ಡಿ.20 ರಿಂದ ದೇಶದ 6 ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯ

ಡಿಸೆಂಬರ್ 20 ರಿಂದ ಹೈ ರಿಸ್ಕ್ ದೇಶಗಳಿಂದ ಬರುವವರಿಗೆ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ.

ಒಮಿಕ್ರಾನ್ ಸೋಂಕು ಹೆಚ್ಚಳವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದ್ದು, ವಿದೇಶಿ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ.

ದೇಶದ 6 ಮುಖ್ಯ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯವಾಗಿದೆ. ಒಮಿಕ್ರಾನ್ ಸೋಂಕು ಕಾಣಿಸಿದ ಹಲವರು ಟ್ರಾವೆಲ್ ಹಿಸ್ಟರಿ ಹೊಂದಿದ್ದಾರೆ. ಇದೇ ಕಾರಣಕ್ಕೆ ವಿಮಾನ ನಿಲ್ದಾಣದಲ್ಲಿಯೇ ಸೋಂಕು ಪತ್ತೆಹಚ್ಚಲಾಗುವುದು. ಬೆಂಗಳೂರು, ಕೊಲ್ಕತ್ತಾ, ಮುಂಬೈ, ದೆಹಲಿ, ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಪರೀಕ್ಷೆ ಕಡ್ಡಾಯ ಮಾಡಲಾಗಿದೆ ಎಂದು ಕೇಂದ್ರ ವಿಮಾನಯಾನ ಸಚಿವಾಲಯ ತಿಳಿಸಿದೆ.

ಏರ್ ಸುವಿಧಾ ಪೋರ್ಟಲ್‌ನಲ್ಲಿ ವಿದೇಶಿ ಪ್ರವಾಸಿಗರು ನೋಂದಣಿ ಮಾಡಿಕೊಳ್ಳಬೇಕಿದೆ. ಅತಿ ಹೆಚ್ಚು ಸೋಂಕು ಇರುವ ದೇಶಗಳಿಂದ ಬರುವ ಪ್ರಯಾಣಿಕರಿಗೆ 14 ದಿನಗಳ ಕ್ವಾರೆಂಟೀನ್ ಕಡ್ಡಾಯವಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಮನೆಯಲ್ಲೇ ಸುಲಭವಾಗಿ ಚಾಕೊಲೇಟ್ ಕೇಕ್

Fri Dec 17 , 2021
ಕೇಕ್ ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅದರಲ್ಲೂ ಚಾಕೊಲೇಟ್ ಕೇಕ್ ಅಂದರೆ ಬಾಯಲ್ಲಿ ನೀರು ಬರುತ್ತೆ. ಈ ಬಾರಿ ಕ್ರಿಸ್ಮಸ್ ಪ್ರಯುಕ್ತ ನಿಮ್ಮ ಮನೆಯಲ್ಲಿ ಸ್ಪೆಷಲ್ ಆಗಿ ಚಾಕೊಲೇಟ್ ಕೇಕ್ ಮಾಡಿ. ಮೊದಲು ಒಂದು ಮಧ್ಯಮ ಗಾತ್ರದ ಕುಕ್ಕರ್ ತೆಗೆದುಕೊಳ್ಳಿ. ಅದನ್ನ ಗ್ಯಾಸ್ ಮೇಲೆ ಇಡಿ. ಉರಿ ಸಣ್ಣದಾಗಿರಲಿ. ಅದಕ್ಕೆ ಅರ್ಧ ಕಪ್ ಪುಡಿ ಉಪ್ಪು ಹಾಕಿ. ಪುಡಿ ಉಪ್ಪು ಹಾಕಿದ ಬಳಿಕ ಉಪ್ಪಿನ ಮೇಲೆ ರಂಧ್ರವಿರುವ ಸ್ಟೀಲ್ ತಟ್ಟೆಯಿಂದ […]

Advertisement

Wordpress Social Share Plugin powered by Ultimatelysocial