ಪತ್ನಿ ಕೊಲೆ ಮಾಡಿ ಮಂಚದ ಕೆಳಗೆ ಹೂತಿಟ್ಟಿದ್ದ ಕ್ರೂರಿ ಗಂಡ 24 ಗಂಟೆಯಲ್ಲೇ ಪ್ರಕಾರಣ ಪತ್ತೆ ಮಾಡಿದ ಪೋಲಿಸ್‌ ?

ಕೋಣನೂರು ಗ್ರಾಮದಲ್ಲಿ ಡಿ.25ರಂದು ಪತ್ನಿಯನ್ನು ಕೊಲೆ ಮಾಡಿ ಮಂಚದ ಕೆಳಗೆ ಹೂತಿಟ್ಟಿದ್ದ ಪ್ರಕರಣದ ಸಂಬಂಧ ಪತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೊಣನೂರು ಗ್ರಾಮದ ಆರ್. ನಾರಪ್ಪ (40) ಬಂಧಿತ  ಆರೋಪಿ. ಈತ ತನ್ನ ಪತ್ನಿಯಾದ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಬೆಣ್ಣೆಹಳ್ಳಿ ಗ್ರಾಮದ ಸುಮಾ (26) ಅವರನ್ನು ಕೊಲೆ ಮಾಡಿದ್ದಾನೆ

ಕೊಣನೂರು ಗ್ರಾಮದ ಆರ್. ನಾರಪ್ಪ ಬಂಧಿತ. ಈತ ತನ್ನ ಪತ್ನಿ ಸುಮಾ  ಅವರನ್ನು ಕೊಲೆ ಮಾಡಿದ್ದ.

ಶವ ಪತ್ತೆಯಾದ 24 ಗಂಟೆಯೊಳಗೆ ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರು ಆರೋ‍‍ಪಿಯನ್ನು ಬಂಧಿಸಿದ್ದಾರೆ. ಚಿತ್ರದುರ್ಗದ ಡಿವೈಎಸ್ಪಿ ತಂಡ ಆರೋಪಿಯನ್ನು ಹಜರು ಮಾಡಲು ಕೋಣನೂರು ಗ್ರಾಮಕ್ಕೆ ಕರೆತಂದಿತು. ಕೊಲೆ ಮಾಡಿದ ಸಂದರ್ಭದಲ್ಲಿ ಬಳಸಿದ ಪರಿಕರಗಳ ಮಾಹಿತಿ ಪಡೆದು ಆ  ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಆರೋಪಿಯನ್ನು ಪೊಲೀಸರು ಗ್ರಾಮಕ್ಕೆ ಕರೆತಂದಾಗ ಗ್ರಾಮಸ್ಥರು ಆರೋಪಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದರು. ಮರಣದಂಡನೆ ಜಾರಿಯಾಗಬೇಕು ಎಂದು ಮಹಿಳೆಯರು ಶಪಿಸುತ್ತಿದ್ದ ದೃಶ್ಯ ಕಂಡುಬಂತು. 24 ಗಂಟೆಯೊಳಗೆ ಬಂಧಿಸಿದ ಪೊಲೀಸರಿಗೂ ಮೆಚ್ಚುಗೆ ವ್ಯಕ್ತಪಡಿಸಿದರು.

ಸುಳಿವು ಕೊಟ್ಟ ಮಗ             

ಆರೋಪಿ ನಾರಪ್ಪ ಪತ್ನಿಯನ್ನು ಕೊಲೆ ಮಾಡಿ ಯಾರಿಗೂ ಗೊತ್ತಾಗದಂತೆ ಶವವನ್ನು ಮಂಚದ ಕೆಳಗೆ ಹೂತಿಟ್ಟ. ಮರುದಿನ ತನ್ನ 5 ವರ್ಷದ ಮಗ ನಾರದಮುನಿಯನ್ನು ಬೆಣ್ಣೆಹಳ್ಳಿಗೆ ಬಿಟ್ಟು ಹೋಗಿದ್ದ. ಆ ವೇಳೆ ಈತನ ತಾತ ಕರಿಯಪ್ಪ ಮೊಮ್ಮಗನನ್ನು ಪ್ರಶ್ನಿಸಿದಾಗ ‘ಅಪ್ಪ ಮನೆಯ ಒಳಗಡೆ ಸಿಮೆಂಟ್‍ ಕೆಲಸ ಮಾಡುತ್ತಿತ್ತು’ ಎಂದು ಹೇಳಿದ ವಿಷಯ ಅನುಮಾನ ಮೂಡಿತ್ತು. ಇದರಿಂದ ಅನುಮಾನಗೊಂಡು ಕರಿಯಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬಳಿಕ ಪೊಲೀಸರು ಆರೋ‍‍ಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

Shiva Rajkumar : ಅಮ್ಮನಿಗೆ ಅಡ್ಡ ಬಿದ್ದು ನಮಸ್ಕಾರ ಮಾಡಿದ ದೊಡ್ಮನೆ ಮಗ | Puneeth Rajkumar | Speed News |

Mon Jan 10 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial