ಬೇಸಿಗೆ ಬಿಸಿಲಿನ ತಾಪ ಹೆಚ್ಚುತ್ತಿದ್ದಂತೆ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ

 

ನೀರಿನ ಸಮಸ್ಯೆಯೂ ತೀವ್ರಗೊಳ್ಳುತ್ತಿದೆ.

ಬಹುತೇಕ ಮಳೆಯಾಶ್ರಿತ ಪ್ರದೇಶವಾದ ತಾಲ್ಲೂಕಿನಲ್ಲಿ ತಾಪ ಹೆಚ್ಚುತ್ತಿದ್ದಂತೆ ನೀರಿನ ಮೂಲಗಳು ಬತ್ತಿ ಹೋಗುತ್ತಿವೆ.

ಕುಡಿಯುವ ನೀರಿಗಾಗಿ ಜನ ತೆರೆದ ಬಾವಿ ಹಾಗೂ ಕೊಳವೆಬಾವಿಗಳನ್ನು ಅವಲಂಬಿಸಿದ್ದಾರೆ. ಈಗಾಗಲೇ ಸಾಕಷ್ಟು ಕಡೆ ತೆರೆದ ಬಾವಿಗಳಲ್ಲಿ ನೀರು ಕಡಿಮೆಯಾಗಿದೆ. ಕೊಳವೆ ಬಾವಿಗಳು ಕೂಡ ಕೈಕೊಟ್ಟಿವೆ. ಹೀಗಾಗಿ ತಾಲ್ಲೂಕಿನ ಗಡಿ ಗ್ರಾಮಗಳ ಜನ-ಜಾನುವಾರುಗಳು ಕುಡಿಯುವ ನೀರಿಗಾಗಿ ಪಕ್ಕದ ಮಹಾರಾಷ್ಟ್ರಕ್ಕೆ ಗುಳೆ ಹೋಗುವ ಅನಿವಾರ್ಯತೆ ಎದುರಾಗಿದೆ.

‘ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಕಿರಗುಣವಾಡಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಕೊಳವೆಬಾವಿ ಅವಲಂಬಿಸಿದ್ದಾರೆ. ಆದರೆ ಎರಡು ಕೊಳವೆಬಾವಿಗಳು ಬತ್ತಿವೆ. ಇರುವ ಒಂದು ಕೊಳವೆ ಬಾವಿಯಲ್ಲಿ ಗಂಟೆಗೆ ಒಂದು ಕೊಡ ನೀರು ಬರುತ್ತಿದೆ. ಇದರಿಂದ ಇಡೀ ಊರಿನ ಜನ ಅಹೋರಾತ್ರಿ ಕೊಡ ನೀರಿಗಾಗಿ ಸರತಿಗಾಗಿ ನಿಲ್ಲಬೇಕಾಗಿದೆ’ ಎಂದು ಗ್ರಾಮದ ಜನ ಹೇಳುತ್ತಾರೆ.

‘ಪ್ರತಿ ವರ್ಷ ಬೇಸಿಗೆಯಲ್ಲಿ ನಮ್ಮ ಊರಿನ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಕಳೆದ ಎರಡು ತಿಂಗಳಿನಿಂದ ಸಮಸ್ಯೆ ಎದುರಿಸುತ್ತಿದ್ದೇವೆ. ಆದರೆ ಸಂಬಂಧಿಸಿದವರು ನಮ್ಮ ಊರಲ್ಲಿ ಒಂದು ಹೊಸ ಕೊಳವೆಬಾವಿ ತೋಡಲು ತಯಾರಿಲ್ಲ’ ಎಂದು ಗ್ರಾಮದ ಹಿರಿಯ ಜೀವಿ ಕೊಂಡಿಬಾರಾವ ಪಾಟೀಲ ಆಕ್ರೋಶ ಹೊರ ಹಾಕಿದ್ದಾರೆ.

‘ನಮಗೆ ಕುಡಿಯುವ ನೀರಿನ ಸಮಸ್ಯೆ ತುಂಬಾ ಕಾಡುತ್ತಿದೆ. ನಮ್ಮ ಮೂಲ ಕಸಬು ಜಾನುವಾರು ಸಾಕಾಣಿಕೆ. ಜಾನುವಾರುಗಳಿಗೆ ನೀರು ಸಿಗುವುದಿಲ್ಲ ಎಂದರೆ ನಾವು ಊರಲ್ಲಿ ಇರಲು ಆಗುವುದಿಲ್ಲ. ಹೀಗಾಗಿ ಅನೇಕ ರೈತ ಕುಟುಂಬಗಳು ಪಕ್ಕದ ಮಹಾರಾಷ್ಟ್ರದ ಕಬೀರವಾಡಿಗೆ ಗುಳೆ ಹೊರಟಿವೆ’ ಎಂದು ವೆಂಕಟರಾವ ಪಾಟೀಲ ಸಮಸ್ಯೆಯ ಗಂಭೀರತೆ ವಿವರಿಸಿದ್ದಾರೆ.

‘ಎರಡು ತಿಂಗಳಿನಿಂದ ಸಮಸ್ಯೆ ಪರಿಸಬೇಕು ಎಂದು ಒತ್ತಾಯಿಸಿ ಹಲವು ಸಲ ಮನವಿ ಸಲ್ಲಿಸಿದ್ದೇವೆ. ಅಧಿಕಾರಿಗಳು ಮಾಡುತ್ತೇವೆ, ನೋಡುತ್ತೇವೆ ಎಂದು ಹೇಳಿ ಜಾರಿಕೊಳ್ಳುತ್ತಿದ್ದಾರೆ’ ಎಂದು ಗ್ರಾಮಸ್ಥರು ದೂರಿದ್ದಾರೆ.

‘ಕಿರಗುಣವಾಡಿಯಲ್ಲಿ ಇರುವ ನೀರಿನ ಮೂಲ ಬತ್ತಿ ಹೋಗಿದೆ. ಒಂದು ಕೊಳವೆಬಾವಿಯಲ್ಲಿ ಮಾತ್ರ ನೀರು ಬರುತ್ತಿದೆ. ಅಲ್ಲಿ ಹೊಸ ಕೊಳವೆ ಬಾವಿ ಕೊರೆಯಲು ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ ನೀಡಿದ್ದಾರೆ. ಹೊಸ ಕೊಳವೆ ಬಾವಿಯಲ್ಲೂ ನೀರು ಸಿಗದೆ ಇದ್ದಾಗ ಆ ಊರಿಗೆ ಟ್ಯಾಂಕರ್ ವ್ಯವಸ್ಥೆ ಮಾಡುವುದು ಅನಿವಾರ್ಯವಾಗಲಿದೆ’ ಎಂದು ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ!

Wed Apr 27 , 2022
  ಮಂಡ್ಯ: ಪಕ್ಷೇತರ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಗೆ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಗನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯತ್ತ ಸುಮಲತಾ ಮುಖಮಾಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. ಮದ್ದೂರು ಕ್ಷೇತ್ರದಿಂದ ಅಭಿಷೇಕ್ ಅಂಬರೀಶ್ ಅವರನ್ನು ಅಖಾಡಕ್ಕೆ ಇಳಿಸಲು ಪ್ಲಾನ್ ಮಾಡಿರುವ ಸುಮಲತಾ, ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕಾಂಗ್ರೆಸ್, ಮದ್ದೂರಿನಿಂದ ಎಸ್.ಎಂ. ಕೃಷ್ಣ ಸಹೋದರನ ಮಗನಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದೆ. ಗುರುಚರಣ್ ಗೆ […]

Advertisement

Wordpress Social Share Plugin powered by Ultimatelysocial