ಹಳ್ಳಿ ಹಕ್ಕಿ ‘ವಿಶ್ವನಾಥ್’ ಕಾಂಗ್ರೆಸ್ ಸೇರ್ಪಡೆಗೆ ಮಹೂರ್ತ ಫಿಕ್ಸ್…

ಬಿಜೆಪಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ (H.Vishwanath ) ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.ಕಳೆದ ವಿಧಾನಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ತೊರೆದು ಜೆಡಿಎಸ್ ತೊರೆದು ಶಾಸಕರಾಗಿ ಆಯ್ಕೆಯಾಗಿ ಸಮ್ಮಿಶ್ರ ಸರ್ಕಾರದ ಪತನದ ಸಮಯಲ್ಲಿ ಬಿಜೆಪಿ ಸೇರ್ಪಡೆಯಾಗಿ ಎಂಎಲ್ ಸಿ ಆಗಿರುವ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಇದೀಗ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ .ಈ ಕುರಿತು ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡಿದ್ದು ನನ್ನ ರಕ್ತವೇ ಕಾಂಗ್ರೆಸ್ ಎಂದಿದ್ದಾರೆ. ಉತ್ತರಾಯಣದಂದು ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ. ಅದಕ್ಕಾಗಿಯೇ ರಾಯರ ದರ್ಶನ ಪಡೆದಿದ್ದೇನೆ ಎಂದು ಹೇಳಿಕೆ ನೀಡಿದ್ದು, ಕಾಂಗ್ರೆಸ್ ಸೇರ್ಪಡೆ ಫಿಕ್ಸ್ ಆಗಿದೆ. ವಿಶ್ವನಾಥ್ ಅವರು ಇತ್ತೀಚೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದರು. ಹೆಚ್ ವಿಶ್ವನಾಥ್ ಅವರು ಏಕಾಏಕಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರವೇ ಸ್ಯಾಂಟ್ರೋ ರವಿ ಬಂಧನ,

Wed Jan 11 , 2023
  ಮೈಸೂರು: ಮೂಲತಃ ಮೈಸೂರಿನವನಾಗಿರುವ ಕೆ.ಎಸ್‌.ಮಂಜುನಾಥ್‌ ಅಲಿಯಾಸ್‌ ಸ್ಯಾಂಟ್ರೋ ರವಿ ವಿರುದ್ಧ ಈ ಹಿಂದೆ ಹಲವೆಡೆ ಪ್ರಕರಣ ದಾಖಲಾಗಿದೆ. ವೇಶ್ಯಾವಾಟಿಕೆ ದಂಧೆಯಲ್ಲಿ ಪಿಂಪ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಇದೆ ಎನ್ನಲಾಗುತ್ತಿದೆ. ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರ ಹಲವು ಪ್ರಕರಣಗಳಲ್ಲಿ ಪೊಲೀಸ್ ಇಲಾಖೆಗೆ ತಲೆನೋವಾಗಿರುವ ಸ್ಯಾಂಟ್ರೋ ರವಿ ವಿಚಾರ ಬಗೆದಷ್ಟೂ ವಿಸ್ತರಿಸಿಕೊಳ್ಳುತ್ತಿದೆ. ಸ್ಯಾಂಟ್ರೋ ರವಿ ಬಂಧನ ಆಗದೆ ಇರೋದು ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. […]

Advertisement

Wordpress Social Share Plugin powered by Ultimatelysocial