ಇನ್ಮೇಲೆ ವಾಟ್ಸಪ್‌ನಲ್ಲಿ ಈ ರೀತಿಯ ಸ್ಟೇಟಸ್‌ಗಳನ್ನು ಹಾಕುವಂತಿಲ್ಲ!

ನಿಮ್ಮ ಪ್ರೀತಿಪಾತ್ರರೊಂದಿಗೆ ಪ್ರತಿದಿನ ಚಾಟ್ಗಳು ಮತ್ತು ವೀಡಿಯೊ ಮತ್ತು ಆಡಿಯೊ ಕರೆಗಳ ಮೂಲಕ ಸಂಪರ್ಕದಲ್ಲಿರಲು WhatsApp ವೇಗವಾದ ಮಾಧ್ಯಮಗಳಲ್ಲಿ ಒಂದಾಗಿದೆ. ಜೊತೆಗೆ ಪ್ರೇಕ್ಷಕರನ್ನು ತೊಡಗಿಸಿಕೊಳ್ಳಲು ಮತ್ತು WhatsApp ವ್ಯಾಪಾರದಂತಹ ವೈಶಿಷ್ಟ್ಯಗಳ ಮೂಲಕ ಮಾರಾಟವನ್ನು ವೇಗಗೊಳಿಸಲು ಭಾರತದಲ್ಲಿ ಸುಮಾರು 550 ಮಿಲಿಯನ್ ಜನರು ವಾಟ್ಸಪ್ ಅನ್ನು ಬಳಸುತ್ತಾರೆ.ಹಾಗೇ ವಾಟ್ಸಪ್ ಕೂಡ ಪ್ರತೀ ಬಾರಿ ವಿಭಿನ್ನವಾದ ಅತ್ಯುತ್ತಮ ಫೀಚರ್ಸ್ ನೊಂದಿಗೆ ಬಳಕೆದಾರರನ್ನು ಆಕರ್ಷಿಸುತ್ತಿದೆ. ಅದರಲ್ಲೂ ವಾಟ್ಸಪ್ 2022 ರಲ್ಲಿ ಅಧಿಕ ನೂತನ ಫೀಚರ್ಸ್ ಗಳನ್ನು ಪರಿಚಯಿಸಿದ್ದು ಇನ್ನೂ ಕೂಡ 10 ರಿಂದ 15 ಅಪ್ಡೇಟ್​ಗಳು ಬಿಡುಗಡೆಗೆ ಸಜ್ಜಾಗುತ್ತಿದೆ.ಇನ್ಮೇಲೆ ವಾಟ್ಸಪ್ನಲ್ಲಿ ಈ ರೀತಿಯ ಸ್ಟೇಟಸ್ಗಳನ್ನು ಹಾಕುವಂತಿಲ್ಲ!ವಾಟ್ಸಪ್ ತನ್ನ ಬಳಕೆದಾರರಿಗೆ ಸ್ಟೇಟಸ್ ಬಗ್ಗೆ ರಿಪೋರ್ಟ್ ಮಾಡುವ ಆಯ್ಕೆಯನ್ನು ನೀಡಿದೆ. Wabetainfo ಪ್ರಕಾರ ನಿಮ್ಮ ಕಾಂಟೆಕ್ಟ್​ನಲ್ಲಿರುವ ವ್ಯಕ್ತಿಯು ಅಶ್ಲೀಲ ವಿಡಿಯೋ, ಹಿಂಸೆಯನ್ನು ಪ್ರಚೋದಿಸುವ ಯಾವುದೇ ವಿಷಯಗಳನ್ನು ಸ್ಟೇಟಸ್​ನಲ್ಲಿ ಶೇರ್ ಮಾಡಿದ್ದರೆ ಈ ಬಗ್ಗೆ ನೀವು ರಿಪೋರ್ಟ್ ಮಾಡಬಹುದಾಗಿದೆ. ಇದೀಗ ವಾಟ್ಸಪ್ ತನ್ನ ಡೆಸ್ಕ್ಟಾಪ್ ಆವೃತ್ತಿಯಲ್ಲಿ ಈ ವೈಶಿಷ್ಟ್ಯದ ಪರೀಕ್ಷೆ ನಡೆಸುತ್ತಿದೆ. ಅಲ್ಲದೆ ಬಳಕೆದಾರರು ಹೊಸ ಡಿವೈಸ್ಗಳಿಗೆ ಲಾಗಿನ್ ಮಾಡುವಾಗ ಭದ್ರತೆಯನ್ನು ನೀಡಲು ವಾಟ್ಸಪ್ ಯೋಜನೆ ರೂಪಿಸಿದೆ.ಹೊಸ ಪರಿಶೀಲನಾ ಕೋಡ್ ಇದು 6 ಅಂಕಿಯ ಕೋಡ್ ಆಗಿದ್ದು ಇದನ್ನು ನಮೂದಿಸುವ ಮೂಲಕ ಹೊಸ ಡಿವೈಸ್ನಲ್ಲಿ ಲಾಗಿನ್ ಆಗಬಹುದು ಎಂದು ತಿಳಿಸಿದೆ. ಹಾಗೂ ಈ ಕೋಡ್ ಪ್ರಾರ್ಥಮಿಕ ಡಿವೈಸ್ ಅಥವಾ ಮೊಬೈಲ್ಗೆ ಮಾತ್ರವೇ ರವಾನೆಯಾಗುತ್ತದೆ. ಈ ಮೊದಲು ವಾಟ್ಸಪ್ ಬಹು ಡಿವೈಸ್ಗಳಲ್ಲಿ ಒಂದೇ ಖಾತೆಯನ್ನು ಬಳಕೆ ಮಾಡುವ ಫೀಚರ್ಸ್ ಅನ್ನು ಪರಿಚಯಿಸಿತ್ತು. ಇದಾದ ಬಳಿಕವೇ ಭದ್ರತೆಯನ್ನು ಹೆಚ್ಚಿಸಲು ಈ ಸೌಲಭ್ಯವನ್ನು ಒದಗಿಸಿದೆ.ವಾಟ್ಸಪ್ ಆಕ್ಸಿಡೆಂಟಲ್ ಡಿಲೀಟ್ ಫೀಚರ್ ವಾಟ್ಸಪ್ ತನ್ನ ಬಳಕೆದಾರರಿಗೆ ಆಕ್ಸಿಡೆಂಟಲ್ ಡಿಲೀಟ್ ಫೀಚರ್ಸ್ ಅನ್ನು ಪರಿಚಯಿಸಿದೆ. ಚಾಟ್ ನಲ್ಲಿ ಕೆಲವೊಮ್ಮೆ ಆಕಸ್ಮಿಕವಾಗಿ ಡಿಲೀಟ್ ಫಾರ್ ಎವರಿಒನ್ ಮಾಡುವ ಬದಲು ಡಿಲೀಟ್ ಫಾರ್ ಮಿ ಎಂಬ ಆಯ್ಕೆಯನ್ನು ಬಳಸಿರುತ್ತೇವೆ. ಆದರೆ ಇನ್ನು ಮುಂದೆ ಹೀಗೆ ಆಗೋದಿಲ್ಲ ಯಾಕಂದ್ರೆ ನೀವು ಆಕಸ್ಮಿಕವಾಗಿ ಡಿಲೀಟ್ ಫಾರ್ ಮಿ ಆಯ್ಕೆ ಮಾಡಿ ಸಂದೇಶ ಡಿಲೀಟ್ ಮಾಡಿದರೆ ಈ ಹೊಸ ಫೀಚರ್ಸ್ ನಿಂದ ಅಲ್ಲಿಯೇ ಅಂಡೂ ಎಂಬ ಆಯ್ಕೆ ಕಾಣುವ ಮೂಲಕ ಈ ಆಕ್ಸಿಡೆಂಟಲ್ ಡಿಲೀಟ್ ಫೀಚರ್ಸ್ ನಿಮಗೆ ಸಹಕಾರಿಯಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಸ್ತಿ ಮೌಲ್ಯ 4 ಸಾವಿರ ಕೋಟಿ ರೂ. ಆಗಿದೆ,

Thu Jan 12 , 2023
ಕೊಪ್ಪಳ: ಯಾರನ್ನೂ ಹೆದರಿಸಿ ನಾನು ಹಣ ಹೊಡೆದಿಲ್ಲ, ಸ್ವಂತ ಶ್ರಮದಿಂದ ಆಸ್ತಿ ಗಳಿಸಿದ್ದೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಗಂಗಾವತಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿ, ಜೈಲಿನಲ್ಲಿ ಸಣ್ಣ ಕೊಠಡಿಯಲ್ಲಿ ನಾಲ್ಕು ವರ್ಷ ಕಳೆದಿದ್ದೇನೆ. ಯಾರಿಗೂ ಹೆದರುವುದಿಲ್ಲ. ಅಕ್ರಮ ಆಸ್ತಿ ಆರೋಪದಿಂದ ಮುಕ್ತನಾಗಿಯೇ ಉಸಿರು ಬಿಡುತ್ತೇನೆ ಎಂದು ಹೇಳಿದ್ದಾರೆ. ಸಿಬಿಐ ಅಧಿಕಾರಿಗಳು ನನ್ನನ್ನು ಬಂಧಿಸಿದ ವೇಳೆ […]

Advertisement

Wordpress Social Share Plugin powered by Ultimatelysocial