ಬೆಂಗಳೂರಿನ ಅಭಿವೃದ್ಧಿಗೆ ನೀಡಿದ ಕೊಡುಗೆ ಏನು, ಇಲ್ಲಿದೆ ಮಾಹಿತಿ

ಬೆಂಗಳೂರು, ಫೆಬವರಿ 17: ರಾಜ್ಯ ಬಿಜೆಪಿ ಸರ್ಕಾರದ ಬಜೆಟನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆಬ್ರವರಿ 17ರ ಶುಕ್ರವಾರ ಮಂಡಿಸಿದ್ದು, ಬೆಂಗಳೂರಿನ ಅಭಿವೃದ್ಧಿಗೆ ಭಾರೀ ಮೊತ್ತದ ಹಣವನ್ನು ನೀಡಿದ್ದಾರೆ.

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿರುವ ಸಿಎಂ ಬೊಮ್ಮಾಯಿ ಅವರು ವರ್ಗವಾರು ಹಣವಾನ್ನು ನೀಡಿದ್ದಾರೆ.

ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ 9,698 ಕೋಟಿ ರೂ. ಮೀಸಲು ಇಡಲಾಗಿದೆ. ಬೆಂಗಳೂರಿಗೆ ಜಾಗತಿಕ ಮಟ್ಟದ ಮೂಲಸೌಕರ್ಯ ಒದಗಿಸಲು ಸ್ಯಾಟಲೈಟ್‌ ಟೌನ್‌ ರಿಂಗ್‌ ರೋಡ್‌ ನಿರ್ಮಾಣ, 13,139 ಕೋಟಿ ರೂ. ವೆಚ್ಚದಲ್ಲಿ 5 ಕಿ.ಮಿ ಎಲಿವೇಟಡ್‌ ರಸ್ತೆ ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ. ಬೆಂಗಳೂರು ಟ್ರಾಫಿಕ್‌ ನಿಯಂತ್ರಣಕ್ಕೆ ಬರೋಬ್ಬರಿ 300 ಕೋಟಿ ಹಣವನ್ನು ನೀಡಿದ್ದಾರೆ. ಇದಲ್ಲದೆ 75 ಜಂಕ್ಷನ್‌ಗಳ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇದರೊಂದಿಗೆ ಕೆ.ಆರ್.ಪುರದ ಟಿನ್ ಫ್ಯಾಕ್ಟರಿಯಿಂದ ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿರುವ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಸಾರಿಗೆ ಸಮಸ್ಯೆ ಪರಿಹರಿಸಲು ಪ್ರಾಧಿಕಾರ ಸ್ಥಾಪನೆ ಮಾಡಲಾಗುವುದು. ಒಟ್ಟು 6000 ಕೋಟಿ ಮೊತ್ತದ ಯೋಜನೆಗಳಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಚರಂಡಿ ಕಲ್ವರ್ಟ್‌ಗಳ ಅಭಿವೃದ್ಧಿಗೆ ಕೋಟಿ ನೀಡಲಾಗಿದೆ. ಅಲ್ಲದೆ ಜಯದೇವ ಆಸ್ಪತ್ರೆ ಜೊತೆ 45 ಆಸ್ಪತ್ರೆಗಳ ಮ್ಯಾಪಿಂಗ್‌ಗೂ ಕೂಡ ಮಾಡಲಾಗುವುದು. ಇದಲ್ಲದೆ 438 ಹೊಸ ನಮ್ಮ ಕ್ಲಿನಿಕ್‌ ತೆರೆಯಲು ಆದ್ಯತೆ ನೀಡಲಾಗುವುದು. 5,500 ಕೋಟಿ ಅನುದಾನದೊಂದಿಗೆ ಬೆಂಗಳೂರಿನ 50 ಲಕ್ಷ ಜನರಿಗೆ ಕಾವೇರಿ ನೀರು ಪೂರೈಕೆ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ಆರ್ಥಿಕ ಅಭಿವೃದ್ಧಿಗೆ ಉತ್ತೇಜನೆ ವಲಯಕ್ಕೆ 2023-24ನೇ ಸಾಲಿಗೆ 61,488 ಕೋಟಿ ರೂ. ಗಳ ಅನುದಾನ ಒದಗಿಸಿದೆ. ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು ಆಗಿರುವುದರಿಂದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿಯ ಮೂಲಕ ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆಯನ್ನು ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೂ ನಮ್ಮ ಸರ್ಕಾರ ಆದ್ಯತೆ ನೀಡಿದೆ.

6,000 ಕೋಟಿ ವೆಚ್ಚದ ಯೋಜನೆ ಅನುಷ್ಠಾನ

ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6,000 ಕೋಟಿ ವೆಚ್ಚದ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಕಾಮಗಾರಿಗಳನ್ನು ಕಾರಿಡಾರ್ ಯೋಜನೆಯಡಿಯಲ್ಲಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ಪ್ರವಾಹವನ್ನು ತಪ್ಪಿಸಲು, ಒಟ್ಟು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ಗಳ ಅಭಿವೃದ್ಧಿಗಾಗಿ 1,813 ಕೋಟಿ ರೂ. ಗಳನ್ನು ಒದಗಿಸಲಾಗಿದೆ.

ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ

ಮುಂದಿನ 5 ವರ್ಷಗಳಲ್ಲಿ ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಗಳಾಗಿ (KIT) ಉನ್ನತೀಕರಿಸಲಾಗುವುದು. ಇದಕ್ಕಾಗಿ ಬೆಂಗಳೂರು, ಹಾವೇರಿ, ಹಾಸನ, ಕೆ.ಆರ್.ಪೇಟೆ, ರಾಮನಗರ ಹಾಗೂ ಕಾರವಾರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಗುರುತಿಸಲಾಗಿದೆ. ಆರು ವರ್ಷಗಳಲ್ಲಿ ರಾಜ್ಯ ಸರ್ಕಾರವು ಬೆಂಗಳೂರಿಗೆ 28,356 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು.

ಸಿದ್ದರಾಮಯ್ಯನವರ ಅವಧಿಯಲ್ಲಿ 9,791 ಕೋಟಿ

28 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಂಗಳುರು ನಗರಕ್ಕೆ 2016ರಿಂದ 2022 ರವರೆಗೆ ಬಿಡುಗಡೆಯಾದ ಅನುದಾನಗಳ ವಿಶ್ಲೇಷಣೆಯು ನಾಲ್ಕು ಬೇರೆ ಬೇರೆ ಮುಖ್ಯಮಂತ್ರಿಗಳ ಅಧಿಕಾರಾವಧಿಯಲ್ಲಿ ಬೆಂಗಳೂರು ದೊಡ್ಡ ಮೊತ್ತದ ಹಣವನ್ನು ಪಡೆದಿದೆ ಇತ್ತೀಚೆಗೆ ಬಿಡುಗಡೆಯಾದ ಅಂಕಿಅಂಶಗಳು ತಿಳಿಸಿದ್ದವು. ಸಿದ್ದರಾಮಯ್ಯನವರ ಅವಧಿಯಲ್ಲಿ ಬೆಂಗಳೂರು ಒಟ್ಟು 9,791 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು.

ಎಚ್‌ಡಿಕೆಯಿಂದ ಬೆಂಗಳೂರಿಗೆ 8,343 ಕೋಟಿ ರೂಪಾಯಿ

ಎಚ್ ಡಿ ಕುಮಾರಸ್ವಾಮಿ ಅವರು 14 ತಿಂಗಳು ಸಿಎಂ ಆಗಿದ್ದಾಗ ನವ ನಗರೋತ್ಥಾನ ಯೋಜನೆಯಡಿ ಬೆಂಗಳೂರಿಗೆ 8,343 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು. ಬಸವರಾಜ ಬೊಮ್ಮಾಯಿ ಅವರು ಆಡಳಿತ ಚುಕ್ಕಾಣಿ ಹಿಡಿದ ಸುಮಾರು ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರದಿಂದ ಬಿಬಿಎಂಪಿಗೆ 8,123 ಕೋಟಿ ರೂಪಾಯಿಗಳನ್ನು ನೀಡಿದ್ದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜಸ್ಥಾನದ ಅಜ್ಮೀರ್‌ನಲ್ಲಿ ಟ್ಯಾಂಕರ್-ಟ್ರಕ್ ಡಿಕ್ಕಿಯಾಗಿ ನಾಲ್ವರು ಸಜೀವ ದಹನ.

Fri Feb 17 , 2023
ಜೈಪುರ: ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ಮಾರ್ಬಲ್ ಸಾಗಿಸುತ್ತಿದ್ದ ಎಲ್‌ಪಿಜಿ ಟ್ಯಾಂಕರ್‌ಗೆ ಟ್ರಕ್‌ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ-8ರಲ್ಲಿ ಗುರುವಾರ ರಾತ್ರಿ ರಾಣಿ ಬಾಗ್ ರೆಸಾರ್ಟ್ ಬಳಿ ಅಪಘಾತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು. ಅಕ್ಕಪಕ್ಕದ ಅಂಗಡಿಗಳು ಮತ್ತು ಮನೆಗಳಿಗೆ ಬೆಂಕಿ ಆವರಿಸಿದ್ದು, ಭಾರೀ ಪ್ರಮಾಣದ ಆಸ್ತಿಪಾಸ್ತಿಗಳಿಗೆ ಹಾನಿಯಾಗಿದೆ. ‘ಅಪಘಾತದಲ್ಲಿ ನಾಲ್ವರು ಸಜೀವ ದಹನವಾಗಿದ್ದಾರೆ ಮತ್ತು […]

Advertisement

Wordpress Social Share Plugin powered by Ultimatelysocial