ವಿಮಾನ ನಿಲ್ದಾಣಕ್ಕೆ ಬಿಎಸ್​ವೈ ಹೆಸರಿಡಿ

 

ಶಿವಮೊಗ್ಗದಲ್ಲಿ ನಿರ್ವಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡುವಂತೆ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.

ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಶಿವಮೊಗ್ಗ ಜನಪ್ರತಿನಿಧಿಗಳ ನಿಯೋಗ ಮನವಿ ಪತ್ರ ಅರ್ಪಿಸಿದೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಅಪಾರವಾಗಿದೆ. ಅವರ ಹೆಸರು ಉಳಿಯಲು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕಾಗಿದೆ.

ಈ ಬಗ್ಗೆ ಕೇಂದ್ರ ಸರ್ಕಾರದ ಜತೆ ಚರ್ಚೆ ನಡೆಸಿ ಎಂದು ಒತ್ತಾಯ ಮಾಡಿದರು. ಕೇಂದ್ರದ ಜತೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಡಿ.ಎಸ್. ಅರುಣ್ ಹಾಗೂ ಇತರರು ನಿಯೋಗದಲ್ಲಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೃದಯದಲ್ಲಿ ತೊಂದರೆ, ಜ್ವರ: ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್​ ಆಸ್ಪತ್ರೆಗೆ ದಾಖಲು

Fri Mar 11 , 2022
ಹೈದರಾಬಾದ್​: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ಅವರಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀವ್ರವಾದ ಜ್ವರ, ಹಾಗೂ ಹೃದಯದಲ್ಲಿ ಸ್ವಲ್ಪ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ. ಹೈದರಾಬಾದ್​ನ ಯಶೋದಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ವೈದ್ಯರು ಆಂಜಿಯೋಗ್ರಾಂ ಪರೀಕ್ಷೆ ನಡೆಸಿದ್ದಾಗಿ ವರದಿಯಾಗಿದೆ. ಕೆಸಿಆರ್​ ಹೃದಯದಲ್ಲಿ ಯಾವುದೇ ಬ್ಲಾಕ್​ಗಳು ಕಂಡು ಬಂದಿಲ್ಲ. ಇನ್ನು ಕೆಲವೇ ಹೊತ್ತಲ್ಲಿ ಸಿಟಿ ಸ್ಕ್ಯಾನ್​ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನೂ ಮಾಡಲಾಗುವುದು ಎಂದು ವೈದ್ಯ […]

Advertisement

Wordpress Social Share Plugin powered by Ultimatelysocial