ಮಹಿಳೆಯರ ಮೇಲೆ ಟ್ರಕ್‌ ಹರಿದು ಮೂವರ ಸಾವು..!!

ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನಾ ಸ್ಥಳದ ಬಳಿ ವೇಗವಾಗಿ ಬಂದ ಟ್ರಕ್ಕೊಂದು ಡಿವೈಡರ್ ಮೇಲೆ ಹರಿದ ಪರಿಣಾಮ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ನಡೆದಿದೆ. ಟ್ರಕ್ ಢಿಕ್ಕಿ ಹೊಡೆದಾಗ ಮಹಿಳೆಯರು ಡಿವೈಡರ್ ಮೇಲೆ ಕುಳಿತು ಆಟೋ ರಿಕ್ಷಾಕ್ಕಾಗಿ ಕಾಯುತ್ತಿದ್ದರು ಎನ್ನಲಾಗಿದೆ. ಅಪಘಾತದ ಸ್ಥಳದಿಂದ ಟ್ರಕ್ ಚಾಲಕ ಓಡಿಹೋಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಮಹಿಳೆಯರು ಪಂಜಾಬ್‌ನ ಮಾನ್ಸಾ ಜಿಲ್ಲೆಗೆ ಸೇರಿದವರು.

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಶ್ಮೀರದಲ್ಲಿ ಒಬ್ಬ ಉಗ್ರನ ಬಲಿ..!!

Thu Oct 28 , 2021
ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಚರಣೆಯಲ್ಲಿ ಒಬ್ಬ ಉಗ್ರ ಹತನಾಗಿದ್ದಾನೆ. ಬಾರಮುಲ್ಲಾ ಜಿಲ್ಲೆಯ ಚೆರ್ದಾರಿ ಪ್ರದೇಶದಲ್ಲಿ ಭದ್ರತಾ ಪಡೆಗಳು ಪಥಸಂಚಲನ ನಡೆಸುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳು ನಡೆಸಿದ ಪ್ರತಿದಾಳಿಗೆ ಓರ್ವ ಉಗ್ರ ಹತನಾಗಿದ್ದಾನೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial