ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ !

 

ಶಿವಮೊಗ್ಗ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಕೆಲವು ದಿನಗಳಿಂದ ಮತ್ತೆ ಮುನ್ನೆಲೆಗೆ ಬಂದಿದ್ದು, ಅಲ್ಲಲ್ಲಿ ಈ ಕುರಿತ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಇಂದು ಶಿಕಾರಿಪುರದಲ್ಲಿ ಮಾತನಾಡಿರುವ ಅವರು, ರಾಜ್ಯದ ರಾಜಕೀಯ ಪರಿಸ್ಥಿತಿ ತಿಳಿದುಕೊಳ್ಳಲು ಆಗಮಿಸುತ್ತಿರುವ ಅಮಿತ್ ಷಾ ಅವರನ್ನು ಇಂದು ಸಂಜೆ ಭೇಟಿ ಮಾಡಲಿದ್ದೇನೆ ಎಂದ ಅವರು, ಇನ್ಮುಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ರಾಜ್ಯದ ಬಗ್ಗೆ ಹೆಚ್ಚು ಗಮನ ಕೊಡಲಿದ್ದಾರೆ ಎಂಬುದಾಗಿ ಹೇಳಿದರು.

ರಾಜ್ಯದಲ್ಲಿ ನಾವು 150 ಕ್ಷೇತ್ರ ಗೆಲ್ಲುವ ಗುರಿ ಹೊಂದಿದ್ದೇವೆ. ಈ ಗುರಿ ತಲುಪಲು ಬೇಕಾದ ಸಲಹೆಯನ್ನು ಅಮಿತ್ ಷಾ ನೀಡಲಿದ್ದಾರೆ. ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದ ಬಿಎಸ್​ವೈ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಹೇಳಿಕೆ ಕುರಿತಾಗಿ ಪ್ರತಿಕ್ರಿಯಿಸಲು ನಿರಾಕರಿಸಿದ್ದು, ಆ ಬಗ್ಗೆ ನಾನು ಚರ್ಚೆ ಮಾಡುವುದಿಲ್ಲ ಎಂದರು. ಆದರೆ ಹಾಲಿ ಶಾಸಕರಿಗೆ ಟಿಕೆಟ್ ನೀಡುವುದು ಬಿಡುವುದು ಕೇಂದ್ರ ನಾಯಕರಿಗೆ ಬಿಟ್ಟಿದ್ದು ಎಂದ ಯಡಿಯೂರಪ್ಪ, ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂಬುದನ್ನು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರತಿದಿನ ಬಿಯರ್ ಕುಡಿಯುವುದರಿಂದ ಆಗುವ ಪ್ರಯೋಜಗಳೇನು ಗೊತ್ತಾ..?

Mon May 2 , 2022
  ಪಾನೀಯಗಳ ಸೇವನೆಯು ನಮ್ಮ ದೇಹಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಈ ಪಾನೀಯಗಳಲ್ಲಿ ಬಿಯರ್ ಕೂಡ ಒಂದು. ಇಂದು ಹುಡುಗ, ಹುಡುಗಿಯರು ಎಲ್ಲರೂ ಬಿಯರ್ ಕುಡಿಯುತ್ತಾರೆ. ಬಿಯರ್ ಕುಡಿಯುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ. ಬಿಯರ್ ತಯಾರಿಸಲು ಹಣ್ಣು ಮತ್ತು ಧಾನ್ಯದ ರಸವನ್ನು ಬಳಸಲಾಗುತ್ತದೆ. ಅದರಲ್ಲಿ ಅಲ್ಪ ಪ್ರಮಾಣದ ಆಲ್ಕೋಹಾಲ್ ಅನ್ನು ಸೇರಿಸಲಾಗುತ್ತದೆ. ಆ ದಾಗ್ಯೂ, ಅತಿಯಾದ ಸೇವನೆಯನ್ನು ತಪ್ಪಿಸಬೇಕು. ಪ್ರತಿದಿನ 1 ಬಿಯರ್ ಸೇವಿಸಿದರೆ, […]

Advertisement

Wordpress Social Share Plugin powered by Ultimatelysocial