`ವಿಕ್ರಮ್’ ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಕಮಲ್ ಹಾಸನ್.

`

ವಿಕ್ರಮ್’ ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಕಮಲ್ ಹಾಸನ್ ಇದೀಗ `ಇಂಡಿಯನ್ 2′ ಚಿತ್ರವನ್ನ ಕೈಗೆತ್ತಿಕೊಂಡಿದ್ದಾರೆ. ಕಮಲ್ ಹಾಸನ್‌ಗೆ ರಾಕುಲ್ ಪ್ರೀತ್‌ ಸಿಂಗ್‌ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ.

ತಮಿಳಿನ `ವಿಕ್ರಮ್’ ಚಿತ್ರ ಇತ್ತೀಚೆಗೆ ಬಿಡುಗಡೆ ಆಗಿ ಕೋಟಿ ಕೋಟಿ ಕಲೆಕ್ಷನ್ ಮಾಡಿತ್ತು.

ಈ ಚಿತ್ರದ ಸಕ್ಸಸ್ ನಂತರ ಕಮಲ್ ಹಾಸನ್, ತಮ್ಮ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿಯಾಗಿದ್ದಾರೆ. ಸದ್ಯ ಕಮಲ್ ಎಸ್. ಶಂಕರ್ ನಿರ್ದೇಶನದ ಇಂಡಿಯನ್ 2 ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

ಇಂಡಿಯನ್ 2 ಚಿತ್ರದಲ್ಲಿ ಕಮಲ್ ಗೆ ನಾಯಕಿ ಯಾರು ಎಂಬುದರ ಬಗ್ಗೆ ಸಖತ್ ಚರ್ಚೆಯಾಗಿತ್ತು.ಅದಕ್ಕೀಗ ಉತ್ತರ ಸಿಕ್ಕಿದೆ. ನಟ ಕಮಲ್‌ಗೆ ನಾಯಕಿಯಾಗಿ ಬಹುಭಾಷಾ ನಟಿ ರಾಕುಲ್ ಪ್ರೀತ್ ಸಿಂಗ್ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ತಮ್ಮ ಪಾತ್ರದ ಬಗ್ಗೆ ನಟಿ ರಿಯಾಕ್ಟ್ ಮಾಡಿದ್ದಾರೆ.

‘ಇಂಡಿಯನ್ 2’ನಲ್ಲಿ ನಟಿಸಲು ಕಾಯುತ್ತಿದ್ದೇನೆ. ನಾನು ತುಂಬಾ ಲಕ್ಕಿ ಕಮಲ್ ಹಾಸನ್ ಅವರ ಜೊತೆ ನಟಿಸುವ ಅವಕಾಶ ಸಿಕ್ಕಿದೆ ಎಂದು ಮಾತನಾಡಿದ್ದಾರೆ. ಸಿನಿಮಾದಲ್ಲಿ ನಟಿಸುವ ಬಗ್ಗೆ ಅಧಿಕೃತವಾಗಿ ಆಂಗ್ಲ ಮಾಧ್ಯಮವೊಂದಕ್ಕೆ ರಾಕುಲ್ ಪ್ರತಿಕ್ರಿಯೆ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಆಸ್ತಿ ವಿಚಾರಕ್ಕೆ ಮಾವನನ್ನೇ ಚಾಕುವಿನಿಂದ ಇರಿದು ಕೊಂದ ಅಳಿಯ.

Sat Jan 21 , 2023
  ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ಅಳಿಯನೇ ಮಾವನನ್ನು ಭೀಕರವಾಗಿ 20 ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಸುಳ್ಳ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸುಳ್ಳದ ಗ್ರಾಮದ ಶಿವಪ್ಪ ಎಂಬಾತನ ಜೊತೆ ಆತನ ಅಳಿಯ ಆಸ್ತಿಯ ವಿಚಾರಕ್ಕೆ ಜಗಳ ತೆಗೆದಿದ್ದ. ಇದೇ ವೇಳೆ ಊರಿನಲ್ಲಿರುವ ಹಾಲಿನ ಕೇಂದ್ರದ ಮುಂದೆಯೇ ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಕೊಲೆ ಮಾಡಿದ್ದಾನೆ […]

Advertisement

Wordpress Social Share Plugin powered by Ultimatelysocial