ನಾಳೆ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯಲಿದೆ ಒಂದು ಸಾವಿರನೇ ಏಕದಿನ ಕ್ರಿಕೆಟ್‌ ಪಂದ್ಯ

ಭಾರತದ ಕ್ರಿಕೆಟ್‌ ತಂಡ ಈಗ ಐತಿಹಾಸಿಕ 1000ನೇ ಏಕದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ನಾಳೆ ಭಾನುವಾರ ವೆಸ್ಟ್‌ ಇಂಡೀಸ್‌ ವಿರುದ್ಧ ನಡೆಯಲಿದರುವ ಒಂದು ಸಾವಿರನೇ ಏಕದಿನ ಕ್ರಿಕೆಟ್‌ ಪಂದ್ಯ ಇದಾಗಿದೆ.ಒಂದು ಸಾವಿರ ಏಕದಿನ ಪಂದ್ಯಗಳನ್ನಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಟೀಂ ಇಂಡಿಯಾ ಪಾತ್ರವಾಗಿದೆ.ತಂಡದ ನಾಯಕತ್ವವನ್ನು ರೋಹಿತ್‌ ಶರ್ಮಾ ವಹಿಸಿಕೊಂಡಿದ್ದಾರೆ.ಮೋಟೇರಾದಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ತಂಡದ ಆಟಗಾರರು ನೆಟ್ಸ್‌ ಅಭ್ಯಾಸ ನಡೆಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ಒಳಗಾಗಿರುವ ತಂಡದ ಬ್ಯಾಟರ್‌ ಶಿಖರ್‌ ಧವನ್‌, ಶ್ರೇಯಸ್‌ ಅಯ್ಯರ್‌ ಮತ್ತು ಋತುರಾಜ್‌ ಗಾಯಕವಾಡ್‌ ಅವರನ್ನು ಪ್ರತ್ಯೇಕವಾಗಿರಿಸಲಾಗಿದೆ.1974ರಲ್ಲಿ ಭಾರತ ಮೊದಲ ಏಕದಿನ ಪಂದ್ಯವಾಡಿತ್ತು. ಅಂದು ಅಜಿತ್‌ ವಾಡೇಕರ್‌ ತಂಡವನ್ನು ಮುನ್ನಡೆಸಿದ್ದರು. ಈವರೆಗೆ ಟೀಂ ಇಂಡಿಯಾಗೆ ಒಟ್ಟು 26 ಆಟಗಾರರು ಏಕದಿನ ಪಂದ್ಯಗಳ ನಾಯಕತ್ವ ವಹಿಸಿಕೊಂಡಿದ್ದಾರೆ. ಸಾವಿರ ಪಂದ್ಯಗಳಲ್ಲಿ 200ಕ್ಕೂ ಹೆಚ್ಚು ಪಂದ್ಯಗಳಲ್ಲಿ ಎಂ.ಎಸ್‌. ಧೋನಿ ತಂಡವನ್ನು ಮುನ್ನಡೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ

Sat Feb 5 , 2022
ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ವರದಿ ಮಾಡಿರುವ ಎಎನ್‌ ಐ ಸುದ್ದಿ ಸಂಸ್ಥೆ, ಹಿರಿಯ ಗಾಯಕಿ ಲತಾ ಮಂಗೇಶ್ಕರ್‌ ಆರೋಗ್ಯ ಕ್ಷೀಣಿಸುತ್ತಿದೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ.ಅವರನ್ನು ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್‌ ಸಹಾಯದಲ್ಲಿ ಇರಿಸಲಾಗಿದೆ ಎಂದು ಬ್ರೀಚ್‌ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ, ಪ್ರತೀತ್‌ ಸಮದಾನಿ ತಿಳಿಸಿದ್ದಾರೆ.92 ವರ್ಷದ ಗಾಯಕಿಗೆ ಕೋವಿಡ್‌ ಸೋಂಕು ಪತ್ತೆಯಾದ ಬಳಿಕ […]

Advertisement

Wordpress Social Share Plugin powered by Ultimatelysocial