ವಿವಾಹಿತ ಪುರುಷರು ಈ 5 ಪದಾರ್ಥಗಳನ್ನು ತಿನ್ನಲೇಬೇಕು.

ನವದೆಹಲಿ: ನಿಮ್ಮ ದೈನಂದಿನ ಜೀವನಶೈಲಿ ಮತ್ತು ಆಹಾರ ಪದ್ಧತಿ ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವಿವಾಹಿತ ಪುರುಷರು ತಮ್ಮ ಆಹಾರದಲ್ಲಿ ಕೆಲವು ವಸ್ತುಗಳನ್ನು ಸೇರಿಸುವುದು ಮುಖ್ಯ. ಇವುಗಳು ಟೆಸ್ಟೋಸ್ಟೆರಾನ್ ಹಾರ್ಮೋನ್ ಹೆಚ್ಚಿಸುತ್ತವೆ ಮತ್ತು ಈ ವಸ್ತುಗಳ ಸೇವನೆಯು ಪುರುಷರಲ್ಲಿ ಶಕ್ತಿ ಹೆಚ್ಚಿಸುತ್ತವೆ.

ತಜ್ಞರ ಪ್ರಕಾರ ಪ್ರೋಟೀನ್ ಭರಿತ ವಸ್ತುಗಳನ್ನು ತಿನ್ನುವುದು ನಿಮಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ. ಇದು ಶಕ್ತಿಯ ಮಟ್ಟವನ್ನು ಕಾಯ್ದುಕೊಳ್ಳುತ್ತದೆ. ಇದಲ್ಲದೆ ವಿಟಮಿನ್ ಬಿ(Vitamin B), ವಿಟಮಿನ್ ಇ ಮತ್ತು ಸತುವು ಸಮೃದ್ಧವಾಗಿರುವ ಆಹಾರವನ್ನು ಸೇವಿಸುವು ನಿಮ್ಮ ಆರೋಗ್ಯ ದೃಷ್ಟಿಯಿಂದ ಒಳ್ಳೆಯದು.

ಬಾಳೆಹಣ್ಣು:

ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ವಿಟಮಿನ್ ಬಿ6 ಸಮೃದ್ಧವಾಗಿದೆ. ಬಾಳೆಹಣ್ಣಿನ ನಿಯಮಿತ ಸೇವನೆಯು ಪುರುಷರಲ್ಲಿ ಲೈಂಗಿಕ ಸಮಸ್ಯೆ(Men Sexual Health)ಗಳನ್ನು ನಿವಾರಿಸುತ್ತದೆ.

ಪಾಲಕ್ ಸೊಪ್ಪು:

ಪಾಲಕ್ ಸೊಪ್ಪಿನ ಸೇವನೆಯು ಸಹ ನಿಮಗೆ ಪ್ರಯೋಜನಕಾರಿಯಾಗಿದೆ. ಹಸಿರು ಎಲೆಗಳಲ್ಲಿ ಕಬ್ಬಿಣಂಶವು ಹೇರಳವಾಗಿ ಕಂಡುಬರುತ್ತದೆ. ಇದು ರಕ್ತ ಪರಿಚಲನೆ ಸುಧಾರಿಸುತ್ತದೆ.

ಬೆಳ್ಳುಳ್ಳಿ:

ಬೆಳ್ಳುಳ್ಳಿಯಲ್ಲಿ ವಿಟಮಿನ್-ಸಿ, ವಿಟಮಿನ್-ಬಿ 6, ರಂಜಕ, ಮ್ಯಾಂಗನೀಸ್, ಸತು, ಕ್ಯಾಲ್ಸಿಯಂ ಮತ್ತು ಕಬ್ಬಿಣಾಂಶವಿದೆ. ಈ ಎಲ್ಲಾ ಅಂಶಗಳನ್ನು ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಬೆಳ್ಳುಳ್ಳಿ ಸೇವನೆಯಿಂದ ರಕ್ತ ಪರಿಚಲನೆ ಹೆಚ್ಚುತ್ತದೆ. ಇದು ಟೆಸ್ಟೋಸ್ಟೆರಾನ್ ಹಾರ್ಮೋನ್ ಅನ್ನು ಹೆಚ್ಚಿಸಲು ಸಹ ಸಹಾಯ ಮಾಡುತ್ತದೆ.

ಒಣ ದ್ರಾಕ್ಷಿ:

ವಿವಾಹಿತ ಪುರುಷರಿಗೂ ಒಣದ್ರಾಕ್ಷಿ ಸೇವನೆಯು ತುಂಬಾ ಪ್ರಯೋಜನಕಾರಿಯಾಗಿದೆ. ಇದು ಟೆಸ್ಟೋಸ್ಟೆರಾನ್ ಹಾರ್ಮೋನ್ ಅನ್ನು ಹೆಚ್ಚಿಸುತ್ತದೆ ಮತ್ತು ಪುರುಷರಲ್ಲಿ ಲೈಂಗಿಕ ಸಮಸ್ಯೆಗಳನ್ನು ನಿವಾರಿಸುತ್ತದೆ. ಜೇನುತುಪ್ಪ ಮತ್ತು ಒಣದ್ರಾಕ್ಷಿಗಳನ್ನು ಸೇವಿಸಿ. ಇದರಿಂದ ತುಂಬಾ ಪ್ರಯೋಜನವಾಗಲಿದೆ.

ಒಣ ಖರ್ಜೂರ:

ಒಣ ಖರ್ಜೂರ ಸೇವನೆಯು ಪುರುಷರಲ್ಲಿ ಶಕ್ತಿಯನ್ನು ಹೆಚ್ಚಿಸುತ್ತದೆ. ಖರ್ಜೂರದಲ್ಲಿ ಅಮೈನೋ ಆಮ್ಲಗಳಿವೆ ಮತ್ತು ಇದರ ಸೇವನೆಯು ಲೈಂಗಿಕ ಆರೋಗ್ಯಕ್ಕೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

 

Please follow and like us:

Leave a Reply

Your email address will not be published. Required fields are marked *

Next Post

ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರ ₹25 ಕಡಿತ: ಜಾರ್ಖಂಡ್ ಸರ್ಕಾರ ಘೋಷಣೆ

Wed Dec 29 , 2021
ರಾಂಚಿ: ಸಹಾಯಧನ ನೀಡುವ ಮೂಲಕ ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್ ದರದಲ್ಲಿ ಪ್ರತಿ ಲೀಟರ್‌ಗೆ ₹25ರಷ್ಟು ಕಡಿತ ಮಾಡಲು ನಿರ್ಧರಿಸಲಾಗಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಿಸಿದ್ದಾರೆ. ದರ ಕಡಿತವು 2022ರ ಜನವರಿ 26ರಿಂದ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಈ ವಿಚಾರವಾಗಿ ಜಾರ್ಖಂಡ್ ಮುಖ್ಯಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದ್ದು, ‘ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು ಬಡವರು, ಮಧ್ಯಮ ವರ್ಗದ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರವು […]

Advertisement

Wordpress Social Share Plugin powered by Ultimatelysocial