“ವೆಡ್ಡಿಂಗ್ ಗಿಫ್ಟ್” ಚಿತ್ರದ ಹಾಡುಗಳ ಬಿಡುಗಡೆ !

 

ವಿಕ್ರಂಪ್ರಭು ನಿರ್ಮಿಸಿ ನಿರ್ದೇಶಿಸಿರುವ “ವೆಡ್ಡಿಂಗ್ ಗಿಫ್ಟ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಸುನೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.

ನಾನು ಹತ್ತೊಂಬತ್ತು ವರ್ಷದ ಹಿಂದೆ ರಾಜೇಂದ್ರ ಸಿಂಗ್ ಬಾಬು ಅವರ “ಲವ್” ಚಿತ್ರಕ್ಕೆ ಕೆಲಸ ಮಾಡಿದ್ದೆ. ಆನಂತರ ಬೇರೆ ಪುಣೆಯಲ್ಲಿ ವ್ಯಾಪಾರ ಮಾಡುತ್ತಿದ್ದೆ. ಈಗ ಮತ್ತೆ ಚಿತ್ರರಂಗಕ್ಕೆ ಬಂದು “ವೆಡ್ಡಿಂಗ್ ಗಿಫ್ಟ್” ಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದೇನೆ. ಕೆಲವು ಹೆಣ್ಣು ಮಕ್ಕಳು ಕಾನೂನನ್ನು ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದೇ ಕಥಾಹಂದರ. ಹಿರಿಯ ನಟಿ ಪ್ರೇಮ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಿಶಾಂತ್, ಸೋನು ಗೌಡ, ಅಚ್ಯುತಕುಮಾರ್, ಪವಿತ್ರ ಲೋಕೇಶ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈಗ ಹಾಡುಗಳ ಬಿಡುಗಡೆಯಾಗಿದೆ. ಮೇ ತಿಂಗಳನ್ನು‌ ಪ್ರಚಾರಕ್ಕೆ ಮೀಸಲಿಟ್ಟು, ಜೂನ್ ನಲ್ಲಿ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು ನಿರ್ಮಾಪಕ ಹಾಗೂ ನಿರ್ದೇಶಕ ವಿಕ್ರಂಪ್ರಭು.

ನಾನು ದುಡ್ಡಿಗಾಗಿ ಸಿನಿಮಾ ಮಾಡುವವಳಲ್ಲ. ಉತ್ತಮ ಕಥೆ ಇದ್ದರೆ ಮಾತ್ರ ಮಾಡುತ್ತೇನೆ.‌ ವಿಕ್ರಂಪ್ರಭು ಅವರು ಈ ಚಿತ್ರದ ಕಥೆ ಹೇಳಿದ ತಕ್ಷಣ ಮಾಡಬೇಕೆನಿಸಿತು. ಚಿತ್ರ ಚೆನ್ನಾಗಿ ಮೂಡಿಬಂದಿದೆ. ನಾಯಕನ ಪರ ವಕಾಲತ್ತು ವಹಿಸುವ ವಕೀಲೆಯಾಗಿ ಕಾಣಿಸಿಕೊಂಡಿದ್ದೀನಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ಹಿರಿಯ ನಟಿ ಪ್ರೇಮ.

ಸಮಾರಂಭಕ್ಕೆ ಆಗಮಿಸಿದ್ದ ಅತಿಥಿಗಳು ಶುಭ ಕೋರಿದರು. ಚಿತ್ರತಂಡದ ಸದಸ್ಯರು ತಮ್ಮ ಅನುಭವ ಹಂಚಿಕೊಂಡರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂಪುಟ ಸರ್ಜರಿಗೆ ವರಿಷ್ಠರಿಂದ ಅಂತಿಮ ಚಿತ್ರಣ,

Wed Apr 6 , 2022
  ಬೆಂಗಳೂರು,ಏ.6- ಕಳೆದ ಹಲವು ತಿಂಗಳಿನಿಂದ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿರುವ ಬಹುನಿರೀಕ್ಷಿತ ಸಚಿವ ಸಂಪುಟ ಪುನಾರಚನೆ/ವಿಸ್ತರಣೆಗೆ ಇಂದು ಅಂತಿಮ ಚಿತ್ರಣ ಸಿಗುವ ಸಾಧ್ಯತೆಯಿದ್ದು, ಹಾಲಿ ಸಚಿವರಿಗೆ ಎದೆಬಡಿತ ಹೆಚ್ಚಾಗಿದೆ. ಪದೇ ಪದೇ ಅಧಿಕಾರ ಅನುಭವಿಸಿರುವ ಕೆಲವು ಹಿರಿಯ ಸಚಿವರನ್ನು ಸಂಪುಟದಿಂದ ಕೈಬಿಟ್ಟು ಆರ್‍ಎಸ್‍ಎಸ್ ಮತ್ತು ಸಂಘಟನೆ ಹಿನ್ನೆಲೆಯುಳ್ಳವರಿಗೆ ಮಣೆ ಹಾಕಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿರುವುದರಿಂದ ಸಚಿವರು ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಇದೇ ಕಾರಣಕ್ಕೆ ಕೆಲವು ಸಚಿವರು ದೆಹಲಿಗೆ ತೆರಳಿದ್ದು, ಪಕ್ಷದ […]

Advertisement

Wordpress Social Share Plugin powered by Ultimatelysocial