ವೈ ಎಸ್ ವಿ ದತ್ತ ಕಾಂಗ್ರೆಸ್​ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ’ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಘೋಷಿಸಿದ್ದಾರೆ. ಕಡೂರು: ಕಾಂಗ್ರೆಸ್ ಪಕ್ಷದಿಂದ ಕರೆ ಬಂದಿದ್ದು, ಜನವರಿ 15ರ ಬಳಿಕ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಪಕ್ಷ ಸೇರುತ್ತೇನೆ’ ಎಂದು ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಘೋಷಿಸಿದ್ದಾರೆ.
ಕಡೂರು ತಾಲೂಕಿನ ಸ್ವಗ್ರಾಮ ಯುಗಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐವತ್ತು ವರ್ಷಗಳಿಂದ ಮಾಜಿ ಪ್ರಧಾನಿ ದೇವೇಗೌಡರು-ನನ್ನದು ತಂದೆ ಮಕ್ಕಳ ಸಂಬಂಧ ಆಗಿದೆ. ನಾನು ಎಲ್ಲೇ ಇದ್ದರೂ ಅವರ ಹಾರೈಕೆ ನನ್ನ ಮೇಲೆ ಇದ್ದೇ ಇರುತ್ತದೆ. ನನ್ನನ್ನ ವಿಧಾನ ಪರಿಷತ್ ಸದಸ್ಯನನ್ನಾಗಿ ಮಾಡಿದ್ದೇ ದೇವೇಗೌಡರು. ಅದು ನನ್ನ ರಾಜಕೀಯ ಜೀವನಕ್ಕೆ ಸಿಕ್ಕ ತಿರುವಾಗಿದೆ.
ಇದೀಗ ಅನಿವಾರ್ಯವಾಗಿ ಕಾಂಗ್ರೆಸ್ ಸೇರ್ಪಡೆ ಆಗುತ್ತಿದ್ದೇನೆ. ಇದನ್ನ ಅವರಿಗೆ ಹೇಳಲು ಒಂದು ರೀತಿ ಮುಜುಗರವಾಗುತ್ತದೆ. ಆದರೆ, ದೇವೇಗೌಡರು ನನ್ನ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂಬುದು ನನ್ನ ಭಾವನೆ ಆಗಿದೆ ಎಂದು ಹೇಳುವ ಮೂಲಕ ಭಾವುಕರಾದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿಳಿಗಿರಿ ರಂಗನ ಬೆಟ್ಟದಲ್ಲಿ ಬಿಜೆಪಿ ಬಾವುಟ ಕಟ್ಟಿ ಬೂತ್ ವಿಜಯ ಅಭಿಯಾನಕ್ಕೆ ಶಾಸಕ ಎನ್.ಮಹೇಶ್ ಚಾಲನೆ...

Fri Jan 6 , 2023
ಯಳಂದೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾ ಸ್ಥಳವಾದ ಬಿಳಿಗಿರಿ ರಂಗನಬೆಟ್ಟದ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋಲಿಗರ ಕಾಲೋನಿಗಳಿಗೆ ತೆರಳಿ ಶಾಸಕ ಎನ್.ಮಹೇಶ್ ರವರು ಪಿ ಬಿಜೆಪಿ ಬಾವುಟ ಕಟ್ಟುವ ಮೂಲಕ ಬೂತ್ ವಿಜಯ ಅಭಿಯಾನದ ಬಗ್ಗೆ ತಿಳಿಸಿದರು…… ನಂತರ ಶಾಸಕ ಎನ್.ಮಹೇಶ್ ಮಾತನಾಡಿ ವಿಧಾನಸಭೆಯ ಮುಂದಿನ ಚುನಾವಣೆಯಲ್ಲಿ ಮಿಷನ್‌ 150 ಗುರಿ ಸಾಧಿಸಲು ಬಿಜೆಪಿ ರಾಜ್ಯವ್ಯಾಪಿ ಹಮ್ಮಿಕೊಂಡಿರುವ ‘ಬೂತ್ ವಿಜಯ’ ಅಭಿಯಾನವು ಇದೇ ತಿಂಗಳ 12 ರವರೆಗೆ ನಡೆಯಲಿದೆ…… ಇಂದು ಬಿಳಿಗಿರಿ […]

Advertisement

Wordpress Social Share Plugin powered by Ultimatelysocial