ವೈರಸ್ ಆತಂಕ !

ಬೆಂಗಳೂರು : ರಾಜ್ಯದಲ್ಲಿ H3N2 ವೈರಸ್ ಪ್ರಕರಣಗಳು ಆತಂಕ ಹೆಚ್ಚಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಕ್ಲಿನಿಕಲ್ ಅಡಿಟ್ ನಡೆಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ.

ದೇಶದಲ್ಲಿ H3N2 ವೈರಸ್ ಸೋಂಕಿನ ಆತಂಕ ಹೆಚ್ಚಾಗಿದ್ದು, ಕರ್ನಾಟಕದ ಬಳಿಕ ಹರಿಯಾಣದಲ್ಲಿ H3N2 ವೈರಸ್ ಗೆ ಮತ್ತೊಂದು ಬಲಿಯಾಗಿದೆ.

ಈ ಮೂಲಕ ದೇಶದಲ್ಲಿ H3N2 ಗೆ ಬಲಿಯಾದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

H3N2 ವೈರಸ್ ನಿಂದ ಇಬ್ಬರು ಸಾವನ್ನಪ್ಪಿದ್ದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತಿದ್ದು, H3N2 ವೈರಸ್ ನ ಮೂಲ ಪತ್ತೆಗೆ ಕ್ಲಿನಿಕ್ ಆಡಿಟ್ ಗೆ ಮುಂದಾಗಿದೆ. ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ನಾಳೆಯಿಂದ ಕ್ಲಿನಿಕಲ್ ಆಡಿಟ್ ಆರಂಭಿಸಲಾಗಿದೆ. ದೇಶದಲ್ಲಿ ಈವರೆಗೆ 90 H3N2 ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಕ್ಲಿನಿಕಲ್ ಆಡಿಟ್ ನಡೆಸಿ ಸೋಂಕು ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ನಿರ್ಧರಿಸಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಈ ಸರ್ಕಾರಿ ನೌಕರರಿಗಿಲ್ಲ `ಆರೋಗ್ಯ ಸಂಜೀವಿನಿ ಯೋಜನೆ' ಭಾಗ್ಯ!

Sun Mar 12 , 2023
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿ, ಪರಿಷ್ಕೃತ ಆದೇಶವನ್ನು ಹೊರಡಿಸಿದೆ. ಆದರೆ ಹೈಕೋರ್ಟ್, ವಿಧಾನ ಮಂಡಲದ ನೌಕರರು ಸೇರಿದಂತೆ ಹಲವು ಇಲಾಖೆಯ ನೌಕರರಿಗೆ ಈ ಯೋಜನೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡಾವಳಿಯನ್ನು ಹೊರಡಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ […]

Advertisement

Wordpress Social Share Plugin powered by Ultimatelysocial