರೀಧರ್ ಸಂಭ್ರಮ್ ಅವರು ಭರಣಿಯ ಮಳೆ ಹೊಯ್ದು ಹಾಡನ್ನು ಅದ್ಭುತವಾಗಿ ಮಾಡಿದ್ದಾರೆ. ವೇಣು ಚಿತ್ರವನ್ನು ಅಷ್ಟೇ ಅದ್ಭುತವಾಗಿ ಸೆರೆಹಿಡಿದಿದ್ದಾರೆ. ಚಿತ್ರದಲ್ಲಿ ಸುಂದರೇಶ ಎಂಬ ವ್ಯವಸಾಯದ ಮೇಲೆ ಭರವಸೆ ಇಟ್ಟಿರುವ ರೈತ ಹೋರಾಟಗಾರನಾಗಿ ನಟಿಸಿದ್ದೇನೆ” ಎಂದರು.ನಾಯಕಿ ಹರ್ಷಿಕಾ ಪೂಣಚ್ಛ ಮಾತನಾಡಿ, “ಮೂರು ವರ್ಷದ ನಂತರ ನನ್ನ ಅಭಿನಯದ ಸಿನಿಮಾ ತೆರೆಗೆ ಬರ್ತಿದೆ. ಈ ಚಿತ್ರದಲ್ಲಿ ನಾನು ಕೃಷಿ ವಿದ್ಯಾರ್ಥಿನಿ ಸಂಪಿಗೆಯ ಪಾತ್ರ ಮಾಡಿದ್ದೇನೆ. ಗ್ರಾಜುಯೇಟ್‌ ಆದರೂ ಗಂಡನಿಗೆ ಸಪೋರ್ಟ್ ಆಗಿ ನಿಲ್ಲುವ ‌ಪಾತ್ರ. ಅಭಿನಯಕ್ಕೆ ಸಾಕಷ್ಟು ಪ್ರಾಮುಖ್ಯತೆ ಇರೋ ಪಾತ್ರ” ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಮಾನಸಿಕ ಆರೋಗ್ಯ ಸುಧಾರಿಸಲು ನಿಮ್ಮ ದೈನಂದಿನ ದಿನಚರಿಯಲ್ಲಿ ಪಾಲಿಸಿ ಈ ಸಲಹೆ,

Tue Feb 28 , 2023
ಮಾನಸಿಕ ಆರೋಗ್ಯವು ಒಟ್ಟಾರೆ ಯೋಗಕ್ಷೇಮದ ಅತ್ಯಗತ್ಯ ಅಂಶವಾಗಿದೆ. ಉತ್ತಮ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಕೆಲವು ಸಲಹೆಗಳು ಇಲ್ಲಿವೆ. ಸ್ವಯಂ-ಆರೈಕೆಯನ್ನು ಅಭ್ಯಾಸ ಮಾಡಿ: ವ್ಯಾಯಾಮ, ಧ್ಯಾನ, ಅಥವಾ ನೀವು ಆನಂದಿಸುವ ಏನನ್ನಾದರೂ ಮಾಡುವ ಸಮಯವನ್ನು ಕಳೆಯುವಂತಹ ಸ್ವಯಂ-ಆರೈಕೆ ಚಟುವಟಿಕೆಗಳಿಗೆ ಸಮಯವನ್ನು ಮೀಸಲಿಡಿ. ಇದು ಒತ್ತಡವನ್ನು ಕಡಿಮೆ ಮಾಡಲು ಮತ್ತು ನಿಮ್ಮ ಮನಸ್ಥಿತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಸಾಕಷ್ಟು ನಿದ್ರೆ ಪಡೆಯಿರಿ: ಪ್ರತಿ ರಾತ್ರಿ 7-8 ಗಂಟೆಗಳ ನಿದ್ದೆ ಮಾಡುವ ಗುರಿಯನ್ನು ಹೊಂದಿರಿ. ಸಾಕಷ್ಟು ನಿದ್ರೆ […]

Advertisement

Wordpress Social Share Plugin powered by Ultimatelysocial