ಪ್ರದರ್ಶನಕ್ಕೆ ಸೀಮಿತವಾಯ್ತು ನೀರಿನ ಘಟಕ?

ಲಕ್ಷೇಶ್ವರ: ಪ್ರಯಾಣಿಕರಿಗೆ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರನ್ನು ಪೂರೈಸಬೇಕೆಂಬ ಉದ್ದೇಶದಿಂದ ಸರ್ಕಾರ ತಾಲ್ಲೂಕಿನ ಎಲ್ಲ ಕರ್ನಾಟಕ ಸಾರಿಗೆ ಬಸ್ ನಿಲ್ದಾಣದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳನ್ನು ತೆರೆದಿದೆ. ಆದರೆ ಅವುಗಳು ನಿರ್ವಹಣೆ ಕೊರತೆಯಿಂದ ಬಳಲುತ್ತಿವೆ.

ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನಿರ್ವಹಣೆ ಕೊರತೆಯಿಂದಾಗಿ, ಕೆಟ್ಟು ಹೋಗಿರುವ ಘಟಕಗಳ ದುರಸ್ತಿ ನಡೆಯದೇ ಘಟಕದ ಯಂತ್ರಗಳು ತುಕ್ಕು ಹಿಡಿದು ಸುತ್ತಲಿನ ಗಾಜುಗಳು ಕಾಣದಂತೆ ಆಗಿವೆ. ಪ್ರಯಾಣಿಕರು ಶುದ್ಧ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ.

ಹೌದು ಲಕ್ಷ್ಮೇಶ್ವರ ಪಟ್ಟಣದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಬಸ್ ನಿಲ್ದಾಣದಲ್ಲಿ ಬೇರೆ ಬೇರೆ ಗ್ರಾಮಗಳಿಂದ, ತಾಲೂಕು, ಜಿಲ್ಲೆಗಳ ಪ್ರಯಾಣಿಕರ ಆರೋಗ್ಯ ದೃಷ್ಟಿಯಲ್ಲಿ ಇಟ್ಟುಕೊಂಡು, ಸರ್ಕಾರವು ಶುದ್ಧ ನೀರಿನ ಘಟಕ ನಿರ್ಮಾಣ ಮಾಡಿದೆ. ಇದು ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದೆ. ಆದರೆ ಶುದ್ಧ ಕುಡಿಯುವ ನೀರಿನ ಘಟಕ ಪ್ರದರ್ಶನಕ್ಕೆ ನಿರ್ಮಾಣವಾಗಿದೆ.

ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿವೆ. ಆದರೆ ಇಲ್ಲಿಯವರೆಗೆ ಶಾಸಕರು ಆಗಲಿ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸದೆ ಇರುವುದು ಶೋಚನೀಯ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೆಆರ್‌ ಐಡಿಎಲ್‌ ಇಲಾಖೆಗೆ ಈ ಎರಡೂ ಇಲಾಖೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದರು. ನೋಡುವವರು ಇಲ್ಲ ಎಂಬಂತಾಗಿದೆ.

ಘಟಕಗಳ ನಿರ್ವಹಣೆ ಯಾರದ್ದು?

ಸಂಬಂಧಿಸಿದ ಅಧಿಕಾರಿಗಳಾಗಲಿ, ಅಭಿವೃದ್ಧಿ ಅಧಿಕಾರಿಗಳಾಗಲಿ, ಈ ಒಂದು ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಇದಕ್ಕೂ ನಮಗೂ ಸಂಬಂಧ ಇಲ್ಲ ಎನ್ನುವಂತೆ ಇದ್ದರೆ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಘಟಕಗಳು ಇಂದು ಹಾಳು ಕೊಂಪೆಯಾಗಿ ನಿಂತಿವೆ.

ಸರ್ಕಾರ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಖರ್ಚು ಮಾಡಿ ನೀರಿನಲ್ಲಿ ಹುಣಸೆ ತೊಳೆದ ಹಾಗೆ ಆಗಿದೆ. ಬೇಜವಾಬ್ದಾರಿ ತೋರುವ ಅಧಿಕಾರಿಗಳಿಗೆ ತಕ್ಕ ಪಾಠ ಕಲಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಜನರು ಲಕ್ಷೇಶ್ವರ ಸಾರಿಗೆ ವ್ಯವಸ್ಥಾಪಕರಿಗೆ ಮೂರು ವರ್ಷಯಾದರು ಯಾಕೆ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ ಆಗಿಲ್ಲ ಎಂದರೆ, ಪ್ರಯಾಣಿಕರು ಯಾರು ಉಪಯೋಗ ಮಾಡಲ್ಲ ಅದಕ್ಕೆ ಪ್ರಾರಂಭ ಆಗಲ್ಲ ಎನ್ನುತ್ತಾರೆ.

ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ನಿಷ್ಕಾಳಜಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಾಗಿದ್ದ ಅಧಿಕಾರಿಗಳು ಪ್ರಯಾಣಿಕರಿಗೆ ದಾರಿತಪ್ಪಿಸುತ್ತಿದ್ದಾರೆ.

ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.
ಶುದ್ಧ ಕುಡಿಯುವ ನೀರು ಸಿಗಲಾರದ ಕಾರಣ ಕೂಡಲೇ ಲಕ್ಷೇಶ್ವರ ಬಸ್ ನಿಲ್ದಾಣದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕ ಪ್ರಾರಂಭ ಮಾಡಬೇಕಾಗಿದೆ.

ಪರಮೇಶ ಎಸ್ ಲಮಾಣಿ, ‌ಸ್ಪೀಡ್ ನ್ಯೂಜ್ ಲಕ್ಷೇಶ್ವರ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಸಿದ್ಧ ಕಲಾ ನಿರ್ದೇಶಕ ಸುನಿಲ್ ಬಾಬು ಇನ್ನಿಲ್ಲ

Fri Jan 6 , 2023
  ಪ್ರಸಿದ್ಧ ಕಲಾ ನಿರ್ದೇಶಕ ಸುನಿಲ್ ಬಾಬು  ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಭಾರತದಾದ್ಯಂತ ಚಿತ್ರರಂಗದಲ್ಲಿ ಪ್ರಸಿದ್ಧ ಆರ್ಟ್ ಡೈರೆಕ್ಟರ್  ಆಗಿ ಗುರುತಿಸಿಕೊಂಡಿದ್ದ ಸುನಿಲ್ ಬಾಬು ಅವರಿಗೆ 50 ವರ್ಷ ವಯಸ್ಸಾಗಿತ್ತು. ಅವರು ಕೇರಳದ (Kerala) ಎರ್ನಾಕುಳಂನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರು ಮಲಯಾಳಂ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಚಿತ್ರರಂಗಗಳಲ್ಲಿ ಕೆಲಸ ಮಾಡಿ ಗುರುತಿಸಿಕೊಂಡಿದ್ದರು. ಬೆಂಗಳೂರು ಡೇಸ್, ಗಜನಿ, ಉರುಮಿಯಂತಹ ಸಿನಿಮಾಗಳಲ್ಲಿ ಕೆಲಸ ಮಾಡಿದ ಇವರು ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಅವರ […]

Advertisement

Wordpress Social Share Plugin powered by Ultimatelysocial