ವಿಜಯನಗರ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್,

 

ವಿಜಯನಗರ: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಆನಂದ್ ಸಿಂಗ್, ಅಲ್ಪಸಂಖ್ಯಾತರು ಮುಗ್ದರು. ಅನಗತ್ಯವಾಗಿ ಅವರ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆನಂದ್ ಸಿಂಗ್, ಅಲ್ಪಸಂಖ್ಯಾತರು ಅಮಾಯಕರು, ಅವರಲ್ಲಿನ ಕೆಲ ಬುದ್ಧಿವಂತ ಲೀಡರ್ ಗಳು ಇವರನ್ನು ನಿಯಂತ್ರಿಸುತ್ತಿದ್ದಾರೆ.

ಕೆಲ ನಾಯಕರು ವೋಟ್ ಬ್ಯಾಂಕ್ ಗಾಗಿ ರಾಜಕೀಯ ಮಾಡುತ್ತಿದ್ದಾರೆ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಸ್ಲಿಂ ರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಲ್ಪಸಂಖ್ಯಾತರ ಅಮಾಯಕತೆಯನ್ನು ಬಳಸಿಕೊಂಡು ಜಾತಿ ವಿಷ ಬೀಜ ಬಿತ್ತಲಾಗುತ್ತಿದೆ. ಕಾಂಗ್ರೆಸ್ ನಾಯಕರು ಇಂತಹ ಕೆಲಸ ಮಾಡುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಯಾರೇ ಆಗಲಿ ಎಲ್ಲರೂ ಸಮಾನರು. ಸಂವಿಧಾನದ ಚೌಕಟ್ಟಿನಲ್ಲಿ ನಡೆಯಬೇಕು. ಅಮಾಯಕರನ್ನು ಹಿಡಿದುಕೊಂಡು ಗಲಾಟೆ ಮಾಡುವುದು ಸರಿಯಲ್ಲ ಎಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.

Thu Apr 21 , 2022
  ಬೆಂಗಳೂರು, ಏ. 21: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಅಫ್ಜಲ್‌ಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಗನ್‌ಮ್ಯಾನ್ ಆಗಿದ್ದ ಡಿಎಆರ್ ಪೊಲೀಸ್ ಪೇದೆಯನ್ನು ಸಿಐಡಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಇದರ ಜತೆಗೆ ಸಿಎಅರ್ ಪೇದೆ ರುದ್ರೇಗೌಡ ಎಂಬಾತ ಸಹ ಬಂಧನಕ್ಕೆ ಒಳಗಾಗಿದ್ದು, ನೀರಾವರಿ ಇಲಾಖೆಯ ಇಂಜಿನಿಯರ್ ಮನೆ ಮೇಲೆ ಸಿಐಡಿ ಪೊಲೀಸರು ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಅಫ್ಜಲ್‌ಪುರ […]

Advertisement

Wordpress Social Share Plugin powered by Ultimatelysocial