ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ “wolf” ಚಿತ್ರಕ್ಕೆ ವಿಶೇಷ ಗೀತೆ ಹಾಡಿದ ವಿಜಯ್ ಸೇತುಪತಿ.

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ “wolf” ಚಿತ್ರಕ್ಕೆ ವಿಶೇಷ ಗೀತೆ ಹಾಡಿದ ವಿಜಯ್ ಸೇತುಪತಿ

ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ) ನಿರ್ಮಿಸಿರುವ, ಖ್ಯಾತ ನಟ ಪ್ರಭುದೇವ ನಾಯಕರಾಗಿ ನಟಿಸಿರುವ “wolf” ಚಿತ್ರದ ವಿಶೇಷ ಹಾಡೊಂದನ್ನು ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಹಾಡಿದ್ದಾರೆ. ಅಂಬರೀಶ್ ಈ ಚಿತ್ರದ ಸಂಗೀತ ನಿರ್ದೇಶಕರು.

ಇತ್ತೀಚೆಗಷ್ಟೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡಿ ಶುಭ ಕೋರಿದ್ದರು.

ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರ ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ.

ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಿತ್ರ ಬಿಡುಗಡೆಗೂ ಮುನ್ನ ಹಿರಿಯ ಕಲಾವಿದರನ್ನು ಸನ್ಮಾನಿಸಿದ ನಿರ್ಮಾಪಕರು .

Mon Feb 6 , 2023
ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ” ಬೆಂಗಳೂರು 69″ ಚಿತ್ರ ಇದೇ ಫೆಬ್ರವರಿ 10 ರಂದು ತೆರೆಗೆ ಬರುತ್ತಿದೆ. ಚಿತ್ರ ಬಿಡುಗಡೆಗೂ ಮುನ್ನ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಕನ್ನಡ ಚಿತ್ರರಂಗದ ಹಿರಿಯನಟರಾದ ಎಂ.ಎಸ್.ಉಮೇಶ್, ಬೆಂಗಳೂರು ನಾಗೇಶ್, ಹೊನ್ನವಳ್ಳಿ ಕೃಷ್ಣ, ಶೈಲಶ್ರೀ ಹಾಗೂ ಜಯಲಕ್ಷ್ಮಿ ಪಾಟೀಲ್ ಅವರನ್ನು ನಿರ್ಮಾಪಕ ಗುಲ್ಜರ್ ಜಾಕೀರ್ ಸನ್ಮಾನ ಮಾಡಿದರು. ಸನ್ಮಾನಿತರ ಪರವಾಗಿ ಮಾತನಾಡಿದ ಹಿರಿಯ ನಟ ಉಮೇಶ್, ಚಿತ್ರ ಬಿಡುಗಡೆ ಮಾಡುತ್ತಿರುವ ಈ ಸಂದರ್ಭದಲ್ಲಿ ನಮ್ನನ್ನು ನೆನಪಿಸಿಕೊಂಡು ಸನ್ಮಾನಿಸಿದ […]

Advertisement

Wordpress Social Share Plugin powered by Ultimatelysocial